ಬಿಹಾರದ ಜಾತಿ ಸಮೀಕ್ಷೆಗೆ ತಡೆ ನೀಡಲು ಸಾಧ್ಯವಿಲ್ಲ: ವಿಚಾರಣೆ ಜನವರಿಗೆ ಮುಂದೂಡಿದ ಸುಪ್ರೀಂ

ಬಿಹಾರದಲ್ಲಿ ನಿತೀಶ್​​ ಕುಮಾರ್ ಅವರ ನೇತೃತ್ವದ ಸರ್ಕಾರ ಮಾಡಿದ ಜಾತಿ ಸಮೀಕ್ಷೆ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ. ಇದನ್ನು ತಡೆಯಲು ಸಾಧ್ಯವಿಲ್ಲ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜನವರಿಯಲ್ಲಿ ವಿಚಾರಣೆ ನಡೆಸಲಾಗುವುದು ಎಂದು ವಿಚಾರಣೆಯನ್ನು ಮುಂದೂಡಿದೆ.

ಬಿಹಾರದ ಜಾತಿ ಸಮೀಕ್ಷೆಗೆ ತಡೆ ನೀಡಲು ಸಾಧ್ಯವಿಲ್ಲ: ವಿಚಾರಣೆ ಜನವರಿಗೆ ಮುಂದೂಡಿದ ಸುಪ್ರೀಂ
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಅಕ್ಷಯ್​ ಪಲ್ಲಮಜಲು​​

Updated on:Oct 06, 2023 | 4:23 PM

ದೆಹಲಿ, ಅ.6: ಬಿಹಾರದಲ್ಲಿ (Bihar) ನಿತೀಶ್​​ ಕುಮಾರ್ ಅವರ ನೇತೃತ್ವದ ಸರ್ಕಾರ ಈಗಾಗಲೇ ಜಾತಿ ಗಣತಿಯನ್ನು (Caste Survey ) ಮಾಡಿದೆ. ಇನ್ನು ಈ ಸಮೀಕ್ಷೆಗೆ ಅವಕಾಶ ನೀಡಬಾರದು ಎಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿತ್ತು. ಆದರೆ ಹೈಕೋರ್ಟ್​ ಇದಕ್ಕೆ ವಿಸ್ತೃತ ವಿಚಾರಣೆ ಅಗತ್ಯ ಇದೆ ಎಂದು ಹೇಳಿತ್ತು. ನಂತರ ಸುಪ್ರೀಂ ಕೋರ್ಟ್​ಗೆ ಮೇಲ್ಮನವಿ ಹಾಕಿದ್ದು, ಇದೀಗ ಈ ಅರ್ಜಿಯನ್ನು ವಿಚಾರಣೆ ನಡೆಸಿದ ಸುಪ್ರೀಂ, ವಿಚಾರಣೆಯನ್ನು ಜನವರಿಗೆ ಮುಂದೂಡಿದೆ. ಜಾತಿ ಸಮೀಕ್ಷೆಯ ಬಗ್ಗೆ ತಡೆ ನೀಡುವ ಆದೇಶವನ್ನು ನ್ಯಾಯಾಲಯವು ನಿರಾಕರಿಸಿದೆ.

ಸರ್ಕಾರದ ಈ ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದ ನ್ಯಾಯಮೂರ್ತಿ ಸಂಜೀವ್ ಖನ್ನಾ ಪೀಠವು, ಯಾವುದೇ ರಾಜ್ಯ ಸರ್ಕಾರವು ನೀತಿ ಅಥವಾ ಕೆಲಸ ಮಾಡುವುದನ್ನು ನಾವು ತಡೆಯಲು  ಸಾಧ್ಯವಿಲ್ಲ. ವಿಚಾರಣೆಯಲ್ಲಿ ಅದನ್ನು ಪರಿಶೀಲಿಸಬಹುದೇ ಹೊರತು, ಅದನ್ನು ತಡೆಯುವ ಹಕ್ಕು ನಮಗಿಲ್ಲ ಎಂದು ಹೇಳಿದೆ. ಇನ್ನು ಹೈಕೋರ್ಟ್ ವಿಸ್ತೃತ ಆದೇಶ ನೀಡಿದ್ದು, ನಾವು ಕೂಡ ವಿಸ್ತೃತ ವಿಚಾರಣೆ ನಡೆಸಬೇಕಿದೆ ಎಂದು ಹೇಳಿದೆ.

ಅರ್ಜಿ ವಿಚಾರಣೆಯ ವೇಳೆ ವಕೀಲರು, ಬಿಹಾರ ಸರ್ಕಾರ ಸಮೀಕ್ಷೆಯ ಡೇಟಾವನ್ನು ಬಿಡುಗಡೆ ಮಾಡಿದೆ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ನ್ಯಾಯಾಧೀಶರು ನಾವು ಅದನ್ನು ತಡೆಹಿಡಿದಿಲ್ಲ, ಎಂದರು. ವಾದ ಮುಂದುವರಿಸಿದ ವಕೀಲರು ಸಮೀಕ್ಷೆಯ ಪ್ರಕ್ರಿಯೆಯೇ ಖಾಸಗಿತನದ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಹೇಳಿದ್ದಾರೆ. ಮೊದಲನೆಯದಾಗಿ, ಈ ವಿಷಯದ ಬಗ್ಗೆ ನೋಟಿಸ್ ನೀಡಬೇಕೇ ಅಥವಾ ಬೇಡವೇ ಎಂದು ನಿರ್ಧರಿಸಬೇಕು ಎಂದು ಕೋರ್ಟ್​ ಹೇಳಿದೆ.

ಇದನ್ನೂ ಓದಿ: ಜಾತಿ ಆಧಾರಿತ ಜನಗಣತಿ ವರದಿ ಬಿಡುಗಡೆ ಮಾಡಿದ ಬಿಹಾರ ಸರ್ಕಾರ: OBC ಶೇ.63, ಸಾಮಾನ್ಯ ವರ್ಗ ಶೇ.15.52

ಈ ವಿಚಾರಣೆಗೆ ಸಂಬಂಧಿಸಿದಂತೆ ನೋಟಿಸ್​​ ನೀಡಿದ ಸುಪ್ರೀಂ 2024 ಜನವರಿಯಲ್ಲಿ ಇದರ ವಿಚಾರಣೆ ನಡೆಸಲಾಗುವುದು ಎಂದು ಹೇಳಿದೆ. ಈ ಸಮೀಕ್ಷೆಗೆ ತಡೆ ನೀಡಬೇಕು ಎಂದು ವಕೀಲರು ಹೇಳಿದರು. ಇದಕ್ಕೆ ಉತ್ತರಿಸಿದ ಸುಪ್ರೀಂ ಖಂಡಿತ ಸಾಧ್ಯವಿಲ್ಲ, ಸರ್ಕಾರದ ಯೋಜನೆಗಳಲ್ಲಿ ನ್ಯಾಯಲಯ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 4:21 pm, Fri, 6 October 23

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್