AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Election 2025 Schedule: ಬಿಹಾರದಲ್ಲಿ ನವೆಂಬರ್ 6, 11ರಂದು 2 ಹಂತದಲ್ಲಿ ವಿಧಾನಸಭಾ ಚುನಾವಣೆ

ಬಿಹಾರದ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಇಂದು ಚುನಾವಣಾ ಆಯೋಗ ಪ್ರಕಟಿಸಿದೆ. ಬಿಹಾರದಲ್ಲಿ ಎನ್​ಡಿಎ ಬಣದ ನಿತೀಶ್ ಕುಮಾರ್ ಅವರ ಜೆಡಿಯು ಹಾಗೂ ಹಿಂದೂಸ್ತಾನಿ ಅವಾಮ್ ಮೋರ್ಚಾ (ಜಾತ್ಯತೀತ) ಅಥವಾ HAM ಕಣದಲ್ಲಿದೆ. ಹಾಗೂ ಇಂಡಿಯ ಬಣದ ತೇಜಸ್ವಿ ಯಾದವ್ ಅವರ ರಾಷ್ಟ್ರೀಯ ಜನತಾದಳ (RJD) ನೇರ ಸ್ಪರ್ಧೆ ನೀಡಲಿದೆ. ಈಗಾಗಲೇ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಬಿಹಾರದಲ್ಲಿ ಸಾಲು ಸಾಲು ಪ್ರಚಾರ ಸಭೆಗಳನ್ನು ನಡೆಸುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಕೂಡ ಬಿಹಾರಕ್ಕೆ ಪದೇಪದೆ ಭೇಟಿ ನೀಡುತ್ತಿದ್ದಾರೆ.

Bihar Election 2025 Schedule: ಬಿಹಾರದಲ್ಲಿ ನವೆಂಬರ್ 6, 11ರಂದು 2 ಹಂತದಲ್ಲಿ ವಿಧಾನಸಭಾ ಚುನಾವಣೆ
Gyanesh Kumar
ಸುಷ್ಮಾ ಚಕ್ರೆ
|

Updated on:Oct 06, 2025 | 4:50 PM

Share

ನವದೆಹಲಿ, ಅಕ್ಟೋಬರ್ 6: ದೆಹಲಿಯಲ್ಲಿ ಕೇಂದ್ರ ಚುನಾವಣಾ ಆಯೋಗದಿಂದ (Election Commission)  ಸುದ್ದಿಗೋಷ್ಠಿ ನಡೆದಿದ್ದು, ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಯ ಬಗ್ಗೆ ಮಾಹಿತಿ ನೀಡಿದ್ದಾರೆ. ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶ್​ ಕುಮಾರ್ ಈ ಬಗ್ಗೆ ಮಾಹಿತಿ ನೀಡಿದ್ದು, ನವೆಂಬರ್ 6 ಮತ್ತು 11ರಂದು 2 ಹಂತಗಳಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ನವೆಂಬರ್ 14ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ ಎಂದಿದ್ದಾರೆ.

ಬಿಹಾರದ 243 ವಿಧಾನಸಭಾ ಕ್ಷೇತ್ರಗಳಿಗೆ 2 ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 6ರಂದು 121 ಕ್ಷೇತ್ರಗಳಿಗೆ ಮೊದಲ ಹಂತದ ಚುನಾವಣೆ ನಡೆಯಲಿದೆ. ಅಕ್ಟೋಬರ್ 10ರಂದು ಮೊದಲ ಹಂತದ ಚುನಾವಣೆಗೆ ಅಧಿಸೂಚನೆ ಹೊರಡಿಸಲಾಗಿದೆ. ಅ.17ರಂದು ಮೊದಲ ಹಂತದಲ್ಲಿ ನಾಮಪತ್ರ ಸಲ್ಲಿಸಲು ಕೊನೇ ದಿನ. ಅ.18ರಂದು ಚುನಾವಣಾ ಅಭ್ಯರ್ಥಿಗಳ ನಾಮಪತ್ರ ಪರಿಶೀಲನೆ ನಡೆಸಲಾಗುವುದು. ಅ.20ರಂದು ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಲು ಕೊನೆ ದಿನ. ನವೆಂಬರ್ 14ರಂದು ಬಿಹಾರ ವಿಧಾನಸಭಾ ಚುನಾವಣೆ ಫಲಿತಾಂಶ ಪ್ರಕಟವಾಗಲಿದೆ. ಬಿಹಾರದಲ್ಲಿ ಒಟ್ಟು 7.24 ಕೋಟಿ ಮತದಾರರು ಈ ಬಾರಿ ಮತ ಚಲಾಯಿಸಲಿದ್ದಾರೆ. ಅವರಲ್ಲಿ 1725 ತೃತೀಯ ಲಿಂಗಿ ಮತದಾರರಿದ್ದಾರೆ.

ಇದನ್ನೂ ಓದಿ: Bihar Assembly Election: ಇಂದು ಸಂಜೆ 4ಕ್ಕೆ ಬಿಹಾರ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ

243 ಸದಸ್ಯರ ಬಿಹಾರ ವಿಧಾನಸಭೆಯ ಪ್ರಸ್ತುತ ಅವಧಿ ನವೆಂಬರ್ 22ರಂದು ಕೊನೆಗೊಳ್ಳುತ್ತದೆ. ಮುಂಬರುವ ಚುನಾವಣೆಯು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಮತ್ತು ರಾಷ್ಟ್ರೀಯ ಜನತಾ ದಳದ (RJD) ತೇಜಸ್ವಿ ಯಾದವ್ ನೇತೃತ್ವದ ವಿರೋಧ ಪಕ್ಷ ಮಹಾಘಟಬಂಧನ್ ನಡುವಿನ ನೇರ ಸ್ಪರ್ಧೆಯಾಗುವ ನಿರೀಕ್ಷೆಯಿದೆ.

2020ರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ 3 ಹಂತಗಳಲ್ಲಿ ಮತದಾನ ನಡೆಯಿತು. ಚುನಾವಣೆಯ ನಂತರ, ಬಿಜೆಪಿ ಬೆಂಬಲಿತ ನಿತೀಶ್ ಕುಮಾರ್ ರಾಜ್ಯದಲ್ಲಿ ಸರ್ಕಾರವನ್ನು ರಚಿಸಿದರು. ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಮುಂದುವರೆದರು. ಆದರೆ, ಆಗಸ್ಟ್ 2022ರಲ್ಲಿ, ಅವರ ಜೆಡಿಯು ಪಕ್ಷವು NDA ಜೊತೆಗಿನ ಸಂಬಂಧವನ್ನು ಮುರಿದು RJD ನೇತೃತ್ವದ ಮಹಾಘಟಬಂಧನ್ ಜೊತೆ ಸೇರಿಕೊಂಡಿತು. ಜನವರಿ 2024ರಲ್ಲಿ ಜೆಡಿಯು ಮತ್ತೆ ಆರ್‌ಜೆಡಿ ನೇತೃತ್ವದ ಮೈತ್ರಿಕೂಟದಿಂದ ಬೇರ್ಪಟ್ಟು ಎನ್‌ಡಿಎಗೆ ಮರಳಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:44 pm, Mon, 6 October 25

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ