Indiatogether ಎಂದು ಟ್ವೀಟ್​ ಮಾಡಿದ ಸೆಲೆಬ್ರಿಟಿಗಳ ವಿರುದ್ಧ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶ

ಸೆಲೆಬ್ರಿಟಿಗಳು ಮಾಡಿದ ಬಹುತೇಕ ಎಲ್ಲಾ ಟ್ವೀಟ್​ಗಳು ಒಂದೇ ರೀತಿ ಇದ್ದವು. ಅಲ್ಲದೆ, ಎಲ್ಲವನ್ನೂ ಒಂದೇ ಸಮಯದಲ್ಲಿ ಪೋಸ್ಟ್​ ಮಾಡಲಾಗಿತ್ತು. ಇದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ ಎಂಬುದು ಮಹಾರಾಷ್ಟ್ರ ಸರ್ಕಾರದ ಆರೋಪ.

Indiatogether ಎಂದು ಟ್ವೀಟ್​ ಮಾಡಿದ ಸೆಲೆಬ್ರಿಟಿಗಳ ವಿರುದ್ಧ ತನಿಖೆಗೆ ಮಹಾರಾಷ್ಟ್ರ ಸರ್ಕಾರ ಆದೇಶ
ಅಕ್ಷಯ್​ ಕುಮಾರ್
Edited By:

Updated on: Feb 08, 2021 | 10:07 PM

ಮುಂಬೈ: ರೈತರ ಪ್ರತಿಭಟನೆ ವಿಚಾರದಲ್ಲಿ ಟ್ವೀಟ್​ ಮಾಡಿದ ಮಾಜಿ ಕ್ರಿಕೆಟಿಗ ಸಚಿನ್​ ತೆಂಡೂಲ್ಕರ್​, ನಟ ಅಕ್ಷಯ್​ ಕುಮಾರ್​, ಸುನಿಲ್​ ಶೆಟ್ಟಿ, ಗಾಯಕಿ ಲತಾ ಮಂಗೇಶ್ಕರ್​ ಈಗ ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ಇವರು ಮಾಡಿದ ಟ್ವೀಟ್​ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ತನಿಖೆಗೆ ಆದೇಶಿಸಿದೆ. ಇವರಿಗೆ ಯಾರಾದರೂ ಟ್ವೀಟ್​ ಮಾಡುವಂತೆ ಒತ್ತಾಯ ಮಾಡಿದ್ದಾರಾ ಅಥವಾ ಈ ಟ್ವೀಟ್​ ಮಾಡುವುದರ ಹಿಂದೆ ಯಾವುದಾದರೂ ದುರುದ್ದೇಶ ಇದೆಯೇ ಎಂಬುದರ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ.

ರೈತರ ಪ್ರತಿಭಟನೆ ವಿಚಾರದಲ್ಲಿ ವಿದೇಶದವರು ಕೆಲವರು ಟ್ವೀಟ್​ ಮಾಡಿ ಪ್ರಧಾನಿ ನರೇಂದ್ರ ಮೋದಿ ಅವರ ನಡೆಯನ್ನು ಖಂಡಿಸಿದ್ದರು. ಈ ವಿಚಾರದ ಬಗ್ಗೆ ಚರ್ಚೆ ಜೋರಾಗುತ್ತಿದ್ದಂತೆ, Indiatogether ಹ್ಯಾಶ್​ಟ್ಯಾಗ್​ ಅಡಿಯಲ್ಲಿ ಕ್ರಿಕೆಟಿಗರು, ಬಾಲಿವುಡ್​ ಮಂದಿ, ಗಾಯಕರು ಟ್ವೀಟ್​ ಮಾಡಲು ಆರಂಭಿಸಿದ್ದರು. ಈ ಮೂಲಕ ಮೋದಿ ಸರ್ಕಾರ ನಿರ್ಧಾರವನ್ನು ಬೆಂಬಲಿಸಿದ್ದರು.

ಇಲ್ಲಿ ಗಮನಿಸಬೇಕಾದ ವಿಚಾರ ಎಂದರೆ, ಸೆಲೆಬ್ರಿಟಿಗಳು ಮಾಡಿದ ಬಹುತೇಕ ಎಲ್ಲಾ ಟ್ವೀಟ್​ಗಳು ಒಂದೇ ರೀತಿ ಇದ್ದವು. ಅಲ್ಲದೆ, ಎಲ್ಲವನ್ನೂ ಒಂದೇ ಸಮಯದಲ್ಲಿ ಪೋಸ್ಟ್​ ಮಾಡಲಾಗಿತ್ತು. ಇದು ಸಾಕಷ್ಟು ಅನುಮಾನ ಹುಟ್ಟು ಹಾಕಿದೆ ಎಂಬುದು ಮಹಾರಾಷ್ಟ್ರ ಸರ್ಕಾರದ ಆರೋಪ.

ಈ ಬಗ್ಗೆ ಮಾತನಾಡಿರುವ ಕಾಂಗ್ರೆಸ್​ ನಾಯಕ ಸಚಿನ್​ ಸಾವಂತ್​, ಬಿಜೆಪಿ ಇವರಿಗೆ ಬೆದರಿಕೆ ಒಡ್ಡುತ್ತಿದ್ದರಿ ಭದ್ರತೆ ಒದಗಿಸಬೇಕು. ನಾನು ಗೃಹ ಸಚಿವ ಅನಿಲ್ ದೇಶ್​​ಮುಖ್ ಅವರೊಂದಿಗೆ ಮಾತನಾಡಿದ್ದೇನೆ. ಈ ವಿಚಾರದ ಗಂಭೀರತೆ ಅವರಿಗೆ ಅರ್ಥವಾಗಿದೆ. ಈ ಬಗ್ಗೆ ತನಿಖೆ ನಡೆಸಲು ಗುಪ್ತಚರ ಇಲಾಖೆಗೆ ಆದೇಶ ನೀಡಿದ್ದಾರೆ ಎಂದರು.

India Together ಹ್ಯಾಷ್​ಟ್ಯಾಗ್​ನೊಂದಿಗೆ ದೇಶ ಮೊದಲು ಎಂದ ಸಚಿನ್, ಕರಣ್, ಅಕ್ಷಯ್

ರಾಜೇಶ್ ದುಗ್ಗುಮನೆ

ರಾಜೇಶ್​ ಹೆಗಡೆಯವರು ಪತ್ರಿಕೋದ್ಯಮಕ್ಕೆ ಕಾಲಿಟ್ಟು 10 ವರ್ಷಗಳಾಗಿವೆ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದಾರೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವರ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದಾರೆ.

Read More
Loading...
Unable to load recommendations.
Follow Us