ದೆಹಲಿಯಲ್ಲಿ ಪ್ರಧಾನಿ ಮೋದಿ-ಬಿಹಾರ ಸಿಎಂ ನಿತೀಶ್ ಕುಮಾರ್ ಭೇಟಿ
ರಾಷ್ಟ್ರೀಯ ಜನತಾ ದಳ ಮತ್ತು ಕಾಂಗ್ರೆಸ್ ಒಳಗೊಂಡಿರುವ 'ಮಹಾಘಟಬಂಧನ್' (ಮೈತ್ರಿಕೂಟ) ತೊರೆದು ಬಿಜೆಪಿ ಬೆಂಬಲದೊಂದಿಗೆ ರಾಜ್ಯದಲ್ಲಿ ಸರ್ಕಾರ ರಚಿಸಿದ ದಿನಗಳ ನಂತರ ಬಿಹಾರ ಸಿಎಂ ನಿತೀಶ್ ಕುಮಾರ್ ಬುಧವಾರ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ.
ದೆಹಲಿ ಫೆಬ್ರುವರಿ 07: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ಅವರು ಬುಧವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರನ್ನು ನವದೆಹಲಿಯಲ್ಲಿ ಭೇಟಿಯಾಗಿದ್ದಾರೆ. ರಾಷ್ಟ್ರೀಯ ಜನತಾ ದಳ (Rashtriya Janata Dal) ಮತ್ತು ಕಾಂಗ್ರೆಸ್ ಒಳಗೊಂಡಿರುವ ‘ಮಹಾಘಟಬಂಧನ್’ (ಮೈತ್ರಿಕೂಟ) ತೊರೆದು ಬಿಜೆಪಿ ಬೆಂಬಲದೊಂದಿಗೆ ರಾಜ್ಯದಲ್ಲಿ ಸರ್ಕಾರ ರಚಿಸಿದ ದಿನಗಳ ನಂತರ ನಿತೀಶ್, ಪ್ರಧಾನಿಯನ್ನು ಭೇಟಿ ಮಾಡಿದ್ದಾರೆ. ಭಾನುವಾರ ಒಂಬತ್ತನೇ ಬಾರಿಗೆ ಬಿಹಾರದ ಮುಖ್ಯಮಂತ್ರಿಯಾಗಿ ನಿತೀಶ್ ಪ್ರಮಾಣ ವಚನ ಸ್ವೀಕರಿಸಿದ್ದು. ಬಿಜೆಪಿಯ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಸಿನ್ಹಾ ಅವರು ರಾಜ್ಯದ ಉಪಮುಖ್ಯಮಂತ್ರಿಗಳಾಗಿ ಪ್ರಮಾಣವಚನ ಸ್ವೀಕರಿಸಿದ್ದರು.
ಬಿಜೆಪಿ ಜತೆ ಕೈ ಜೋಡಿಸುವ ಮುನ್ನ ನಿತೀಶ್ ಅವರು ವಿರೋಧ ಪಕ್ಷಗಳ ಮೈತ್ರಿಕೂಟ ಇಂಡಿಯಾದಲ್ಲಿ “ಎಲ್ಲವೂ ಸರಿಯಾಗಿಲ್ಲ” ಎಂದು ಹೇಳಿದ್ದರು, ಇದು ಲೋಕಸಭೆ ಚುನಾವಣೆ 2024 ರ ಮೊದಲು ಬಣವನ್ನು ತೊರೆಯುವ ನಿರ್ಧಾರಕ್ಕೆ ಕಾರಣವಾಯಿತು.
Chief Minister of Bihar, Shri @NitishKumar, met Prime Minister @narendramodi. pic.twitter.com/90j2edfVXE
— PMO India (@PMOIndia) February 7, 2024
ನಿತೀಶ್ ಕುಮಾರ್ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ ನಂತರ, ಪಿಎಂ ಮೋದಿ ಅವರನ್ನು ಅಭಿನಂದಿಸಿದ್ದು “ಬಿಹಾರದಲ್ಲಿ ರಚಿಸಲಾದ ಎನ್‌ಡಿಎ ಸರ್ಕಾರವು ಜನರ ಆಕಾಂಕ್ಷೆಗಳನ್ನು ಈಡೇರಿಸಲು ಮತ್ತು ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತದೆ. ಉಪ ಮುಖ್ಯಮಂತ್ರಿಯಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರನ್ನು ನಾನು ಅಭಿನಂದಿಸುತ್ತೇನೆ. ಈ ತಂಡವು ನಮ್ಮ ಜನರಿಗೆ ಸೇವೆ ಸಲ್ಲಿಸಲು ಬದ್ಧತೆಯಿಂದ ಕೆಲಸ ಮಾಡುತ್ತದೆ ಎಂದು ನಾನು ನಂಬುತ್ತೇನೆ ಎಂದು ಎಕ್ಸ್ ಪೋಸ್ಟ್ ನಲ್ಲಿ ಹೇಳಿದ್ದಾರೆ.
ಫೆಬ್ರವರಿ 12 ರಂದು ಅಸೆಂಬ್ಲಿಯಲ್ಲಿ ಕುಮಾರ್ ನೇತೃತ್ವದ ಸರ್ಕಾರವು ವಿಶ್ವಾಸ ಮತ ಸಾಬೀತು ಪಡಿಸಲಿದೆ. ಇದಕ್ಕೆ ಐದು ದಿನಗಳ ಮುಂಚಿತವಾಗಿ ಈ ಸಭೆ ನಡೆದಿದೆ. ಬಿಹಾರದ ಉಪಮುಖ್ಯಮಂತ್ರಿಗಳಾದ ಸಾಮ್ರಾಟ್ ಚೌಧರಿ ಮತ್ತು ವಿಜಯ್ ಕುಮಾರ್ ಸಿನ್ಹಾ ಅವರು ಸೋಮವಾರ ಪ್ರಧಾನಿಯನ್ನು ಭೇಟಿಯಾಗಿದ್ದರು.
ಜೆಡಿಯು ಮೂಲಗಳ ಪ್ರಕಾರ, ರಾಜ್ಯದ ರಾಜ್ಯಸಭಾ ಚುನಾವಣೆಗೆ ಸಂಬಂಧಿಸಿದ ವಿಷಯಗಳ ಬಗ್ಗೆಯೂ ಮುಖ್ಯಮಂತ್ರಿಗಳು ಬಿಜೆಪಿಯ ಉನ್ನತ ನಾಯಕರೊಂದಿಗಿನ ಸಭೆಯಲ್ಲಿ ಚರ್ಚಿಸಬಹುದು. ಬಿಹಾರದಲ್ಲಿ ಆರು ರಾಜ್ಯಸಭಾ ಸ್ಥಾನಗಳು ತೆರವಾಗುತ್ತಿದ್ದು, ಫೆಬ್ರವರಿ 27 ರಂದು ಚುನಾವಣೆ ನಡೆಯಲಿದೆ.
ಇದನ್ನೂ ಓದಿ: ಯುವರಾಜ ಸ್ಟಾರ್ಟ್ ಆಗಲೇ ಇಲ್ಲ: ರಾಹುಲ್ ಗಾಂಧಿ ವಿರುದ್ಧ ಮತ್ತೊಮ್ಮೆ ಮೋದಿ ವಾಗ್ದಾಳಿ
ಜೆಡಿಯು ಮಾಜಿ ಅಧ್ಯಕ್ಷ ಬಶಿಷ್ಠ ನಾರಾಯಣ ಸಿಂಗ್ ಮತ್ತು ಹಿರಿಯ ನಾಯಕ ಅನಿಲ್ ಹೆಗ್ಡೆ ರಾಜ್ಯಸಭಾ ಸದಸ್ಯರಾಗಿದ್ದರೆ, ಆರ್‌ಜೆಡಿಯ ಎರಡು ಸ್ಥಾನಗಳನ್ನು ಮನೋಜ್ ಕುಮಾರ್ ಝಾ ಮತ್ತು ಮಿಸಾ ಭಾರತಿ ಹೊಂದಿದ್ದಾರೆ. ಒಂದು ಸ್ಥಾನವನ್ನು ಬಿಜೆಪಿಯ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಮತ್ತು ಕಾಂಗ್ರೆಸ್ ಒಂದು ಸ್ಥಾನವನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಅಖಿಲೇಶ್ ಪ್ರಸಾದ್ ಸಿಂಗ್ ಹೊಂದಿದ್ದಾರೆ. ರಾಜ್ಯಸಭಾ ಸದಸ್ಯರ ಅಧಿಕಾರಾವಧಿ ಏಪ್ರಿಲ್ 2ಕ್ಕೆ ಕೊನೆಗೊಳ್ಳಲಿದೆ.
ಮತ್ತಷ್ಟು ರಾಜಕೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 6:17 pm, Wed, 7 February 24