AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Big News: ಬಿಹಾರದಲ್ಲಿ ಸಚಿವ ಸಂಪುಟ ವಿಸ್ತರಣೆ; ತೇಜ್ ಪ್ರತಾಪ್ ಸೇರಿ 31 ನೂತನ ಸಚಿವರ ಪ್ರಮಾಣವಚನ ಸ್ವೀಕಾರ

ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಬಿಹಾರದ ಹೊಸ ಸಂಪುಟದ ಭಾಗವಾಗಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಯಾದವ್ ಸೇರಿದಂತೆ 31 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.

Big News: ಬಿಹಾರದಲ್ಲಿ ಸಚಿವ ಸಂಪುಟ ವಿಸ್ತರಣೆ; ತೇಜ್ ಪ್ರತಾಪ್ ಸೇರಿ 31 ನೂತನ ಸಚಿವರ ಪ್ರಮಾಣವಚನ ಸ್ವೀಕಾರ
ತೇಜ್ ಪ್ರತಾಪ್ ಸೇರಿ 31 ನೂತನ ಸಚಿವರ ಪ್ರಮಾಣವಚನ ಸ್ವೀಕಾರ
TV9 Web
| Edited By: |

Updated on:Aug 16, 2022 | 12:58 PM

Share

ಪಾಟ್ನಾ: ಬಿಹಾರದಲ್ಲಿ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಂಡಿದ್ದ ನಿತೀಶ್ ಕುಮಾರ್ (Nitish Kumar) ಆರ್​ಜೆಡಿಯ ತೇಜಸ್ವಿ ಯಾದವ್ (Tejashwi Yadav) ಅವರೊಂದಿಗೆ ಮತ್ತೆ ಮಹಾಘಟಬಂಧನ್ ಸರ್ಕಾರವನ್ನು ರಚಿಸಿದ್ದಾರೆ. ಇಂದು ನಿತೀಶ್ ಕುಮಾರ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾಗಿದೆ. ಇದರಲ್ಲಿ ಜೆಡಿಯುಗಿಂತ ಆರ್‌ಜೆಡಿಗೆ ಹೆಚ್ಚು ಸಚಿವ ಸ್ಥಾನ ಸಿಕ್ಕಿದೆ. ಹಿಂದಿನ ಮಹಾಮೈತ್ರಿಕೂಟ ಸರ್ಕಾರಕ್ಕಿಂತ ಕಾಂಗ್ರೆಸ್‌ನ ಸ್ಥಾನಮಾನ ಕಡಿಮೆಯಾಗಿದೆ. ಜೆಡಿಯು ಸಂಸದೀಯ ಪಕ್ಷದ ಅಧ್ಯಕ್ಷ ಉಪೇಂದ್ರ ಕುಶ್ವಾಹಾ ಅವರಿಗೆ ಭಾರೀ ಹಿನ್ನಡೆಯಾಗಿದೆ. ಉಪಮುಖ್ಯಮಂತ್ರಿಯಾಗಿರುವ ತೇಜಸ್ವಿ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಸೇರಿದಂತೆ 31 ಶಾಸಕರು ಇಂದು ಬಿಹಾರದ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದಲ್ಲಿ ಬಿಹಾರದ ಹೊಸ ಸಂಪುಟದ ಭಾಗವಾಗಿ ಉಪಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಯಾದವ್ ಸೇರಿದಂತೆ 31 ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು. ನಿರೀಕ್ಷೆಯಂತೆ ರಾಜ್ಯದಲ್ಲಿ ಏಕೈಕ ದೊಡ್ಡ ಪಕ್ಷವಾಗಿರುವ ಆರ್‌ಜೆಡಿಗೆ ಸಚಿವ ಸ್ಥಾನದ ಸಿಂಹಪಾಲು ಸಿಕ್ಕಿದೆ. ಸಂಪುಟ ವಿಸ್ತರಣೆಗೂ ಮುನ್ನ ಜೆಡಿಯು ಶಾಸಕ ಲೇಶಿ ಸಿಂಗ್ ಅವರು ಹೊಸ ಸಂಪುಟದಲ್ಲಿ ಸ್ಥಾನ ಪಡೆಯಲಿದ್ದಾರೆ ಎಂದು ಮಂಗಳವಾರ ಖಚಿತಪಡಿಸಿದ್ದರು.

ಇದನ್ನೂ ಓದಿ: Bihar Politics: ದೆಹಲಿಯಲ್ಲಿ ಇಂದು ಜೆಪಿ ನಡ್ಡಾ ನೇತೃತ್ವದಲ್ಲಿ ಬಿಹಾರ ಬಿಜೆಪಿ ಕೋರ್ ಕಮಿಟಿ ಸಭೆ

ಸಂಪುಟ ವಿಸ್ತರಣೆಯ ಭಾಗವಾಗಿ ಇಂದು ಬಿಹಾರದ 31 ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದು, ನಿರೀಕ್ಷೆಯಂತೆ ಆರ್‌ಜೆಡಿ ಸಚಿವ ಸ್ಥಾನಗಳಲ್ಲಿ ಸಿಂಹಪಾಲು ಪಡೆಯುವಲ್ಲಿ ಯಶಸ್ವಿಯಾಗಿದೆ. ಆರ್​ಜೆಡಿ ಬಳಿಕ ನಿತೀಶ್ ಕುಮಾರ್ ಅವರ ಜೆಡಿಯು ಪಕ್ಷಕ್ಕೆ ಹೆಚ್ಚು ಸಚಿವ ಸ್ಥಾನ ಸಿಕ್ಕಿದೆ. ಇಂದು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಆರ್‌ಜೆಡಿ ಶಾಸಕರಲ್ಲಿ ಉಪ ಮುಖ್ಯಮಂತ್ರಿ ತೇಜಸ್ವಿ ಪ್ರಸಾದ್ ಯಾದವ್ ಅವರ ಸಹೋದರ ತೇಜ್ ಪ್ರತಾಪ್ ಯಾದವ್ ಕೂಡ ಸೇರಿದ್ದಾರೆ. ಇದೇ ವೇಳೆ ಜೆಡಿಯುನ ಲೇಶಿ ಸಿಂಗ್ ಕೂಡ ಪ್ರಮಾಣ ವಚನ ಸ್ವೀಕರಿಸಿದರು.

ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ನೇತೃತ್ವದ ಬಿಹಾರ ಸರ್ಕಾರದಲ್ಲಿ ಪ್ರಸ್ತುತ ಕಾಂಗ್ರೆಸ್ ಕೋಟಾದ ಇಬ್ಬರು ಸಚಿವರು ಮಾತ್ರ ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಲಾಲೂ ಪ್ರಸಾದ್ ಯಾದವ್ ಅವರ ಆರ್‌ಜೆಡಿ, ಕಾಂಗ್ರೆಸ್ ಮತ್ತು ಜಿತನ್ ರಾಮ್ ಮಾಂಝಿ ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಸೇರಿದಂತೆ ಮಹಾಘಟಬಂಧನ್ (ಮಹಾಮೈತ್ರಿಕೂಟ) ಭಾಗವಾಗಿರುವ ವಿವಿಧ ಪಕ್ಷಗಳಿಂದ ಒಟ್ಟು 31 ಸಚಿವರು ಇಂದು ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಪಾಟ್ನಾದ ರಾಜಭವನದಲ್ಲಿ ಇಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ.

ಆರ್‌ಜೆಡಿಯಿಂದ ತೇಜ್ ಪ್ರತಾಪ್ ಯಾದವ್, ಸುರೇಂದ್ರ ಯಾದವ್, ಲಲಿತ್ ಯಾದವ್, ಕುಮಾರ್ ಸರ್ವಜೀತ್, ಸುರೇಂದ್ರ ರಾಮ್, ಶಹನವಾಜ್ ಆಲಂ, ಸಮೀರ್ ಮಹಾಸೇತ್, ಭಾರತ್ ಮಂಡಲ್, ಅನಿತಾ ದೇವಿ ಮತ್ತು ಸುಧಾಕರ್ ಸಿಂಗ್ ಅವರಿಗೆ ಸಚಿವ ಸ್ಥಾನ ನೀಡಲಾಗಿದೆ. ಕಾಂಗ್ರೆಸ್‌ನಿಂದ ಅಫಾಕ್ ಆಲಂ ಮತ್ತು ಮುರಾರಿ ಲಾಲ್ ಗೌತಮ್ ಮತ್ತು ಎಚ್‌ಎಎಂನಿಂದ ಸಂತೋಷ್ ಸುಮನ್ ಕೂಡ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೆಡಿಯುನಿಂದ ವಿಜಯ್ ಕುಮಾರ್ ಚೌಧರಿ, ಅಶೋಕ್ ಚೌಧರಿ, ಸಂಜಯ್ ಝಾ, ಮದನ್ ಸಾಹ್ನಿ, ಜಯಂತ್ ರಾಜ್, ಶೀಲಾ ಮಂಡಲ್, ಬಿಜೇಂದ್ರ ಯಾದವ್, ಶ್ರವಣ್ ಕುಮಾರ್, ಸುನಿಲ್ ಕುಮಾರ್ ಮತ್ತು ಜಮಾ ಖಾನ್ ಮತ್ತಿತರರು ಪ್ರಮಾಣವಚನ ಸ್ವೀಕರಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:44 pm, Tue, 16 August 22

ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ