ಬಿಹಾರದ ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು

ಬಿಹಾರದ ಹಾಜಿಪುರದಲ್ಲಿ ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವನ್ನಪ್ಪಿದ್ದು, ಐವರನ್ನು ರಕ್ಷಿಸಲಾಗಿದೆ. ಭೋಜನಕೂಟಕ್ಕೆ ತೆರಳುತ್ತಿದ್ದ ದೋಣಿಯಲ್ಲಿ ಸಾಮರ್ಥ್ಯಕ್ಕಿಂತ ಹೆಚ್ಚು ಜನರನ್ನು ಕರೆದೊಯ್ಯಲಾಗಿತ್ತು. ಈ ದುರಂತವು ನದಿ ಸುರಕ್ಷತಾ ನಿಯಮಗಳ ಉಲ್ಲಂಘನೆಯ ಬಗ್ಗೆ ಮತ್ತೆ ಆತಂಕ ಮೂಡಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಘಟನೆಗೆ ನಿಖರ ಕಾರಣಗಳ ಕುರಿತು ತನಿಖೆ ನಡೆಯುತ್ತಿದೆ.

ಬಿಹಾರದ ಗಂಗಾ ನದಿಯಲ್ಲಿ ದೋಣಿ ಮುಳುಗಿ 11 ಮಂದಿ ಸಾವು
ಬಿಹಾರ ದೋಣಿ ದುರಂತ

Updated on: Oct 13, 2026 | 10:45 PM

ಪಾಟ್ನಾ, ಅ.13: ಬಿಹಾರದ ಹಾಜಿಪುರ ಜಿಲ್ಲೆಯ ರಾಂಪುರ ಶ್ಯಾಮಚಂದ್ ಗ್ರಾಮದ ಬಳಿ ಗಂಗಾ ನದಿಯಲ್ಲಿ ಸುಮಾರು 15 ರಿಂದ 20 ಜನರನ್ನು ಒಯ್ಯುತ್ತಿದ್ದ ದೋಣಿಯೊಂದು ಮುಳುಗಿ 11 ಜನರು ದಾರುಣವಾಗಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಐದು ಜನರನ್ನು ಯಶಸ್ವಿಯಾಗಿ ರಕ್ಷಿಸಲಾಗಿದ್ದು, ರಘೋಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.

ಪ್ರಾಥಮಿಕ ವರದಿಗಳ ಪ್ರಕಾರ, ಪ್ರಯಾಣಿಕರು ನದಿಯ ಇನ್ನೊಂದು ದಂಡೆಯಲ್ಲಿ ಆಯೋಜಿಸಲಾಗಿದ್ದ ಭೋಜನಕೂಟದಲ್ಲಿ (Feast) ಪಾಲ್ಗೊಳ್ಳಲು ದೋಣಿಯಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ನಿಯಂತ್ರಣ ತಪ್ಪಿದ ದೋಣಿ ನದಿಯ ಮಧ್ಯಭಾಗದಲ್ಲಿ ತಲೆಕೆಳಗಾಗಿ ಮುಳುಗಿದೆ.

ಆರಂಭದಲ್ಲಿ 5 ರಿಂದ 8 ಜನರು ಮೃತಪಟ್ಟಿರಬಹುದು ಎಂದು ಅಂದಾಜಿಸಲಾಗಿತ್ತು. ಆದರೆ ನಂತರ ಪರಿಸ್ಥಿತಿಯ ಗಂಭೀರತೆಯನ್ನು ಸ್ಪಷ್ಟಪಡಿಸಿದ ವೈಶಾಲಿ ಜಿಲ್ಲಾಧಿಕಾರಿ , ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದು, 5 ಜನರನ್ನು ರಕ್ಷಿಸಲಾಗಿದೆ ಎಂದು ಅಧಿಕೃತವಾಗಿ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಚಲಿಸುತ್ತಿದ್ದ ರೈಲಿನಲ್ಲಿ ಮೊಬೈಲ್ ಕದಿಯಲು ಹೋಗಿ ಪ್ರಯಾಣಿಕರ ಕೈಗೆ ಸಿಕ್ಕಿ ಕಿಟಕಿ ಹಿಡಿದು ನೇತಾಡಿದ ಕಳ್ಳ

ಸ್ಥಳೀಯ ಆಡಳಿತ ಹಾಗೂ ರಕ್ಷಣಾ ಪಡೆಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಚುರುಕುಗೊಳಿಸಿವೆ. ನದಿಯಲ್ಲಿ ಯಾರಾದರೂ ನಾಪತ್ತೆಯಾಗಿದ್ದಾರೆಯೇ ಎಂಬ ಬಗ್ಗೆ ತನಿಖೆ ಹಾಗೂ ಶೋಧ ಕಾರ್ಯ ಮುಂದುವರಿದಿದೆ. ಘಟನೆಗೆ ನಿಖರವಾದ ಕಾರಣ ಹಾಗೂ ಮೃತರ ಗುರುತು ಇನ್ನು ತಿಳಿಯಬೇಕಿದೆ. ನದಿಗಳಲ್ಲಿ ಸುರಕ್ಷತಾ ನಿಯಮಗಳನ್ನು ಗಾಳಿಗೆ ತೂರಿ ಮಿತಿಗಿಂತ ಹೆಚ್ಚು ಜನರನ್ನು ದೋಣಿಗಳಲ್ಲಿ ಕರೆದೊಯ್ಯುವ ಪ್ರವೃತ್ತಿಯ ಬಗ್ಗೆ ಈ ದುರಂತವು ಮತ್ತೆ ಆತಂಕ ಮೂಡಿಸಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ಷಯ್​ ಪಲ್ಲಮಜಲು​​

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
Loading...
Unable to load recommendations.
Follow Us