ಬಿಹಾರದ ಭಾಗಲ್ಪುರ ಜಿಲ್ಲೆಯ ಬಾಬರ್ಗಂಜ್ ಪ್ರದೇಶದ ಮನೆಯೊಂದರಲ್ಲಿ ಸಂಭವಿಸಿದ ಸ್ಪೋಟದಲ್ಲಿ 17 ವರ್ಷದ ಬಾಲಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ಬಾಬರ್ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹುಸೇನಾಬಾದ್ ಖುರೇಷಿ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿ ಶನಿವಾರ ಸಂಜೆ 5.30 ರ ಸುಮಾರಿಗೆ ಸ್ಫೋಟ ಸಂಭವಿಸಿದೆ.
ಸಿಲಿಂಡರ್ ಸ್ಫೋಟದಿಂದ ಸ್ಫೋಟ ಸಂಭವಿಸಿದೆ ಎಂದು ಪ್ರಾಥಮಿಕ ವರದಿಗಳು ಸೂಚಿಸಿದ್ದರೂ, ಘಟನೆಯ ಹಿಂದಿನ ನಿಖರವಾದ ಕಾರಣವನ್ನು ಇನ್ನೂ ತಿಳಿದುಬಂದಿಲ್ಲ.
ಸ್ಫೋಟದಿಂದಾಗಿ ಮೊಹಮ್ಮದ್ ಅಬ್ದುಲ್ ಗನಿ ಒಡೆತನದ ಮನೆಯ ಒಂದು ಭಾಗ ಕುಸಿದು ಬೆಂಕಿ ಹೊತ್ತಿಕೊಂಡಿತ್ತು.
ಹಿರಿಯ ಪೊಲೀಸ್ ಅಧೀಕ್ಷಕ (ಎಸ್‌ಎಸ್‌ಪಿ) ಆನಂದ್ ಕುಮಾರ್ ಮಾತನಾಡಿ, ಸಂಜೆ ಸಿಲಿಂಡರ್ ಸ್ಫೋಟದ ಬಗ್ಗೆ ನಮಗೆ ಮಾಹಿತಿ ಸಿಕ್ಕಿತು.
ವಿಧಿ ವಿಜ್ಞಾನ ಪ್ರಯೋಗಾಲಯ (ಎಫ್‌ಎಸ್‌ಎಲ್), ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್), ಮತ್ತು ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿವೆ.
ಮೃತರನ್ನು ಮೊಹಮ್ಮದ್ ತೌಶಿಫ್ ಆಲಂ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಫೋಟದ ಕಾರಣವನ್ನು ತಿಳಿಯಲು ಅಧಿಕಾರಿಗಳು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:42 am, Sun, 25 June 23