AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಮೊದಲ ಹಂತದ ಚುನಾವಣೆ ಮುಕ್ತಾಯ; ಶೇ. 64.46ರಷ್ಟು ಮತದಾನ ದಾಖಲು

ಬಿಹಾರ ವಿಧಾನಸಭಾ ಚುನಾವಣೆ ಇಂದಿನಿಂದ ಆರಂಭವಾಗಿದ್ದು, ಇಂದು ಮೊದಲ ಹಂತದ ಮತದಾನ ಮುಕ್ತಾಯವಾಗಿದೆ. ಇಂದಿನ ಮತದಾನದಲ್ಲಿ ಮಿನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು ಅಂದರೆ ಶೇ. 73.29ರಷ್ಟು ಮತದಾನ ದಾಖಲಾಗಿದೆ. ಹಾಗೇ, ಬಿಹಾರದ ಕುಮ್ರಾರ್ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ ಶೇ. 39.52ರಷ್ಟು ಮತದಾನ ದಾಖಲಾಗಿದೆ. ಮಹಾಘಟಬಂಧನ್ ಮತ್ತು ಎನ್​ಡಿಎ ನಡುವೆ ಬಿಹಾರದಲ್ಲಿ ನೇರ ಹಣಾಹಣಿ ಏರ್ಪಟ್ಟಿತ್ತು.

ಬಿಹಾರದಲ್ಲಿ ಮೊದಲ ಹಂತದ ಚುನಾವಣೆ ಮುಕ್ತಾಯ; ಶೇ. 64.46ರಷ್ಟು ಮತದಾನ ದಾಖಲು
Bihar Elections
ಸುಷ್ಮಾ ಚಕ್ರೆ
|

Updated on: Nov 06, 2025 | 8:43 PM

Share

ಪಾಟ್ನಾ, ನವೆಂಬರ್ 6: ಭಾರೀ ನಿರೀಕ್ಷೆ ಮೂಡಿಸಿರುವ ಬಿಹಾರದ ವಿಧಾನಸಭಾ ಚುನಾವಣೆಯ (Bihar Assembly Elections) ಮೊದಲ ಹಂತದ ಮತದಾನ ಮುಗಿದಿದೆ. 243 ಸದಸ್ಯರ ಬಿಹಾರ ವಿಧಾನಸಭೆಗೆ ನಡೆದ 1ನೇ ಹಂತದ ಚುನಾವಣೆಯಲ್ಲಿ ಇಂದು ಶೇ. 64.46ರಷ್ಟು ಮತದಾನ ದಾಖಲಾಗಿದೆ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ತಿಳಿಸಿದೆ. ಎರಡನೇ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದೆ.

ಬಿಹಾರದ ಮಿನಾಪುರ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಹೆಚ್ಚು (ಶೇ. 73.29) ಮತದಾನ ದಾಖಲಾಗಿದೆ. ಕುಮ್ರಾರ್ ವಿಧಾನಸಭಾ ಕ್ಷೇತ್ರದಲ್ಲಿ ಅತಿ ಕಡಿಮೆ (ಶೇ. 39.52) ಮತದಾನ ದಾಖಲಾಗಿದೆ. ಇಂದು ಬಿಹಾರದ 18 ಜಿಲ್ಲೆಗಳ 121 ವಿಧಾನಸಭಾ ಕ್ಷೇತ್ರಗಳಲ್ಲಿ 1,000ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದರು. ಅದರಲ್ಲಿ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಮುಂತಾದವರು ಪ್ರಮುಖರು. ಅವರೆಲ್ಲರ ಭವಿಷ್ಯ ಈಗಾಗಲೇ ಮತಯಂತ್ರ ಸೇರಿದೆ.

ಇದನ್ನೂ ಓದಿ: ಬಿಹಾರದ ಉಪಮುಖ್ಯಮಂತ್ರಿ ಕಾರಿನ ಮೇಲೆ ಚಪ್ಪಲಿ ಎಸೆದು, ಕಲ್ಲು ತೂರಾಟ

ಜಿಲ್ಲಾವಾರು ಅತಿ ಹೆಚ್ಚು ಮತದಾನ ಬೆಂಗುಸರೈನಲ್ಲಿ ದಾಖಲಾಗಿದ್ದು, ಅಲ್ಲಿ ಶೇ. 67.32ರಷ್ಟು ಮತದಾನ ದಾಖಲಾಗಿದೆ. ಶೇಖ್‌ಪುರದಲ್ಲಿ ಅತಿ ಕಡಿಮೆ ಮತದಾನವಾಗಿದೆ. ಬಿಹಾರದಲ್ಲಿ ನವೆಂಬರ್ 11ರಂದು ಎರಡನೇ ಹಂತದ ವಿಧಾನಸಭಾ ಚುನಾವಣೆ ನಡೆಯಲಿದೆ.

ಫೆಬ್ರವರಿ 2000ರಲ್ಲಿ ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಶೇ. 62.57ರಷ್ಟು ಮತದಾನವನ್ನು ದಾಖಲಾಗಿತ್ತು. ಇದು ಇಲ್ಲಿಯವರೆಗೆ ಅತ್ಯಧಿಕ ಮತದಾನವಾಗಿತ್ತ. ಆದರೆ, ಈ ಬಾರಿ ಶೇ. 64.46ರಷ್ಟು ಮತದಾನ ನಡೆದಿರುವುದರಿಂದ ಇದು ಬಿಹಾರದಲ್ಲಿ ಇದುವರೆಗೂ ನಡೆದ ದಾಖಲೆಯ ಮತದಾನವಾಗಿದೆ.

ಬಿಹಾರದಲ್ಲಿ ಎರಡನೇ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದೆ. ಮತ ಎಣಿಕೆ ನವೆಂಬರ್ 14ರಂದು ನಡೆಯಲಿದ್ದು, ಅಂದೇ ಫಲಿತಾಂಶ ಪ್ರಕಟವಾಗಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ