JDU ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಸಿಎಂ ನಿತೀಶ್ ಕುಮಾರ್ ರಾಜೀನಾಮೆ
ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ರಾಜ್ಯಸಭಾ ಸಂಸದ R.C.P ಸಿಂಗ್ ನೇಮಕವಾಗಿದ್ದಾರೆ.
ಪಾಟ್ನಾ: ಅನಿರೀಕ್ಷಿತ ಬೆಳವಣಿಗೆಯೊಂದರಲ್ಲಿ ಜೆಡಿಯು ಅಧ್ಯಕ್ಷ ಸ್ಥಾನಕ್ಕೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದಾರೆ. ನೂತನ ಅಧ್ಯಕ್ಷರಾಗಿ ರಾಜ್ಯಸಭಾ ಸಂಸದ R.C.P ಸಿಂಗ್ ನೇಮಕವಾಗಿದ್ದಾರೆ.
ಇಂದು ಬೆಳಗ್ಗೆ ಕರೆದಿದ್ದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ನಿತೀಶ್ ಕುಮಾರ್ ರಾಜೀನಾಮೆ ಸಲ್ಲಿಸಿದ್ದಾರೆ. ನಿತೀಶ್ ಕುಮಾರ್ R.C.P ಸಿಂಗ್ ಹೆಸರನ್ನು ಅಧ್ಯಕ್ಷ ಸ್ಥಾನಕ್ಕೆ ಸೂಚಿಸುತ್ತಿದ್ದಂತೆ, ಕಾರ್ಯಕಾರಿಣಿ ಸಭೆಯಲ್ಲಿ ಉಪಸ್ಥಿತರಿದ್ದ ಇತರ ಸದಸ್ಯರು ಸಿಂಗ್ ಹೆಸರನ್ನು ಅನುಮೋದಿಸಿದರು. ಅರುಣಾಚಲ ಪ್ರದೇಶದಲ್ಲಿ ಪಕ್ಷದ 6 ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡ ನಂತರ ಈ ಸಭೆಯನ್ನು ಕರೆಯಲಾಗಿತ್ತು.
ಪಾಟ್ನಾದ JDU ಕಚೇರಿಯ ಎದುರು ನೆರೆದ ಪಕ್ಷದ ಕಾರ್ಯಕರ್ತರು ನೂತನ ಅಧ್ಯಕ್ಷರ ಆಯ್ಕೆಯನ್ನು ಸಂಭ್ರಮಿಸಿದರು. ನಿತೀಶ್ ಕುಮಾರ್ರಿಗೆ ಜಯವಾಗಲಿ ಎಂದು ಘೋಷಣೆ ಕೂಗುತ್ತಾ ಸಂಭ್ರಮಿಸಿದರು.
ಪ್ರಧಾನ ಕಾರ್ಯದರ್ಶಿಯಿಂದ ಜೆಡಿಯು ಅಧ್ಯಕ್ಷ ಸ್ಥಾನದವರೆಗೆ; ನಿತೀಶ್ ಆಪ್ತ ಆರ್ಸಿಪಿ ಸಿಂಗ್ ರಾಜಕೀಯ ಪಯಣ
ಜೆಡಿಯುನಿಂದ ಬಿಜೆಪಿಗೆ ಆರು ಶಾಸಕರು; ನಿತೀಶ್ ಕುಮಾರ್ಗೆ ಭಾರಿ ಮುಖಭಂಗ
Published On - 4:45 pm, Sun, 27 December 20