ಬಿಹಾರ: ಸಿಲಿಗುರಿಗೆ ತೆರಳಿತ್ತಿದ್ದ ಬಸ್​ ಪಲ್ಟಿ ಇಬ್ಬರು ಸಾವು, ಹಲವು ಮಂದಿಗೆ ಗಾಯ

ಬಿಹಾರದ ಕತಿಹಾರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ, ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ಅಧಿಕಾರಿಗಳು ಕಾಯುತ್ತಿದ್ದಾರೆ.

ಬಿಹಾರ: ಸಿಲಿಗುರಿಗೆ ತೆರಳಿತ್ತಿದ್ದ ಬಸ್​ ಪಲ್ಟಿ ಇಬ್ಬರು ಸಾವು, ಹಲವು ಮಂದಿಗೆ ಗಾಯ
ಅಪಘಾತImage Credit source: India TV
Follow us
ನಯನಾ ರಾಜೀವ್
|

Updated on: Feb 12, 2024 | 11:08 AM

ಬಸ್​ವೊಂದು ಪಲ್ಟಿಯಾಗಿದ್ದು ಇಬ್ಬರು ಮಹಿಳಾ ಪ್ರಯಾಣಿಕರು ಮೃತಪಟ್ಟು, ಅನೇಕ ಮಂದಿ ಗಾಯಗೊಂಡಿರುವ ಘಟನೆ ಬಿಹಾರದ ಕತಿಹಾರ್​ನಲ್ಲಿ ನಡೆದಿದೆ. ಶಿವಂ ಡಿಲಕ್ಸ್​ ಹೆಸರಿನ ಬಸ್​ ರಸ್ತೆ ಬದಿಯ ಗುಂಡಿಗೆ ಪಲ್ಟಿಯಾಗಿ ಇಬ್ಬರು ಮಹಿಳಾ ಪ್ರಯಾಣಿಕರು ಪ್ರಾಣ ಕಳೆದುಕೊಂಡಿದ್ದಾರೆ. ಅಪಘಾತದಲ್ಲಿ ಸುಮಾರು 48ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯರು, ಪೊಲೀಸರು ತಕ್ಷಣವೇ ಸ್ಥಳಕ್ಕೆ ಆಗಮಿಸಿದ್ದಾರೆ. ರಾಂಚಿಯಿಂದ ಸಿಲಿಗುರಿಗೆ ತೆರಳುತ್ತಿದ್ದ ಕಬೀರ್​ ಮಠದ ಬಳಿ ಪಲ್ಟಿಯಾಗಿತ್ತು. ಕತಿಹಾರ್ ಡಿಎಸ್​ಪಿ ಇಬ್ಬರ ಸಾವನ್ನು ಖಚಿತಪಡಿಸಿದ್ದಾರೆ. ಗಾಯಾಳುಗಳಿಗೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಮುಂದುವರೆದಿದೆ.

ಅಪಘಾತಕ್ಕೆ ಸ್ಪಷ್ಟ ಕಾರಣ ಇನ್ನೂ ತಿಳಿದುಬಂದಿಲ್ಲ, ಆದರೆ ಸಿಲಿಗುರಿಗೆ ಹೋಗುತ್ತಿದ್ದ ಪ್ರಯಾಣಿಕರ ಪ್ರಕಾರ ಚಾಲಕ ನಿದ್ರೆಗೆ ಜಾರಿದ್ದ ಎಂದಿದ್ದಾರೆ. ಕೊಡೆರ್ಮಾದಲ್ಲಿ ರಾತ್ರಿ ಊಟ ಮಾಡಿದ ಬಳಿಕ ಬಸ್​ ಮುಂದೆ ಸಾಗಿದ್ದರಿಂದ ಬೆಳಗಿನ ಜಾವ 3.30ರ ಸುಮಾರಿಗೆ ಬಸ್​ ಪಲ್ಟಿಯಾಗಿದೆ ಎಂದು ಪ್ರಯಾಣಿಕ ರಾಹುಲ್ ತಿಳಿಸಿದ್ದಾರೆ.

ಮತ್ತಷ್ಟು ಓದಿ: ಅಪಘಾತ ಪ್ರಕರಣಗಳಿಂದ ಹೆಚ್ಚು ಸುದ್ದಿಯಾದ ಚಾಮರಾಜನಗರ! ಒಂದೇ ತಿಂಗಳಲ್ಲಿ 19 ಅಪಘಾತ; 26 ಮಂದಿ ಸಾವು

ಅಪಘಾತದ ಬಳಿಕ ಅನೇಕರು ಬಸ್​ನಲ್ಲಿ ಸಿಲುಕಿದ್ದಾರೆ, ಪೊಲೀಸರು ಅವರನ್ನು ಹೊರತೆಗೆಯಲು ಪ್ರಯತ್ನಿಸಿದರು ಬಳಿಕ ಕ್ರೇನ್ ಸಹಾಯದಿಂದ ರಕ್ಷಿಸಿದ್ದಾರೆ. ಇಬ್ಬರು ಮಹಿಳಾ ಪ್ರಯಾಣಿಕರನ್ನು ಬಸ್​ನಿಂದ ಹೊರಗೆ ತೆಗೆಯಲಾಗಿದೆ.

ಘಟನಾ ಸ್ಥಳದ ವಿಡಿಯೋ

ಈ ಘಟನೆ ಬಗ್ಗೆ ಕತಿಹಾರ್ ಉಪ ವಿಭಾಗದ ಪೊಲೀಸ್​ ಅಧಿಕಾರಿ ಶಶಿ ಶೇಖರ್ ಮಾತನಾಡಿ, ರಾಂಚಿಯಿಂದ ಸಿಲಿಗುರಿಗೆ ಹೋಗುತ್ತಿದ್ದ ಬಸ್ ಅಪಘಾತಕ್ಕೀಡಾಗಿದೆ. ಗಾಯಗೊಂಡವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ, ಘಟನೆಗೆ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ