ಜಾತಿ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನ ನಡೆಯುತ್ತಿದೆ: ಪ್ರಧಾನಿ ಮೋದಿ

ಪ್ರತಿಪಕ್ಷಗಳು ಜಾತಿಯ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರಧಾನಿ ಮೋದಿ ಆರೋಪಿಸಿದ್ದಾರೆ. ಬಿಹಾರ ಸರ್ಕಾರವು ಬಿಡುಗಡೆ ಮಾಡಿರುವ ಜಾತಿ ಗಣತಿಯ ವರದಿ ರಾಜಕೀಯ ವಿವಾದವನ್ನು ಸೃಷ್ಟಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ. ಯಾವುದೇ ಪಕ್ಷ ಅಥವಾ ಹೆಸರನ್ನು ಉಲ್ಲೇಖಿಸದೆ ವಾಗ್ದಾಳಿ ನಡೆಸಿದ್ದಾರೆ. ಆಗಲೂ ಅವರು ಬಡವರ ಭಾವನೆಗಳೊಂದಿಗೆ ಆಟವಾಡುತ್ತಿದ್ದರು, ಇಂದಿಗೂ ಅದೇ ಆಟವನ್ನು ಮುಂದುವರೆಸಿದ್ದಾರೆ. ಜಾತಿಯ ಹೆಸರಿನಲ್ಲಿ ದೇಶ ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಜಾತಿ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನ ನಡೆಯುತ್ತಿದೆ: ಪ್ರಧಾನಿ ಮೋದಿ
ನರೇಂದ್ರ ಮೋದಿImage Credit source: Mint
Follow us
ನಯನಾ ರಾಜೀವ್
|

Updated on: Oct 03, 2023 | 10:14 AM

ಪ್ರತಿಪಕ್ಷಗಳು ಜಾತಿಯ ಹೆಸರಿನಲ್ಲಿ ದೇಶವನ್ನು ವಿಭಜಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ(Narendra Modi) ಆರೋಪಿಸಿದ್ದಾರೆ. ಬಿಹಾರ ಸರ್ಕಾರವು ಬಿಡುಗಡೆ ಮಾಡಿರುವ ಜಾತಿ ಗಣತಿಯ ವರದಿ ರಾಜಕೀಯ ವಿವಾದವನ್ನು ಸೃಷ್ಟಿಸುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಈ ಹೇಳಿಕೆ ನೀಡಿದ್ದಾರೆ. ಯಾವುದೇ ಪಕ್ಷ ಅಥವಾ ಹೆಸರನ್ನು ಉಲ್ಲೇಖಿಸದೆ ವಾಗ್ದಾಳಿ ನಡೆಸಿದ್ದಾರೆ. ಆಗಲೂ ಅವರು ಬಡವರ ಭಾವನೆಗಳೊಂದಿಗೆ ಆಟವಾಡುತ್ತಿದ್ದರು, ಇಂದಿಗೂ ಅದೇ ಆಟವನ್ನು ಮುಂದುವರೆಸಿದ್ದಾರೆ. ಜಾತಿಯ ಹೆಸರಿನಲ್ಲಿ ದೇಶ ಒಡೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದರು.

ಸಮಾಜವನ್ನು ಜಾತಿಯ ಆಧಾರದ ಮೇಲೆ ವಿಭಜಿಸುವ ಪ್ರಯತ್ನವನ್ನು ಪಾಪ ಎಂದು ಮೋದಿಯವರು ಬಣ್ಣಿಸಿದ್ದಾರೆ. ಕೆಲವರು ದೇಶದ ಪ್ರಗತಿ ಹಾಗೂ ಅಭಿವೃದ್ಧಿಯನ್ನು ದ್ವೇಷಿಸುತ್ತಾರೆ, ಅವರು ಕೇವಲ ತಮ್ಮ ಭವಿಷ್ಯವನ್ನು ಮಾತ್ರ ನೋಡುತ್ತಿದ್ದಾರೆ. ಚಿಂತನೆ ಇಲ್ಲದವರು ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ.

ಪ್ರತಿಪಕ್ಷಗಳಿಗೆ ಯಾವುದೇ ಮುಂದಾಲೋಚನೆ, ದೇಶದ ಬಗ್ಗೆ ಚಿಂತನೆಯಾಗಲೀ, ಮಾರ್ಗಸೂಚಿಯಾಗಲೀ ಇಲ್ಲ. ಬಿಜೆಪಿ ನೇತೃತ್ವದಡಿಯಲ್ಲಿ ದೇಶದ ಪ್ರಗತಿಯನ್ನು ಅವರು ಇಷ್ಟಪಡುವುದಿಲ್ಲ, ಜಾಗತಿಕ ವೇದಿಕೆಯಲ್ಲಿ ದೇಶವನ್ನು ಹೊಗಳುವುದು ಅವರಿಗೆ ಇಷ್ಟವಿಲ್ಲ, ಇಡೀ ವಿಶ್ವವೇ ಭಾರತದ ಕೀರ್ತಿಯನ್ನು ಹಾಡಿ ಹೊಗಳುತ್ತಿದೆ ಎಂದು ಹೇಳಿದರು. ಇನ್ನೊಂದೆಡೆ, ದೇಶದಲ್ಲಿ ಕಾಂಗ್ರೆಸ್​ ಮತ್ತೆ ಅಧಿಕಾರಕ್ಕೆ ಬಂದರೆ ಜಾತಿವಾರು ಜನಗಣತಿ ನಡೆಸುವುದಾಗಿ ಕಾಂಗ್ರೆಸ್​ ಭರವಸೆ ನೀಡಿದೆ.

ಮತ್ತಷ್ಟು ಓದಿ: ಜಾತಿ ಆಧಾರಿತ ಜನಗಣತಿ ವರದಿ ಬಿಡುಗಡೆ ಮಾಡಿದ ಬಿಹಾರ ಸರ್ಕಾರ: OBC ಶೇ.63, ಸಾಮಾನ್ಯ ವರ್ಗ ಶೇ.15.52

ಬಿಹಾರ ಜಾತಿ ಜನಗಣತಿ:ಜಾತಿ ಆಧಾರಿತ ಸಮೀಕ್ಷೆ ನಡೆಸುತ್ತಿದ್ದ ಬಿಹಾರ ಸರ್ಕಾರ ಅಂತಿಮ ಅಂಕಿ ಅಂಶಗಳನ್ನು ಬಿಡುಗಡೆ ಮಾಡಿದೆ. ಸಮೀಕ್ಷೆಯ ಪ್ರಕಾರ, ಒಟ್ಟು 13,07,25,310 ಜನಸಂಖ್ಯೆ ಇದ್ದು, ಇತರ ಹಿಂದುಳಿದ ವರ್ಗ (OBC) ಮತ್ತು ಅತ್ಯಂತ ಹಿಂದುಳಿದ ವರ್ಗಗಳ (EBC) ವರ್ಗದಲ್ಲಿ 63 ಪ್ರತಿಶತದಷ್ಟು ಜನರನ್ನು ಹೊಂದಿದೆ.

ಒಟ್ಟು ಜನಸಂಖ್ಯೆಯಲ್ಲಿ 6,41,31,992 ಪುರುಷರು, 6,11,38,460 ಮಹಿಳೆಯರು, 2,836 ತೃತೀಯ ಲಿಂಗಿಗಳಿದ್ದಾರೆ. ಇದರಲ್ಲಿ 19ರಷ್ಟು ಜನರನ್ನು ಪರಿಶಿಷ್ಟ ಜಾತಿ, 1.68% ಪರಿಶಿಷ್ಟ ಪಂಗಡ, 27.12% ಒಬಿಸಿ, 15.52% ಮೀಸಲಾತಿ ವ್ಯಾಪ್ತಿಗೆ ಸೇರದ ಜನರು ಇದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್
ಕೆಪಿಸಿಸಿ ಅಧ್ಯಕ್ಷನ ಸ್ಥಾನಕ್ಕೆ ನಾನು ಆಕಾಂಕ್ಷಿಯಲ್ಲ: ಡಿಕೆ ಸುರೇಶ್