AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Election 2025 Results: ಇಂದು ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಗೆಲುವಿನ ಬಿ‘ಹಾರ’ ಎನ್​ಡಿಎಗಾ, ಮಹಾಘಟಬಂಧನಕ್ಕಾ?

ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಈ ಬಾರಿ ದಾಖಲೆಯ ಮತದಾನ ಆಗಿದ್ದೇ ಆಗಿದ್ದು, ಫಲಿತಾಂಶದ ಬಗ್ಗೆಯೂ ಸಾಕಷ್ಟು ಕುತೂಹಲ ಮೂಡಿದೆ. ಇದರ ಬೆನ್ನಲ್ಲೇ ಆರ್​​ಜೆಡಿ ಮತ್ತು ಜೆಡಿಯು ನಾಯಕರ ಮಧ್ಯೆ ಪೋಸ್ಟರ್ ಸಮರ ಶುರುವಾಗಿದ್ದು, ಪರಸ್ಪರ ವ್ಯಂಗ್ಯ ಮಾಡುವ ಮೂಲಕ ಕಾಲೆಳೆಯುತ್ತಿದ್ದಾರೆ. ಮತ ಎಣಿಕೆ ಇಂದು ನಡೆಯುತ್ತಿದ್ದು, ಮಧ್ಯಾಹ್ನದ ವೇಳೆಗೆ ಬಹುತೇಕ ಚಿತ್ರಣ ಸಿಗುವ ನಿರೀಕ್ಷೆ ಇದೆ.

Bihar Election 2025 Results: ಇಂದು ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ: ಗೆಲುವಿನ ಬಿ‘ಹಾರ’ ಎನ್​ಡಿಎಗಾ, ಮಹಾಘಟಬಂಧನಕ್ಕಾ?
ಇಂದು ಬಿಹಾರ ವಿಧಾನಸಭೆ ಚುನಾವಣೆ ಫಲಿತಾಂಶ (ಸಾಂದರ್ಭಿಕ ಚಿತ್ರ)
ಗಣಪತಿ ಶರ್ಮಾ
| Edited By: |

Updated on: Nov 14, 2025 | 6:47 AM

Share

ಪಟ್ನಾ, ನವೆಂಬರ್ 14: 38 ಜಿಲ್ಲೆಗಳು, 243 ಕ್ಷೇತ್ರಗಳು, 2,600ಕ್ಕೂ ಹೆಚ್ಚು ಅಭ್ಯರ್ಥಿಗಳು. ಬಿಹಾರ ವಿಧಾನಸಭೆ ಚುನಾವಣೆಯ (Bihar Assembly Election) ಮತ ಎಣಿಕೆ ಇಂದು ನಡೆಯುತ್ತಿದ್ದು, ದೇಶದ ದಿಕ್ಸೂಚಿ ಎಂದೇ ಕರೆಯಲ್ಪಡುವ ಬಿಹಾರ ಗೆಲುವಿನ ಹಾರ ಯಾರಿಗೆ ಎನ್ನುವ ಕುತೂಹಲ ರಾಷ್ಟ್ರ ರಾಜಕಾರಣದಲ್ಲಿ ಸೃಷ್ಟಿಯಾಗಿದೆ. ಮತ್ತೆ ನಿತೀಶ್ ಆಡಳಿತ ಮುಂದುವರೆಯುತ್ತಾ? ಇಲ್ಲ ಮತದಾರ ಈ ಬಾರಿ ಬದಲಾವಣೆಯನ್ನು ಬಯಲಿಸಿದ್ದಾನಾ ಎಂಬ ಪ್ರಶ್ನೆಗಳಿಗೆ ಉತ್ತರ ದೊರೆಯಲಿದೆ.

ಬಿಹಾರದ 243 ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆದಿದೆ. ಈ ಬಾರಿಯಂತೂ ಬಿಹಾರದ ಜನ ದಾಖಲೆಯ ಪ್ರಮಾಣದಲ್ಲಿ ಮತ ಚಲಾಯಿಸಿದ್ದಾರೆ. ಇದರಲ್ಲಿ ಮಹಿಳಾ ಮತದಾರರದ್ದು ಮೇಲುಗೈ. ಹೀಗಾಗಿ ಫಲಿತಾಂಶ ಕುತೂಹಲ ಕೆರಳುವಂತೆ ಮಾಡಿದೆ. ಎನ್​ಡಿಎ ಗೆದ್ದು ನಿತೀಶ್ ಮತ್ತೆ ಅಧಿಕಾರದ ಗದ್ದುಗೆ ಏರುವ ತವಕದಲ್ಲಿದ್ದರೆ, ಮಹಾಘಟಬಂಧನದ ಯುವ ನಾಯಕ ತೇಜಸ್ವಿ ಯಾದವ್, ಗೆಲುವಿನ ಭಾಗ್ಯಕ್ಕೆ ಎದುರು ನೋಡುತ್ತಿದ್ದಾರೆ.

ಎನ್​ಡಿಎಗೆ ಗೆಲುವು ಎಂದಿರುವ ಎಕ್ಸಿಟ್​ಪೋಲ್​ಗಳು

ಮತದಾನೋತ್ತರ ಸಮೀಕ್ಷೆಗಳು ಎನ್​ಡಿಎ ಸರ್ಕಾರ ರಚನೆ ಆಗುವ ಬಗ್ಗೆ ಭವಿಷ್ಯ ನುಡಿದಿವೆ. ಹೀಗಾಗಿಯೇ ಜೆಡಿಯು ಸೇರಿ ಬಿಜೆಪಿ ಮಿತ್ರಪಕ್ಷಗಳಲ್ಲಿ ಸಂಭ್ರಮ ಈಗಾಗಲೇ ಮನೆ ಮಾಡಿದೆ.

ಜೆಡಿಯು, ಆರ್​ಜೆಡಿ ಮಧ್ಯೆ ಪೋಸ್ಟರ್ ಸಮರ

ಏತನ್ಮಧ್ಯೆ, ಪಾಟ್ನಾದ ಜೆಡಿಯು ಕಚೇರಿಯ ಹೊರಗೆ ‘ಟೈಗರ್ ಅಭಿ ಜಿಂದಾ ಹೇ’, ಅಂದರೆ ಹುಲಿ ಇನ್ನೂ ಜೀವಂತವಾಗಿದೆ ಎನ್ನುವ ಪೋಸ್ಟರ್​ಗಳು ರಾರಾಜಿಸುತ್ತಿವೆ. ಭರ್ಜರಿ ಗೆಲುವಿನ ವಿಶ್ವಾಸದಲ್ಲಿರುವ ಜೆಡಿಯು ಕಾರ್ಯಕರ್ತರು, ಸಂಭ್ರಮಾಚರಣೆಯ ತಯಾರಿಯಲ್ಲಿದ್ದಾರೆ. ಇದಕ್ಕೆ RJDಯ ಬೆಂಬಲಿತ ಸಮಾಜವಾದಿ ಪಕ್ಷ ಕೌಂಟರ್ ಕೊಟ್ಟಿದೆ. ‘ಅಲ್ವಿದಾ ಚಾಚಾ’ ಅಂದರೆ ಬಾಯ್ ಬಾಯ್ ಚಿಕ್ಕಪ್ಪ ಎನ್ನುವ ಮೂಲಕ ನಿತೀಶ್ ಕುಮಾರ್ ಕಾಲೆಳೆದಿದೆ.

ಇನ್ನು ಜೆಡಿಯುನ ಬಾಹುಬಲಿ ಎಂದೇ ಕರೆಸಿಕೊಳ್ಳುವವರು ಅನಂತ್ ಕುಮಾರ್ ಸಿಂಗ್. ಇಚರು 20ಕ್ಕೂ ಹೆಚ್ಚು ಕ್ರಿಮಿನಲ್ ಪ್ರಕರಣವೊಂದರಲ್ಲಿ ಜೈಲಿನಲ್ಲಿದ್ದಾರೆ. ಆದರೂ ಜೈಲಿನಿಂದ್ಲೇ ಪಟ್ನಾದ ಮೊಕಾಮಾ ವಿಧಾನಸಭಾ ಕ್ಷೇತ್ರದಿಂದ ಅಖಾಡಕ್ಕಿಳಿದಿದ್ದಾರೆ. ಇವರ ಬೆಂಬಲಿಗರಂತೂ ಈಗಾಗಲೇ ಸಂಭ್ರಮಾಚರಣೆಗೆ ತಯಾರಿ ನಡೆಸಿದ್ದಾರೆ.

ಇದನ್ನೂ ಓದಿ: ಬಿಹಾರದಲ್ಲೂ ನೇಪಾಳದಂತಹ ಹಿಂಸಾಚಾರ ನಡೆಯುತ್ತದೆ; ಆರ್​ಜೆಡಿ ಎಂಎಲ್​ಸಿ ಸುನಿಲ್ ಸಿಂಗ್ ವಿವಾದ

ಮತ್ತೊಂದೆಡೆ, ಮತದಾನೋತ್ತರ ಸಮೀಕ್ಷೆ ಸುಳ್ಳಾಗುತ್ತದೆ, ನಾವೇ ಗೆಲ್ಲುತ್ತೇವೆ ಎಂದು ಮಹಾಘಟಬಂಧನ ನಾಯಕರು ಹೇಳುತ್ತಿದ್ದಾರೆ. ಬಿಹಾರ ವಿಧಾನಸಭಾ ಚುನಾವಣೆಗೆ ನವೆಂಬರ್ 6 ಮತ್ತು ನವೆಂಬರ್ 11, ರಂದು ಎರಡು ಹಂತಗಳಲ್ಲಿ ಮತದಾನ ನಡೆದಿತ್ತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ