ಉತ್ತರ ಪ್ರದೇಶದಿಂದ ಬಿಹಾರಕ್ಕೆ ತೆರಳುತ್ತಿದ್ದ ರೈಲಿನಲ್ಲಿ ಕಾಣಿಸಿಕೊಂಡ ಬೆಂಕಿ, 19 ಮಂದಿಗೆ ಗಂಭೀರ ಗಾಯ
ಗುರುವಾರ ಮುಂಜಾನೆ ಉತ್ತರ ಪ್ರದೇಶದ ಇಟಾವಾದಲ್ಲಿ ದೆಹಲಿ-ಸಹರ್ಸಾ ವೈಶಾಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 19 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಗುರುವಾರ ಮುಂಜಾನೆ ಉತ್ತರ ಪ್ರದೇಶದ ಇಟಾವಾದಲ್ಲಿ ದೆಹಲಿ-ಸಹರ್ಸಾ ವೈಶಾಲಿ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್‌ನ ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 19 ಪ್ರಯಾಣಿಕರು ಗಾಯಗೊಂಡಿದ್ದಾರೆ.
ಎಸ್6 ಕೋಚ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮುಂಜಾನೆ 2 ರಿಂದ 2:15 ರ ನಡುವೆ ಘಟನೆ ನಡೆದಿದೆ. ಬೆಂಕಿ ಅನಾಹುತಕ್ಕೆ ಕಾರಣ ಏನು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.
ಉಸಿರಾಟದ ತೊಂದರೆಯಿಂದಾಗಿ ಹನ್ನೊಂದು ಜನರನ್ನು ಪಿಜಿಐಗೆ ಕಳುಹಿಸಲಾಗಿದೆ. ಉಳಿದ ಎಂಟು ಮಂದಿಗೆ ಸಣ್ಣಪುಟ್ಟ ಸುಟ್ಟ ಗಾಯಗಳನ್ನು ಹೊಂದಿದವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಒಂದು ಕೋಚ್ ಬೆಂಕಿಯಲ್ಲಿ ಸುಟ್ಟು ಹೋಗಿದ್ದರೆ, ಪಕ್ಕದ ಎರಡು ಬೋಗಿಗಳು ಭಾಗಶಃ ಹಾನಿಗೊಳಗಾಗಿವೆ ಮತ್ತು ನಾಲ್ಕನೇ ಕೋಚ್ ಹೊಗೆಯಿಂದ ತುಂಬಿದೆ. ಎಲ್ಲಾ ನಾಲ್ಕು ಬೋಗಿಗಳನ್ನು ರೈಲಿನಿಂದ ಬೇರ್ಪಡಿಸಲಾಗಿದೆ ಎಂದು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಘಟನೆಯಲ್ಲಿ ಹಲವು ಪ್ರಯಾಣಿಕರು ತಮ್ಮ ವಸ್ತುಗಳನ್ನು ಕಳೆದುಕೊಂಡಿದ್ದಾರೆ ಎಂದು ಅವರು ಹೇಳಿದರು.
ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (CPRO) ಹಿಮಾಂಶು ಉಪಾಧ್ಯಾಯ, ಇಟಾವಾ ಬಳಿಯ ಸರಾಯ್ ಭೋಪತ್ ಜಂಕ್ಷನ್‌ನಲ್ಲಿನ ಸಿಬ್ಬಂದಿ ನವದೆಹಲಿ-ದರ್ಭಾಂಗಾ ವಿಶೇಷ ಎಕ್ಸ್‌ಪ್ರೆಸ್‌ನ ಕೋಚ್ ಸಂಖ್ಯೆ ಎಸ್ 1 ರಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದರು. ರೈಲನ್ನು ತಕ್ಷಣವೇ ನಿಲ್ಲಿಸಲಾಯಿತು ಮತ್ತು ಎಲ್ಲಾ ಪ್ರಯಾಣಿಕರನ್ನು ಸ್ಥಳಾಂತರಿಸಲಾಯಿತು. ಎಚ್ಚೆತ್ತ ರೈಲ್ವೆ ಅಧಿಕಾರಿಗಳು ಇಂದು ದೊಡ್ಡ ದುರಂತವನ್ನು ತಪ್ಪಿಸಿದರು ಎಂದು ಅವರು ಹೇಳಿದರು.
ಬೆಂಕಿ ಕಾಣಿಸಿಕೊಂಡಾಗ ನಾವು ಹೇಗೋ ಕೋಚ್‌ನ ಕಿಟಕಿಯಿಂದ ಹೊರಬಂದೆವು. ಕೋಚ್‌ನಲ್ಲಿ ಬೆಂಕಿಯನ್ನು ನಂದಿಸಲು ಸರಿಯಾದ ಮಾರ್ಗಗಳಿಲ್ಲ. ಕೋಚ್‌ನಿಂದ ಹೊರಬರುವಾಗ ಕೆಲವು ಜನರು ಗಾಯಗೊಂಡಿದ್ದಾರೆ ಎಂದು ಪ್ರಯಾಣಿಕರೊಬ್ಬರು ಹೇಳಿದರು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:10 am, Thu, 16 November 23