ಬಿಹಾರ ಚುನಾವಣೆ; ಸೀಟು ಹಂಚಿಕೆ ಕುರಿತು ನಾಳೆ ತೇಜಸ್ವಿ ಯಾದವ್ -ಮಲ್ಲಿಕಾರ್ಜುನ ಖರ್ಗೆ ಭೇಟಿ
ಬಿಹಾರ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಸೀಟು ಹಂಚಿಕೆ ಮಾತುಕತೆ ಕುರಿತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನಾಳೆ (ಮಂಗಳವಾರ) ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಲಿದ್ದಾರೆ. ಆರ್‌ಜೆಡಿಯ ರಾಜ್ಯಸಭಾ ಸಂಸದ ಮನೋಜ್ ಝಾ ಅವರು ಇದು ಔಪಚಾರಿಕ ಸಭೆ ಎಂದು ಹೇಳಿದ್ದಾರೆ. "ಕಾಂಗ್ರೆಸ್ ಪಕ್ಷದ ಮಿತ್ರಪಕ್ಷಗಳನ್ನು ನೋಡಿದರೆ ಆರ್‌ಜೆಡಿ ಈಗಿನ ಅತ್ಯಂತ ಹಳೆಯ ಮಿತ್ರಪಕ್ಷವಾಗಿದೆ. ಈ ಸಭೆಯಲ್ಲಿ ಸಂಪೂರ್ಣ ಸನ್ನಿವೇಶದ ಬಗ್ಗೆ ಚರ್ಚಿಸಲಾಗುವುದು" ಎಂದು ಅವರು ಹೇಳಿದ್ದಾರೆ.

ನವದೆಹಲಿ, ಏಪ್ರಿಲ್ 14: ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ನಾಯಕಿ ತೇಜಸ್ವಿ ಯಾದವ್ (Tejashwi Yadav) ಏಪ್ರಿಲ್ 15 (ಮಂಗಳವಾರ)ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಸೀಟು ಹಂಚಿಕೆ ಮಾತುಕತೆ ನಡೆಯಲಿದೆ. ಮುಂಬರುವ ಬಿಹಾರ ಚುನಾವಣೆಗೆ ಎರಡೂ ಪಕ್ಷಗಳ ನಡುವಿನ ಮೈತ್ರಿಯ ಕುರಿತು ಚರ್ಚಿಸಲಿದ್ದಾರೆ ಎಂದು ಆರ್‌ಜೆಡಿ ಸಂಸದ ಮನೋಜ್ ಝಾ ಇಂದು ದೃಢಪಡಿಸಿದರು. ಬಿಹಾರದ ರಾಜಕಾರಣವನ್ನು ಈ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ ಮನೋಜ್ ಝಾ ಹೇಳಿದ್ದಾರೆ. “ಬಿಹಾರದ ಸಂಪೂರ್ಣ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ಈ ಸಭೆಯನ್ನು ನಿಗದಿಪಡಿಸಲಾಗಿದೆ. ಚುನಾವಣೆ ನಡೆಯಲು ಸುಮಾರು 6-8 ತಿಂಗಳು ಇರುವುದರಿಂದ ಈ ಕುರಿತು ಚರ್ಚಿಸಲಾಗುವುದು” ಎಂದು ಹೇಳಿದ್ದಾರೆ.
“ಇದು ಔಪಚಾರಿಕ ಸಭೆ. ಕಾಂಗ್ರೆಸ್ ಪಕ್ಷದ ಮಿತ್ರಪಕ್ಷಗಳನ್ನು ನೋಡಿದರೆ ಆರ್‌ಜೆಡಿ ಇಲ್ಲಿಯವರೆಗಿನ ಅತ್ಯಂತ ಹಳೆಯ ಮಿತ್ರಪಕ್ಷವಾಗಿದೆ. ಈ ಔಪಚಾರಿಕ ಸಭೆಯಲ್ಲಿ ಇಡೀ ಸನ್ನಿವೇಶದ ಬಗ್ಗೆ ಚರ್ಚಿಸಲಾಗುವುದು” ಎಂದು ಆರ್‌ಜೆಡಿಯ ರಾಜ್ಯಸಭಾ ಸಂಸದ ಮನೋಜ್ ಝಾ ದೆಹಲಿಯಲ್ಲಿ ಎಎನ್ಐಗೆ ತಿಳಿಸಿದರು.
ಇದನ್ನೂ ಓದಿ: ಬಿಹಾರದ ಹಲವು ಜಿಲ್ಲೆಗಳಲ್ಲಿ ಸಿಡಿಲು ಬಡಿದು 25 ಜನ ಸಾವು; ಸಿಎಂ ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದ ವಿಧಾನಸಭಾ ಚುನಾವಣೆಗೆ ಸರಿಸುಮಾರು 6 ತಿಂಗಳುಗಳು ಮಾತ್ರ ಉಳಿದಿರುವುದರಿಂದ ಎಲ್ಲಾ ರಾಜಕೀಯ ಪಕ್ಷಗಳು ಸಿದ್ಧತೆಗಳನ್ನು ಚುರುಕುಗೊಳಿಸಿವೆ. ಬಿಹಾರದಲ್ಲಿ ಕಾಂಗ್ರೆಸ್‌ನ ಹಳೆಯ ಮಿತ್ರ ಎಂದು ಕರೆಯಲ್ಪಡುವ ಆರ್‌ಜೆಡಿ ಕೂಡ ಇಂಡಿಯಾ ಬಣದ ಭಾಗವಾಗಿದೆ. ಆರ್‌ಜೆಡಿ-ಕಾಂಗ್ರೆಸ್ ಸಭೆ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆಯುವ ನಿರೀಕ್ಷೆಯಿದೆ. ಏಪ್ರಿಲ್ 20ರಂದು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಬಿಹಾರದ ಬಕ್ಸಾರ್ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.
ಇದನ್ನೂ ಓದಿ: ಪಾಟ್ನಾದಲ್ಲಿ ಪ್ರಧಾನಿ ಮೋದಿಯಿಂದ ಖೇಲೋ ಇಂಡಿಯಾ ಯೂತ್ ಗೇಮ್ಸ್ 2025 ಉದ್ಘಾಟನೆ; ಸಿಎಂ ನಿತೀಶ್ ಕುಮಾರ್
ಬಿಹಾರದಲ್ಲಿ ಈ ಬಾರಿ ತೀವ್ರ ಪೈಪೋಟಿ ನಡೆಯುವ ನಿರೀಕ್ಷೆಯಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಮಹಾಘಟಬಂಧನದ ವಿರುದ್ಧ ಬಿಜೆಪಿ ಹೋರಾಡುತ್ತಿದೆ. ಬಿಹಾರ ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ನಡುವೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಆದರೆ ಚುನಾವಣಾ ದಿನಾಂಕಗಳನ್ನು ಇನ್ನೂ ಘೋಷಿಸಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ