ಬಿಹಾರ: ಬಿಜೆಪಿ ಅಭ್ಯರ್ಥಿ ರಾಮ್​ ಕೃಪಾಲ್ ಯಾದವ್​ ಮೇಲೆ ಅಪರಿಚಿತರಿಂದ ದಾಳಿ

ಬಿಹಾರದ ಪಾಟಲಿಪುತ್ರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಮ್​ ಕೃಪಾಲ್​ ಯಾದವ್​ ಅವರ ಬೆಂಗಾಲವಲು ವಾಹನದ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಬಿಹಾರ: ಬಿಜೆಪಿ ಅಭ್ಯರ್ಥಿ ರಾಮ್​ ಕೃಪಾಲ್ ಯಾದವ್​ ಮೇಲೆ ಅಪರಿಚಿತರಿಂದ ದಾಳಿ
ರಾಮ್​ ಕೃಪಾಲ್​ ಯಾದವ್
Follow us
ನಯನಾ ರಾಜೀವ್
|

Updated on:Jun 02, 2024 | 9:09 AM

ಲೋಕಸಭೆ ಚುನಾವಣೆ(Lok Sabha Election)ಯ ಕೊನೆಯ ಹಂತದ ಮತದಾನ ಮುಗಿದ ಬೆನ್ನಲ್ಲೇ ಬಿಹಾರದ ರಾಜಧಾನಿ ಪಾಟ್ನಾದಲ್ಲಿ ಶನಿವಾರ ಗುಂಡಿನ ದಾಳಿ ನಡೆದಿದೆ. ಮಾಹಿತಿಯ ಪ್ರಕಾರ, ಭಾರತೀಯ ಜನತಾ ಪಕ್ಷದ (ಬಿಜೆಪಿ) ಪಾಟಲಿಪುತ್ರ ಅಭ್ಯರ್ಥಿ ರಾಮ್ ಕೃಪಾಲ್ ಯಾದವ್ ಮೇಲೆ ಹಲ್ಲೆ ನಡೆದಿದೆ. ಗಾಯಗೊಂಡಿರು ಪಕ್ಷದ ಕಾರ್ಯಕರ್ತನನ್ನು ಭೇಟಿ ಮಾಡಲು ಮತ್ತು ಸ್ಥಳೀಯ ಬೂತ್‌ನಲ್ಲಿ ಮತದಾನ ಪ್ರಕ್ರಿಯೆಯನ್ನು ಪರಿಶೀಲಿಸಲು ಅವರು ಪಾಟ್ನಾದ ಮಸೌರ್ಹಿಗೆ ತೆರಳಿದ್ದರು. ಈ ಪ್ರದೇಶದಲ್ಲಿ ಯಾದವ್ ಅವರ ಕಾರಿನ ಮುಂದೆ ವ್ಯಕ್ತಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ ಎನ್ನಲಾಗಿದೆ.

ಏಳನೇ ಹಂತದ ಮತದಾನದ ನಂತರ ಸಂಜೆ ತಡವಾಗಿ, ರಾಮಕೃಪಾಲ್ ಯಾದವ್ ಅವರು ಪಾಟ್ನಾದ ತಿನೇರಿ ಬೂತ್‌ನಿಂದ ಹಿಂತಿರುಗುತ್ತಿದ್ದರು. ಇವರೊಂದಿಗೆ ತಿನೇರಿಯ ಕೆಲ ಯುವಕರು ಬಂದಿದ್ದರು. ಮತ್ತಿಯಾ ಗ್ರಾಮದ ಸಮೀಪಕ್ಕೆ ಬರುತ್ತಿದ್ದಂತೆ ಅಪರಿಚಿತ ಯುವಕರು ಗುಂಡು ಹಾರಿಸಿದ್ದಾರೆ. ಈ ವೇಳೆ ತಿನೇರಿಯ ಯುವಕನ ತಲೆಗೆ ಗಾಯವಾಗಿದೆ ಎನ್ನಲಾಗಿದೆ. ಸಂಜೆ 6 ಗಂಟೆ ಸುಮಾರಿಗೆ ನಡೆದ ಈ ಹಿಂಸಾತ್ಮಕ ಘಟನೆಯು ಪ್ರದೇಶದಲ್ಲಿ ಉದ್ವಿಗ್ನತೆಯನ್ನು ಹೆಚ್ಚಿಸಿದೆ.

ರಾಮ್ ಕೃಪಾಲ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ ನಡೆಸಿದ ಬಗ್ಗೆ ದೂರು ದಾಖಲಾಗಿದೆ ಎಂದು ಪಾಟ್ನಾ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ತಿಳಿಸಿದ್ದಾರೆ.

ಮತ್ತಷ್ಟು ಓದಿ: LS Exit Poll Results 2024 Highlights: ಲೋಕಸಭೆ ಚುನಾವಣೆ ಎಕ್ಸಿಟ್​ ಪೋಲ್ ಹೈಲೈಟ್ಸ್

ಬಿಹಾರದ ಎಂಟು ಕ್ಷೇತ್ರಗಳಿಗೆ ನಡೆದ ಲೋಕಸಭಾ ಚುನಾವಣೆಯು ಶನಿವಾರ ನಡೆದ ಏಳನೇ ಮತ್ತು ಅಂತಿಮ ಹಂತದಲ್ಲಿ ಬಹುತೇಕ ಶಾಂತಿಯುತವಾಗಿ ನಡೆದಿದ್ದು, ಶೇ. 50.56 ರಷ್ಟು ಮತದಾನವಾಗಿದೆ.

ಪಾಟ್ನಾ ಸಾಹಿಬ್, ಪಟ್ಲಿಪುತ್ರ, ಅರ್ರಾ, ಕರಕಟ್, ಜೆಹಾನಾಬಾದ್, ಬಕ್ಸರ್, ನಳಂದಾ ಮತ್ತು ಜೆಹಾನಾಬಾದ್‌ನಲ್ಲಿ ಬೆಳಗ್ಗೆ 7 ರಿಂದ ಸಂಜೆ 6 ರವರೆಗೆ ಮತದಾನ ನಡೆಯಿತು. ಪಾಟಲಿಪುತ್ರದಲ್ಲಿ ಶೇ.56.91, ಬಕ್ಸರ್ (53.70%), ಕರಕತ್ (53.44%), ಜೆಹಾನಾಬಾದ್ (51.20%), ಸಸಾರಾಮ್ (51%), ಅರ್ರಾ (48.50%), ನಳಂದಾ (46.50%) ಮತ್ತು ಪಾಟ್ನಾ ಸಾಹಿಬ್ (45%) ಮತದಾನವಾಗಿದೆ.

ಯಾದವ್ ಅವರು ಪಾಟಲಿಪುತ್ರ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದು, ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಅವರ ಪುತ್ರಿ ಆರ್‌ಜೆಡಿಯ ಮಿಸಾ ಭಾರತಿ ವಿರುದ್ಧ ಸ್ಪರ್ಧಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 9:08 am, Sun, 2 June 24

ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಂಕುಠ ಏಕಾದಶಿ ದಿನ ತಿಮ್ಮಪ್ಪನ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್​ಕುಮಾರ್
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
ವೈಕುಂಠ ಏಕಾದಶಿ, ಚಿಕ್ಕತಿರುಪತಿಯ ವೆಂಕಟೇಶ್ವರನಿಗೆ ವಿಶೇಷ ಪೂಜೆ
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್