Bihar Madrasa Blast: ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟ, ಮೌಲ್ವಿ ಸೇರಿ ಇಬ್ಬರಿಗೆ ಗಾಯ

ಬಿಹಾರದಲ್ಲಿ ಭಾರಿ ಅಪಘಾತ ಸಂಭವಿಸಿದೆ. ಮದರಸಾದಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಇಬ್ಬರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ, ಛಾಪ್ರಾದ ಗರ್ಖಾ ಪೊಲೀಸ್ ಠಾಣೆ ವ್ಯಾಪ್ತಿಯ ಮೋತಿರಾಜ್‌ಪುರದ ಮರಸಾ ಆವರಣದಲ್ಲಿ ಭಾರೀ ಸ್ಫೋಟ ಸಂಭವಿಸಿದೆ ಎಂದು ಹೇಳಲಾಗಿದೆ. ಸ್ಫೋಟದ ಸದ್ದು ಕೇಳಿ ಅಕ್ಕಪಕ್ಕದ ಜನರು ಜಮಾಯಿಸಿದರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಇನ್ನೂ ಶೋಧ ನಡೆಸುತ್ತಿದ್ದಾರೆ.

Bihar Madrasa Blast: ಬಿಹಾರದ ಮದರಸಾದಲ್ಲಿ ಬಾಂಬ್ ಸ್ಫೋಟ, ಮೌಲ್ವಿ ಸೇರಿ ಇಬ್ಬರಿಗೆ ಗಾಯ
ಮದರಸಾImage Credit source: Amarujala.com
Follow us
|

Updated on: May 16, 2024 | 9:53 AM

ಬಿಹಾರದ ಮದರಸಾ(Madrasa)ದಲ್ಲಿ ಬಾಂಬ್​ಸ್ಫೋಟ(Bomb Blast)ಗೊಂಡು ಮೌಲ್ವಿ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಛಾಪ್ರಾ ಜಿಲ್ಲೆಯ ಗರ್ಖಾದ ಮೋತಿರಾಜ್‌ಪುರದ ಮದರಸಾ ಬಳಿ ಬಾಂಬ್ ತಯಾರಿಸುವ ವೇಳೆ ಸ್ಫೋಟ ಸಂಭವಿಸಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಗೊಂಡವರಲ್ಲಿ ಮಸೀದಿಯ ಮೌಲ್ವಿ ಇಮಾಮುದ್ದೀನ್ ಕೂಡ ಸೇರಿದ್ದಾರೆ.

ಮದರಸಾದೊಳಗೆ ಬಿದ್ದಿದ್ದ ಬಾಂಬ್​ ಅನ್ನು ಅಲ್ಲಿದ್ದ ವಿದ್ಯಾರ್ಥಿಯೊಬ್ಬ ಚೆಂಡು ಎಂದು ತಿಳಿದು ಎಸೆದಿದ್ದಾನೆ. ಘಟನೆಯಲ್ಲಿ ಮೌಲ್ವಿ ಹಾಗೂ ವಿದ್ಯಾರ್ಥಿಗೆ ಗಂಭೀರ ಗಾಯಗಳಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಾಂಬ್ ತಯಾರಿಸುವಾಗ ಸ್ಫೋಟ ಸಂಭವಿಸಿದ್ದು, ಇಮಾಮುದ್ದೀನ್ ಮತ್ತು ವಿದ್ಯಾರ್ಥಿಯೊಬ್ಬ ಗಾಯಗೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಬಗ್ಗೆ ಮಾಹಿತಿ ಲಭಿಸಿದ ತಕ್ಷಣ ಹೆಚ್ಚುವರಿ ಎಸ್ಪಿ ರಾಜ್ ಕಿಶೋರ್ ಸಿಂಗ್ ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದಾರೆ. ಫೋರೆನ್ಸಿಕ್ ತಂಡವನ್ನು ಸ್ಥಳಕ್ಕೆ ಕರೆಸಲಾಗಿದೆ ಎಂದು ರಾಜಕಿಶೋರ್ ಸಿಂಗ್ ಹೇಳಿದ್ದಾರೆ. ಘಟನೆಯ ನಂತರ ಆ ಪ್ರದೇಶದಲ್ಲಿ ನೀರವ ಮೌನ ಆವರಿಸಿತ್ತು.

ಮೊದಲು ಎಲ್ಲರೂ ಸಿಲಿಂಡರ್ ಸ್ಫೋಟ ಎಂದು ಹೇಳಲು ಶುರು ಮಾಡಿದ್ದರು. ಆದರೆ, ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಇಲ್ಲಿ ಬಾಂಬ್ ಸ್ಫೋಟ ನಡೆದಿರುವುದು ಬೆಳಕಿಗೆ ಬಂದಿದ್ದು, ಬಳಿಕ ವಿಧಿವಿಜ್ಞಾನ ತಂಡವನ್ನು ಕರೆಸಲಾಗಿದೆ. ಗಾರ್ಖಾದ ಮೋತಿ ರಾಜ್‌ಪುರ ಪ್ರದೇಶವು ಈಗಾಗಲೇ ಪಟಾಕಿ ತಯಾರಿಕೆಯ ವಿಷಯಕ್ಕೆ ಕುಖ್ಯಾತಿ ಪಡೆದಿದೆ.

ಮತ್ತಷ್ಟು ಓದಿ: Bomb Blast: ಹೂಗ್ಲಿಯಲ್ಲಿ ಬಾಂಬ್​ ಸ್ಫೋಟ, ಓರ್ವ ಸಾವು, ಇಬ್ಬರಿಗೆ ಗಾಯ

ಪ್ರತಿದಿನ ಇಂತಹ ಅವಘಡಗಳು ನಡೆಯುತ್ತಲೇ ಇವೆ. ಈ ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಸರನ್ ಎಸ್ಪಿ ಗೌರವ್ ಮಂಗಲ್ ಪ್ರಕರಣದ ತನಿಖೆಗಾಗಿ ವಿಶೇಷ ತಂಡವನ್ನು ರಚಿಸಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಈ ಘಟನೆ ಅತ್ಯಂತ ಮಹತ್ವ ಪಡೆದಿದೆ. ಈ ಬಗ್ಗೆ ಪೊಲೀಸರು ಪ್ರತಿಯೊಂದು ಕೋನದಲ್ಲಿ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ವಿಷಯ ಬಹಿರಂಗಗೊಳ್ಳಲಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಸದ್ಯ ಪೊಲೀಸರು ಗಾಯಾಳುಗಳನ್ನು ಚಿಕಿತ್ಸೆಗಾಗಿ ಪಾಟ್ನಾಗೆ ಕಳುಹಿಸಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ. ವಿಧಿವಿಜ್ಞಾನ ತನಿಖಾ ವರದಿ ಬಂದ ನಂತರವಷ್ಟೇ ಬಾಂಬ್ ಎಷ್ಟು ಶಕ್ತಿಶಾಲಿ ಎಂಬುದು ಸ್ಪಷ್ಟವಾಗಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ಹನುಮನ ಫೋಟೋ ಇರಲೇಬೇಕು ಯಾಕೆ ಗೊತ್ತಾ? ವಿಡಿಯೋ ನೋಡಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
ಈ ರಾಶಿಯ ರಾಜಕಾರಣಿಗಳು ಬಹಳ ಜಾಗರೂಕತೆಯಿಂದ ಜವಾಬ್ದಾರಿಯನ್ನು ನಿರ್ವಹಿಸಿ
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
‘ಪ್ರಕೃತಿ ವಿಕೋಪದಲ್ಲಿ ನೂರಾರು ಜನ ಸಾಯ್ತಾರೆ, ಯಾರಿಗೆ ಶಿಕ್ಷೆ ಸಿಗುತ್ತೆ?’
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಮುಂಗಾರು ಮಳೆಗೆ ಚಾರ್ಮಾಡಿ ಘಾಟ್​ನಲ್ಲಿ ಜಲವೈಭವ; ನೂರಾರು ಜಲಪಾತಗಳ ಸೃಷ್ಟಿ
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸತತ ಮಳೆ; ಜಿಗಣೆ ಕಾಟಕ್ಕೆ ಹೈರಾಣಾದ ಪ್ರವಾಹ ತಂಡದ ಅಧಿಕಾರಿಗಳು
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಸುಧಾಕರ್ ಅಭಿನಂದನಾ ಕಾರ್ಯಕ್ರಮದಲ್ಲಿ ಬಾಡೂಟ: ಡ್ರಿಂಕ್ಸ್​​ಗೆ ಮುಗಿಬಿದ್ದ ಜನ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಜಲಾವೃತವಾದ ಸೇತುವೆ ಮೇಲೆ ಸಂಚಾರ;ನೀರು ರಭಸವಾಗಿ ಹರಿಯುತ್ತಿದ್ದರೂ ಡೋಂಟ್​ಕೇರ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಸ್ವಲ್ಪ ಯಾಮಾರಿದ್ರು ಅಪಾಯ ಖಚಿತ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
ಸಂಸದ ಡಾ.ಕೆ ಸುಧಾಕರ್​ ಕಾರ್ಯಕ್ರಮದಲ್ಲಿ ಭರ್ಜರಿ ಬಾಡೂಟ ಜೊತೆ ಮದ್ಯ ಆಯೋಜನೆ
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು
‘ಯಜಮಾನ’ ತಂದುಕೊಟ್ಟ ಭರ್ಜರಿ ಲಾಭದ ಬಗ್ಗೆ ನಿರ್ಮಾಪಕರ ಮಾತು