ಬಿಹಾರ: ನಿಂತಿದ್ದ ಟ್ರಕ್‌ಗೆ ಸ್ಕಾರ್ಪಿಯೋ ಡಿಕ್ಕಿ, ಒಂದೇ ಕುಟುಂಬದ 7 ಮಂದಿ ಸಾವು

ನಿಂತಿದ್ದ ಟ್ರಕ್​ಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ರಸ್ತೆಬದಿಯಲ್ಲಿ ನಿಂತಿದ್ದ ಟ್ರೇಲರ್ ಟ್ರಕ್‌ಗೆ ಎಸ್‌ಯುವಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಸಸಾರಂ ಪಟ್ಟಣದ ಶಿವಸಾಗರ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

ಬಿಹಾರ: ನಿಂತಿದ್ದ ಟ್ರಕ್‌ಗೆ ಸ್ಕಾರ್ಪಿಯೋ ಡಿಕ್ಕಿ, ಒಂದೇ ಕುಟುಂಬದ 7 ಮಂದಿ ಸಾವು
ಅಪಘಾತ
Image Credit source: India.com

Updated on: Aug 30, 2023 | 12:35 PM

ನಿಂತಿದ್ದ ಟ್ರಕ್​ಗೆ ಸ್ಕಾರ್ಪಿಯೋ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಮಂದಿ ಸಾವನ್ನಪ್ಪಿರುವ ಘಟನೆ ಬಿಹಾರದ ರೋಹ್ತಾಸ್ ಜಿಲ್ಲೆಯಲ್ಲಿ ಬುಧವಾರ ಮುಂಜಾನೆ ನಡೆದಿದೆ. ರಸ್ತೆಬದಿಯಲ್ಲಿ ನಿಂತಿದ್ದ ಟ್ರೇಲರ್ ಟ್ರಕ್‌ಗೆ ಎಸ್‌ಯುವಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದು, ಐವರು ಗಾಯಗೊಂಡಿದ್ದಾರೆ. ಸಸಾರಂ ಪಟ್ಟಣದ ಶಿವಸಾಗರ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 2ರಲ್ಲಿ ಮುಂಜಾನೆ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

ವರದಿಗಳ ಪ್ರಕಾರ, ಕುಟುಂಬವು ಜಾರ್ಖಂಡ್‌ನ ರಾಜರಪ್ಪ ದೇವಸ್ಥಾನದಿಂದ ಹಿಂತಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಎಸ್‌ಯುವಿಯಲ್ಲಿ ಚಾಲಕನ ಹೊರತಾಗಿ 11 ಮಂದಿ ಪ್ರಯಾಣಿಸುತ್ತಿದ್ದು, ಅದು ಅತಿವೇಗವಾಗಿ ಚಲಿಸುತ್ತಿತ್ತು ಎನ್ನಲಾಗಿದೆ. ಅತಿವೇಗದ ಚಾಲನೆಯಿಂದಾಗಿ ಚಾಲಕನ ನಿಯಂತ್ರಣ ತಪ್ಪಿದ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತರನ್ನು ರಾಜಮತಿ ದೇವಿ (55), ಅವರ ಪುತ್ರಿ ಸೋನಿ ಕುಮಾರಿ (35), ಅವರ ಅಳಿಯ ಅರವಿಂದ್ ಶರ್ಮಾ (40) ಎಂದು ಗುರುತಿಸಲಾಗಿದೆ. ಮೊಮ್ಮಕ್ಕಳಾದ ಆದಿತ್ಯ ಕುಮಾರ್ (8) ಮತ್ತು ರಿಯಾ ಕುಮಾರಿ (9). ಅಲ್ಲದೆ, ಅಪಘಾತದಲ್ಲಿ ಅರವಿಂದ್ ಅವರ ಸೊಸೆ ತಾರಾ ಕುಮಾರಿ (22) ಮತ್ತು ಚಾಂದನಿ ಕುಮಾರಿ (15) ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: ರಾಮನಗರ: ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ: ಕಾರಿನಲ್ಲಿದ್ದ ಆರು ಜನ ದುರ್ಮರಣ

ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ, ಕುಟುಂಬವು ಕೈಮೂರ್ ಜಿಲ್ಲೆಯವರು ಎಂದು ಅವರು ಹೇಳಿದರು. ಮೃತರ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಅಪಘಾತಕ್ಕೀಡಾದ ಎರಡು ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ಶಿವಸಾಗರದ ಸ್ಟೇಷನ್ ಹೌಸ್ ಆಫೀಸರ್ (ಎಸ್‌ಎಚ್‌ಒ) ರಾಕೇಶ್ ಗೋಸಾಯಿ ಹೇಳಿದರು.

ಸ್ಕಾರ್ಪಿಯೋ ಚಾಲಕ ಒಂದು ಕ್ಷಣ ನಿದ್ರಿಸಿದ್ದರಿಂದ ಈ ಘಟನೆ ನಡೆದಿರಬಹುದು ಎಂದು ಅಂದಾಜಿಸಲಾಗಿದೆ. ಗಾಯಾಳುಗಳನ್ನು ಉತ್ತಮ ಚಿಕಿತ್ಸೆಗಾಗಿ ಸದರ್ ಆಸ್ಪತ್ರೆಗೆ ಕಳುಹಿಸಿದ್ದೇವೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us