AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿಂದು ಮೊದಲ ಹಂತದ ಮತದಾನ, ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ವೋಟಿಂಗ್

ದೆಹಲಿ: ಕೊರೊನಾ.. ಕೊರೊನಾ.. ಕೊರೊನಾ.. ಹೀಗೆ ಕೊರೊನಾ ನಡುಕ ಹುಟ್ಟಿಸಿರುವ ಸಂದರ್ಭದಲ್ಲೇ ಪ್ರಜಾಪ್ರಭುತ್ವದ‌ ತೇರನ್ನೂ ಎಳೆಯಬೇಕಿದೆ. ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, 1066 ಅಭ್ಯರ್ಥಿಗಳ ಭವಿಷ್ಯವನ್ನು ಸುಮಾರು 2 ಕೋಟಿ ಮತದಾರರು ನಿರ್ಧರಿಸಲಿದ್ದಾರೆ. ಕೊರೊನಾ ದೇಶಕ್ಕೆ ಮತ್ತು ದೇಶದ ನಿವಾಸಿಗಳಿಗೆ ದೊಡ್ಡ ಆಘಾತ ಕೊಟ್ಟಿದೆ. ದೇಶದ ಎಲ್ಲೆಡೆ ಕೊರೊನಾ ಅಬ್ಬರಿಸ್ತಿದೆ. ಈ ಹೊತ್ತಲ್ಲೇ ಬಿಹಾರ ಚುನಾವಣೆ ಕೂಡ ಎದುರಾಗಿದ್ದು, ಸಂಚಲನ ಸೃಷ್ಟಿಯಾಗಿದೆ. ಬಿಹಾರದಲ್ಲಿ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಶುರು […]

ಬಿಹಾರದಲ್ಲಿಂದು ಮೊದಲ ಹಂತದ ಮತದಾನ, ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ವೋಟಿಂಗ್
ಆಯೇಷಾ ಬಾನು
|

Updated on: Oct 28, 2020 | 6:35 AM

Share

ದೆಹಲಿ: ಕೊರೊನಾ.. ಕೊರೊನಾ.. ಕೊರೊನಾ.. ಹೀಗೆ ಕೊರೊನಾ ನಡುಕ ಹುಟ್ಟಿಸಿರುವ ಸಂದರ್ಭದಲ್ಲೇ ಪ್ರಜಾಪ್ರಭುತ್ವದ‌ ತೇರನ್ನೂ ಎಳೆಯಬೇಕಿದೆ. ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನ ಕೆಲವೇ ಕ್ಷಣಗಳಲ್ಲಿ ಆರಂಭವಾಗಲಿದ್ದು, 1066 ಅಭ್ಯರ್ಥಿಗಳ ಭವಿಷ್ಯವನ್ನು ಸುಮಾರು 2 ಕೋಟಿ ಮತದಾರರು ನಿರ್ಧರಿಸಲಿದ್ದಾರೆ.

ಕೊರೊನಾ ದೇಶಕ್ಕೆ ಮತ್ತು ದೇಶದ ನಿವಾಸಿಗಳಿಗೆ ದೊಡ್ಡ ಆಘಾತ ಕೊಟ್ಟಿದೆ. ದೇಶದ ಎಲ್ಲೆಡೆ ಕೊರೊನಾ ಅಬ್ಬರಿಸ್ತಿದೆ. ಈ ಹೊತ್ತಲ್ಲೇ ಬಿಹಾರ ಚುನಾವಣೆ ಕೂಡ ಎದುರಾಗಿದ್ದು, ಸಂಚಲನ ಸೃಷ್ಟಿಯಾಗಿದೆ.

ಬಿಹಾರದಲ್ಲಿ ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಶುರು ಬಿಹಾರದಲ್ಲಿ ಪ್ರಜಾಪ್ರಭುತ್ವ ಪರ್ವ ಆರಂಭವಾಗಿದೆ. ಮೋದಿ, ನಿತೀಶ್ ಜೋಡಿ ಒಟ್ಟಾಗಿ ಈ ಬಾರಿ ಚುನಾವಣೆ ಎದುರಿಸುತ್ತಿದ್ರೆ, ಆರ್​ಜೆಡಿ, ಕಾಂಗ್ರೆಸ್ ಮತ್ತು ಎಡಪಕ್ಷಗಳು ಸೇರಿ ಮೋದಿ, ನಿತೀಶ್​ಗೆ ಸೆಡ್ಡುಹೊಡೆದಿವೆ. ಜಿದ್ದಾಜಿದ್ದಿನಿಂದ ಕೂಡಿರುವ ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನಕ್ಕೆ ಈಗ ಕ್ಷಣಗಣನೆ ಆರಂಭವಾಗಿದೆ.

ಮೈತ್ರಿಯ ಮಹಾಪರ್ವ ಇಂದು ಮೊದಲ ಹಂತದಲ್ಲಿ ಬಿಹಾರದ 71 ಕ್ಷೇತ್ರಗಳಿಗೆ ವೋಟಿಂಗ್ ನಡೆಯಲಿದೆ. 71 ಕ್ಷೇತ್ರಗಳಲ್ಲಿ 1,066 ಅಭ್ಯರ್ಥಿಗಳು ಚುನಾವಣಾ ಅಖಾಡದಲ್ಲಿದ್ದಾರೆ. ಮೊದಲ ಹಂತದಲ್ಲಿ 2 ಕೋಟಿ 14ಲಕ್ಷ ಮತದಾರರು ತಮ್ಮ ಹಕ್ಕು ಚಲಾಯಿಸಲಿದ್ದಾರೆ. 1066 ಸ್ಪರ್ಧಾಳುಗಳಲ್ಲಿ 114 ಮಹಿಳಾ ಅಭ್ಯರ್ಥಿಗಳು ಸೇರಿದ್ದಾರೆ. 35ರಲ್ಲಿ ಜೆಡಿಯು ಹಾಗೂ 29 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧಿಸ್ತಿವೆ. ಆರ್​ಜೆಡಿ 42 ಮತ್ತು ಕಾಂಗ್ರೆಸ್ 20 ಕ್ಷೇತ್ರಗಳಲ್ಲಿ ಸ್ಪರ್ಧೆ ನಡೆಸಲಿವೆ. 41 ಕ್ಷೇತ್ರಗಳಲ್ಲಿ ಮಾತ್ರ ಎಲ್​ಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ. ಜೆಡಿಯು ಸ್ಪರ್ಧಿಸಿರೋ 35 ಕ್ಷೇತ್ರಗಳಲ್ಲೂ ಎಲ್​ಜೆಪಿ ಸ್ಪರ್ಧಿಗಳು ಅಖಾಡಕ್ಕೆ ಇಳಿದಿದ್ದಾರೆ. ಬಿಜೆಪಿ ಅಭ್ಯರ್ಥಿ, ಶೂಟರ್ ಶ್ರೇಯಸಿ ಸಿಂಗ್ ಹಣೆಬರಹವನ್ನ ಇಂದು ಮತದಾರರು ಬರೆಯಲಿದ್ದಾರೆ.

ಕೊರೊನಾ ಬಿಕ್ಕಟ್ಟಿನ ಹಿನ್ನೆಲೆ ಮತದಾನ ಪ್ರಕ್ರಿಯೆಯಲ್ಲಿ ಒಂದಷ್ಟು ಬದಲಾವಣೆ ತರಲಾಗಿದ್ದು, ಚುನಾವಣಾ ಆಯೋಗ ಎಚ್ಚರಿಕೆಯ ಹೆಜ್ಜೆ ಇಟ್ಟಿದೆ. ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ನಕ್ಸಲ್ ಹಾವಳಿ ಇರುವ ಪ್ರದೇಶಗಳಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಆಡಳಿತಾರೂಢ ಎನ್‍ಡಿಎ ಹಾಗೂ ವಿಪಕ್ಷಗಳ ಒಕ್ಕೂಟ ಮಹಾಘಟಬಂಧನ್​ಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ. ಮತದಾರರು ಯಾರಿಗೆ ಜೈ ಅಂತಾರೆ ಅಂತಾ ಫಲಿತಾಂಶ ಬಂದ ಬಳಿಕ ಗೊತ್ತಾಗಲಿದೆ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!