Bihar Lathi Charge: ಬಿಹಾರದಲ್ಲಿ ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್​: ಬಿಜೆಪಿ ಮುಖಂಡ ಸಾವು

ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಬಿಹಾರ ಪೊಲೀಸರು ನಡೆಸಿರುವ ಲಾಠಿ ಚಾರ್ಜ್​ನಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ.

Bihar Lathi Charge: ಬಿಹಾರದಲ್ಲಿ ಪ್ರತಿಭಟನಾ ನಿರತರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್​: ಬಿಜೆಪಿ ಮುಖಂಡ ಸಾವು
ಲಾಠಿ ಚಾರ್ಜ್​
Image Credit source: News 9

Updated on: Jul 13, 2023 | 3:25 PM

ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಪಾಟ್ನಾದಲ್ಲಿ ಬಿಜೆಪಿ ಕಾರ್ಯಕರ್ತರು ನಡೆಸಿದ ಪ್ರತಿಭಟನೆ ವೇಳೆ ಬಿಹಾರ ಪೊಲೀಸರು ನಡೆಸಿರುವ ಲಾಠಿ ಚಾರ್ಜ್​ನಲ್ಲಿ ಬಿಜೆಪಿ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ. ಬಿಜೆಪಿಯ ಜೆಹಾನಾಬಾದ್‌ನ ಪ್ರಧಾನ ಕಾರ್ಯದರ್ಶಿ ವಿಜಯ್‌ಕುಮಾರ್‌ ಸಿಂಗ್‌ ಮೇಲೆ ನಡೆದ ಪ್ರತಿಭಟನೆ ವೇಳೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ ಎಂದು ರಾಜ್ಯಸಭಾ ಸಂಸದ ಸುಶೀಲ್‌ ಕುಮಾರ್‌ ಮೋದಿ ಹೇಳಿದ್ದಾರೆ.

ಲಾಠಿ ಏಟು ತಿಂದ ಬಳಿಕ ರಸ್ತೆಯಲ್ಲಿ ಬಿದ್ದು ಹಣೆಗೆ ಗಾಯ ಮಾಡಿಕೊಂಡಿದ್ದಾರೆ. ರಸ್ತೆಗೆ ಬಿದ್ದ ನಂತರವೂ ಪೊಲೀಸರು ಲಾಠಿ ಚಾರ್ಜ್ ಮುಂದುವರಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತಾರಾ ನರ್ಸಿಂಗ್ ಹೋಮ್‌ಗೆ ಕಳುಹಿಸಲಾಯಿತು, ಅಲ್ಲಿ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದರು.

ಮತ್ತಷ್ಟು ಓದಿ: Mysore News: ಕಾರು ಪಲ್ಟಿಯಾಗಿ ಬಿಜೆಪಿ ಮುಖಂಡ ಸಾವು; ಇಬ್ಬರು ಮಕ್ಕಳು ಸೇರಿ ನಾಲ್ವರಿಗೆ ಗಾಯ

ಲಾಠಿಚಾರ್ಜ್ ಸಂದರ್ಭದಲ್ಲಿ ಸಂಸದರಿಗೂ ಥಳಿಸಲಾಯಿತು , ಬಿಹಾರ ಪೊಲೀಸರು ಬಿಜೆಪಿ ಸಂಸದ ಜನಾರ್ದನ್ ಸಿಂಗ್ ಸಿಗ್ರಿವಾಲ್ ಮತ್ತು ಬಿಹಾರದ ವಿರೋಧ ಪಕ್ಷದ ನಾಯಕ ವಿಜಯ್ ಕುಮಾರ್ ಸಿನ್ಹಾ ಅವರ ಮೇಲೂ ಲಾಠಿಚಾರ್ಜ್ ಮಾಡಿದರು.

ಜನಾರ್ದನ್ ಸಿಂಗ್ ಸಿಗ್ರಿವಾಲ್ ಗಂಭೀರ ಗಾಯಗೊಂಡಿದ್ದಾರೆ. ಸಿಗ್ರಿವಾಲ್ ತಲೆಗೆ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸಾಮ್ರಾಟ್ ಚೌಧರಿ, ಮಾಜಿ ಉಪ ಮುಖ್ಯಮಂತ್ರಿ ರೇಣುದೇವಿ ಮತ್ತು ಜೀವೇಶ್ ಮಿಶ್ರಾ ಅವರನ್ನು ಮಾರ್ಚ್‌ನಲ್ಲಿ ಪೊಲೀಸರು ಬಂಧಿಸಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:18 pm, Thu, 13 July 23

ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More
Loading...
Unable to load recommendations.
Follow Us