
ನವದೆಹಲಿ, ಏಪ್ರಿಲ್ 14: ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ನಾಯಕಿ ತೇಜಸ್ವಿ ಯಾದವ್ (Tejashwi Yadav) ಏಪ್ರಿಲ್ 15 (ಮಂಗಳವಾರ)ರಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರನ್ನು ಭೇಟಿ ಮಾಡಲಿದ್ದಾರೆ. ಈ ವೇಳೆ ಸೀಟು ಹಂಚಿಕೆ ಮಾತುಕತೆ ನಡೆಯಲಿದೆ. ಮುಂಬರುವ ಬಿಹಾರ ಚುನಾವಣೆಗೆ ಎರಡೂ ಪಕ್ಷಗಳ ನಡುವಿನ ಮೈತ್ರಿಯ ಕುರಿತು ಚರ್ಚಿಸಲಿದ್ದಾರೆ ಎಂದು ಆರ್‌ಜೆಡಿ ಸಂಸದ ಮನೋಜ್ ಝಾ ಇಂದು ದೃಢಪಡಿಸಿದರು. ಬಿಹಾರದ ರಾಜಕಾರಣವನ್ನು ಈ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ ಮನೋಜ್ ಝಾ ಹೇಳಿದ್ದಾರೆ. “ಬಿಹಾರದ ಸಂಪೂರ್ಣ ಸಂದರ್ಭವನ್ನು ಗಮನದಲ್ಲಿಟ್ಟುಕೊಂಡು ಈ ಸಭೆಯನ್ನು ನಿಗದಿಪಡಿಸಲಾಗಿದೆ. ಚುನಾವಣೆ ನಡೆಯಲು ಸುಮಾರು 6-8 ತಿಂಗಳು ಇರುವುದರಿಂದ ಈ ಕುರಿತು ಚರ್ಚಿಸಲಾಗುವುದು” ಎಂದು ಹೇಳಿದ್ದಾರೆ.
“ಇದು ಔಪಚಾರಿಕ ಸಭೆ. ಕಾಂಗ್ರೆಸ್ ಪಕ್ಷದ ಮಿತ್ರಪಕ್ಷಗಳನ್ನು ನೋಡಿದರೆ ಆರ್‌ಜೆಡಿ ಇಲ್ಲಿಯವರೆಗಿನ ಅತ್ಯಂತ ಹಳೆಯ ಮಿತ್ರಪಕ್ಷವಾಗಿದೆ. ಈ ಔಪಚಾರಿಕ ಸಭೆಯಲ್ಲಿ ಇಡೀ ಸನ್ನಿವೇಶದ ಬಗ್ಗೆ ಚರ್ಚಿಸಲಾಗುವುದು” ಎಂದು ಆರ್‌ಜೆಡಿಯ ರಾಜ್ಯಸಭಾ ಸಂಸದ ಮನೋಜ್ ಝಾ ದೆಹಲಿಯಲ್ಲಿ ಎಎನ್ಐಗೆ ತಿಳಿಸಿದರು.
ಇದನ್ನೂ ಓದಿ: ಬಿಹಾರದ ಹಲವು ಜಿಲ್ಲೆಗಳಲ್ಲಿ ಸಿಡಿಲು ಬಡಿದು 25 ಜನ ಸಾವು; ಸಿಎಂ ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದ ವಿಧಾನಸಭಾ ಚುನಾವಣೆಗೆ ಸರಿಸುಮಾರು 6 ತಿಂಗಳುಗಳು ಮಾತ್ರ ಉಳಿದಿರುವುದರಿಂದ ಎಲ್ಲಾ ರಾಜಕೀಯ ಪಕ್ಷಗಳು ಸಿದ್ಧತೆಗಳನ್ನು ಚುರುಕುಗೊಳಿಸಿವೆ. ಬಿಹಾರದಲ್ಲಿ ಕಾಂಗ್ರೆಸ್‌ನ ಹಳೆಯ ಮಿತ್ರ ಎಂದು ಕರೆಯಲ್ಪಡುವ ಆರ್‌ಜೆಡಿ ಕೂಡ ಇಂಡಿಯಾ ಬಣದ ಭಾಗವಾಗಿದೆ. ಆರ್‌ಜೆಡಿ-ಕಾಂಗ್ರೆಸ್ ಸಭೆ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಡೆಯುವ ನಿರೀಕ್ಷೆಯಿದೆ. ಏಪ್ರಿಲ್ 20ರಂದು ಕಾಂಗ್ರೆಸ್ ಅಧ್ಯಕ್ಷ ಖರ್ಗೆ ಬಿಹಾರದ ಬಕ್ಸಾರ್ ಜಿಲ್ಲೆಯಲ್ಲಿ ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡುವ ನಿರೀಕ್ಷೆಯಿದೆ.
ಇದನ್ನೂ ಓದಿ: ಪಾಟ್ನಾದಲ್ಲಿ ಪ್ರಧಾನಿ ಮೋದಿಯಿಂದ ಖೇಲೋ ಇಂಡಿಯಾ ಯೂತ್ ಗೇಮ್ಸ್ 2025 ಉದ್ಘಾಟನೆ; ಸಿಎಂ ನಿತೀಶ್ ಕುಮಾರ್
ಬಿಹಾರದಲ್ಲಿ ಈ ಬಾರಿ ತೀವ್ರ ಪೈಪೋಟಿ ನಡೆಯುವ ನಿರೀಕ್ಷೆಯಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಮತ್ತು ಮಹಾಘಟಬಂಧನದ ವಿರುದ್ಧ ಬಿಜೆಪಿ ಹೋರಾಡುತ್ತಿದೆ. ಬಿಹಾರ ರಾಜ್ಯದಲ್ಲಿ ಅಕ್ಟೋಬರ್-ನವೆಂಬರ್ ನಡುವೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಆದರೆ ಚುನಾವಣಾ ದಿನಾಂಕಗಳನ್ನು ಇನ್ನೂ ಘೋಷಿಸಿಲ್ಲ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ