Bihar: 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದ 3 ವರ್ಷದ ಮಗು, ಮುಂದುವರೆದ ರಕ್ಷಣಾ ಕಾರ್ಯ

ಬಿಹಾರದ ನಳಂದದ ಕುಲ್ ಗ್ರಾಮದಲ್ಲಿ 3 ವರ್ಷದ ಮಗುವೊಂದು 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ಭಾನುವಾರ ನಡೆದಿದೆ.

Bihar: 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದ 3 ವರ್ಷದ ಮಗು, ಮುಂದುವರೆದ ರಕ್ಷಣಾ ಕಾರ್ಯ
ಮಗುವಿನ ರಕ್ಷಣಾ ಕಾರ್ಯ
Image Credit source: Hindustan Times

Updated on: Jul 23, 2023 | 3:38 PM

ಪಾಟ್ನಾ, ಜುಲೈ 23: ಬಿಹಾರದ ನಳಂದದ ಕುಲ್ ಗ್ರಾಮದಲ್ಲಿ 3 ವರ್ಷದ ಮಗುವೊಂದು 40 ಅಡಿ ಆಳದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ಭಾನುವಾರ ನಡೆದಿದೆ. ಇದೀಗ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ,ಶಿವಂ ಎಂಬ ಬಾಲಕನನ್ನು ರಕ್ಷಿಸಲು ಎನ್​ಡಿಆರ್​ಎಫ್ ಮತ್ತು ಇತರ ರಕ್ಷಣಾ ತಂಡಗಳು ಸ್ಥಳದಲ್ಲಿವೆ. ಮಗುವೊಂದು ಬೋರ್‌ವೆಲ್‌ಗೆ ಬಿದ್ದಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಮಗುವನ್ನು ರಕ್ಷಿಸಲು ನಾವು ನಮ್ಮ ಕೈಲಾದಷ್ಟು ಪ್ರಯತ್ನಿಸುತ್ತಿದ್ದೇವೆ. ಮಗು ಇನ್ನೂ ಜೀವಂತವಾಗಿದೆ, ಅವನ ಧ್ವನಿಯನ್ನು ನಾವು ಕೇಳುತ್ತೇವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಎಎನ್‌ಐಗೆ ತಿಳಿಸಿದ್ದಾರೆ.

ಶಿವಮ್ಮನ ತಾಯಿ ತಾನು ಹೊಲದಲ್ಲಿ ಕೆಲಸ ಮಾಡುತ್ತಿದ್ದು, ಅಲ್ಲಿ ತನ್ನ ಮಗ ಆಟವಾಡುತ್ತಿದ್ದಾಗ ಕಾಲು ಜಾರಿ ಬೋರ್‌ವೆಲ್‌ನಲ್ಲಿ ಬಿದ್ದಿದ್ದಾನೆ ಎಂದು ಹೇಳಿದ್ದಾರೆ. ಆಮ್ಲಜನಕವನ್ನು ತಲುಪಿಸಲು ಮತ್ತು ಮಗುವನ್ನು ಬೋರ್‌ವೆಲ್‌ನಿಂದ ಹೊರತೆಗೆಯಲು ಜೆಸಿಬಿ ಯಂತ್ರಗಳನ್ನು ಕರೆಯಲಾಗಿದೆ.

ಮತ್ತಷ್ಟು ಓದಿ: ಕೊಳವೆ ಬಾವಿ ಹೆಸರಲ್ಲಿ 969 ಕೋಟಿ ರೂ. ಅವ್ಯವಹಾರ; ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಇ.ಡಿ. ನೋಟಿಸ್

ರಕ್ಷಣಾ ಕಾರ್ಯಾಚರಣೆಯ ಸುರಕ್ಷತೆ ಮತ್ತು ದಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಪ್ರದೇಶವನ್ನು ಸುತ್ತುವರಿಯಲಾಗಿದೆ. ಮಗುವಿಗೆ ತಕ್ಷಣದ ವೈದ್ಯಕೀಯ ನೆರವು ನೀಡಲು ಆಮ್ಲಜನಕ ಸೌಲಭ್ಯಗಳನ್ನು ಹೊಂದಿರುವ ವೈದ್ಯಕೀಯ ತಂಡಗಳು ಸ್ಥಳದಲ್ಲಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇತ್ತೀಚೆಗೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಬೋರ್‌ವೆಲ್‌ನಿಂದ ಹೊರತೆಗೆದ ಹೆಣ್ಣು ಮಗು ಆಸ್ಪತ್ರೆಯಲ್ಲಿ ಸಾವನ್ನಪ್ಪಿತ್ತು.

ಇದೇ ರೀತಿಯ ಘಟನೆಯಲ್ಲಿ, ಜೂನ್ 6 ರಂದು ಮಧ್ಯಪ್ರದೇಶದ ಸೆಹೋರ್ ಜಿಲ್ಲೆಯಲ್ಲಿ 300 ಅಡಿ ಆಳದ ಕೊಳವೆಬಾವಿಗೆ ಬಿದ್ದು ಎರಡೂವರೆ ವರ್ಷದ ಪುಟ್ಟ ಮಗು ತನ್ನ ಪ್ರಾಣವನ್ನು ಕಳೆದುಕೊಂಡಿತ್ತು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us