ಬಿಹಾರದ ಮನೆಯೊಂದರಲ್ಲಿ ಭಾರಿ ಸ್ಫೋಟ: ಓರ್ವ ಸಾವು, ಹಲವು ಮಂದಿಗೆ ಗಾಯ

ಬಿಹಾರದ ಭಾಗಲ್​ಪುರ ಜಿಲ್ಲೆಯ ಬಾಬರ್​ಗಂಜ್ ಪ್ರದೇಶದ ಮನೆಯೊಂದರಲ್ಲಿ ಸಂಭವಿಸಿದ ಸ್ಪೋಟದಲ್ಲಿ 17 ವರ್ಷದ ಬಾಲಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.

ಬಿಹಾರದ ಮನೆಯೊಂದರಲ್ಲಿ ಭಾರಿ ಸ್ಫೋಟ: ಓರ್ವ ಸಾವು, ಹಲವು ಮಂದಿಗೆ ಗಾಯ
ಸ್ಫೋಟ(ಸಾಂದರ್ಭಿಕ ಚಿತ್ರ)Image Credit source: India TV
Follow us
|

Updated on:Jun 25, 2023 | 10:42 AM

ಬಿಹಾರದ ಭಾಗಲ್​ಪುರ ಜಿಲ್ಲೆಯ ಬಾಬರ್​ಗಂಜ್ ಪ್ರದೇಶದ ಮನೆಯೊಂದರಲ್ಲಿ ಸಂಭವಿಸಿದ ಸ್ಪೋಟದಲ್ಲಿ 17 ವರ್ಷದ ಬಾಲಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಬಾಬರ್​ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಸೇನಾಬಾದ್ ಖುರೇಷಿ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿ ಶನಿವಾರ ಸಂಜೆ 5.30 ರ ಸುಮಾರಿಗೆ ಸ್ಫೋಟ ಸಂಭವಿಸಿದೆ.

ಸಿಲಿಂಡರ್ ಸ್ಫೋಟದಿಂದ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿದ್ದರೂ, ಘಟನೆಯ ಹಿಂದಿನ ನಿಖರವಾದ ಕಾರಣವನ್ನು ಇನ್ನೂ ತಿಳಿದುಬಂದಿಲ್ಲ.

ಸ್ಫೋಟದಿಂದಾಗಿ ಮೊಹಮ್ಮದ್ ಅಬ್ದುಲ್ ಗನಿ ಒಡೆತನದ ಮನೆಯ ಒಂದು ಭಾಗ ಕುಸಿದು ಬೆಂಕಿ ಹೊತ್ತಿಕೊಂಡಿತ್ತು. ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಆನಂದ್ ಕುಮಾರ್ ಮಾತನಾಡಿ, ಸಂಜೆ ಸಿಲಿಂಡರ್ ಸ್ಫೋಟದ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು.

ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಮೃತರನ್ನು ಮೊಹಮ್ಮದ್ ತೌಶಿಫ್ ಆಲಂ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟದ ಕಾರಣವನ್ನು ತಿಳಿಯಲು ಅಧಿಕಾರಿಗಳು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:42 am, Sun, 25 June 23

ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​