ಖರ್ಗೆ, ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ನಿತೀಶ್ ಕುಮಾರ್; ವಿಪಕ್ಷಗಳನ್ನು ಒಗ್ಗೂಡಿಸುವುದೇ ಅಜೆಂಡಾ

ಸಭೆಯ ನಂತರ, ಹಿಂದಿಯಲ್ಲಿ ಟ್ವೀಟ್ ಮಾಡಿದ ಖರ್ಗೆ ಈಗ ದೇಶ ಒಂದಾಗಲಿದೆ, ಪ್ರಜಾಪ್ರಭುತ್ವದ ಶಕ್ತಿಯೇ ನಮ್ಮ ಸಂದೇಶ. ರಾಹುಲ್ ಗಾಂಧಿ ಮತ್ತು ನಾವು ಬಿಹಾರದ ಮುಖ್ಯಮಂತ್ರಿಯೊಂದಿಗೆ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ ಎಂದಿದ್ದಾರೆ.

ಖರ್ಗೆ, ರಾಹುಲ್ ಗಾಂಧಿಯನ್ನು ಭೇಟಿ ಮಾಡಿದ ನಿತೀಶ್ ಕುಮಾರ್; ವಿಪಕ್ಷಗಳನ್ನು ಒಗ್ಗೂಡಿಸುವುದೇ ಅಜೆಂಡಾ
ಖರ್ಗೆ, ರಾಹುಲ್ ಗಾಂಧಿ ಜತೆ ನಿತೀಶ್ ಕುಮಾರ್
Follow us
ರಶ್ಮಿ ಕಲ್ಲಕಟ್ಟ
|

Updated on: May 22, 2023 | 7:47 PM

ದೆಹಲಿ: 2024ರ ಸಾರ್ವತ್ರಿಕ ಚುನಾವಣೆಗೆ ಮುನ್ನ ಪ್ರತಿಪಕ್ಷಗಳ ಒಗ್ಗಟ್ಟಿನ ಸಂವಾದಕರಾಗಿ ಕಾರ್ಯನಿರ್ವಹಿಸಲು ಮುಂದಾಗಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Bihar CM Nitish Kumar) ಅವರು ಇಂದು (ಸೋಮವಾರ)ದೆಹಲಿಯಲ್ಲಿ ಕಾಂಗ್ರೆಸ್ ಮುಖ್ಯಸ್ಥ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಮತ್ತು ರಾಹುಲ್ ಗಾಂಧಿ (Rahul Gandhi) ಅವರನ್ನು ಭೇಟಿಯಾದರು. ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರೊಂದಿಗಿನ ಸಭೆಯು ವಿರೋಧ ಪಕ್ಷದ ಸಭೆಗೆ ದಿನಾಂಕವನ್ನು ನಿಗದಿಪಡಿಸಲು ಉದ್ದೇಶಿಸಲಾಗಿತ್ತು, ಇದನ್ನು ಕರ್ನಾಟಕ ವಿಧಾನಸಭಾ ಚುನಾವಣೆಯ ಮೊದಲು ಯೋಜಿಸಲಾಗಿತ್ತು. ಪ್ರತಿಪಕ್ಷಗಳ ಏಕತೆ ಮತ್ತು ನೂತನ ಸಂಸತ್ತಿನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವ ಬಗ್ಗೆಯೂ ನಾಯಕರು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ.

ಸಭೆಯ ನಂತರ, ಹಿಂದಿಯಲ್ಲಿ ಟ್ವೀಟ್ ಮಾಡಿದ ಖರ್ಗೆ ಈಗ ದೇಶ ಒಂದಾಗಲಿದೆ, ಪ್ರಜಾಪ್ರಭುತ್ವದ ಶಕ್ತಿಯೇ ನಮ್ಮ ಸಂದೇಶ. ರಾಹುಲ್ ಗಾಂಧಿ ಮತ್ತು ನಾವು ಬಿಹಾರದ ಮುಖ್ಯಮಂತ್ರಿಯೊಂದಿಗೆ ಪ್ರಸ್ತುತ ರಾಜಕೀಯ ಪರಿಸ್ಥಿತಿಯನ್ನು ಚರ್ಚಿಸಿದ್ದೇವೆ. ನಿತೀಶ್ ಕುಮಾರ್ ಅವರು ಇಂದು ದೇಶಕ್ಕೆ ಹೊಸ ದಿಕ್ಕನ್ನು ನೀಡುವ ಪ್ರಕ್ರಿಯೆಯನ್ನು ಮುಂದಕ್ಕೆ ತೆಗೆದುಕೊಂಡಿದ್ದಾರೆ ಎಂದಿದ್ದಾರೆ.

ದೆಹಲಿಯ 10, ರಾಜಾಜಿ ಮಾರ್ಗ್ ನಿವಾಸದಲ್ಲಿ ಖರ್ಗೆ ಅವರನ್ನು ಕುಮಾರ್ ಭೇಟಿಯಾಗಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಕೆಸಿ ವೇಣುಗೋಪಾಲ್ ಮತ್ತು ಜೆಡಿಯು ಮುಖ್ಯಸ್ಥ ಲಾಲನ್ ಸಿಂಗ್ ಅವರು ಸಭೆಗೆ ಉಪಸ್ಥಿತರಿದ್ದರು ಎಂದು ಮೂಲಗಳು ತಿಳಿಸಿವೆ. ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರು ಸಹ ಈ ಸಭೆಗೆ ಹಾಜರಾಗಲು ಉದ್ದೇಶಿಸಿದ್ದರು.ಆದರೆ ಆರೋಗ್ಯ ಸಮಸ್ಯೆಯಿಂದಾಗಿ ಅವಪು ಕೊನೆಯ ಕ್ಷಣದಲ್ಲಿ ಹೊರಗುಳಿಯಬೇಕಾಯಿತು.

ಪ್ರತಿಪಕ್ಷಗಳ ಒಗ್ಗಟ್ಟಿನ ಅಗತ್ಯವನ್ನು ಒಪ್ಪಿಕೊಳ್ಳಲು ಮಮತಾ ಬ್ಯಾನರ್ಜಿ, ಅರವಿಂದ ಕೇಜ್ರಿವಾಲ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಂತಹ ಕಾಂಗ್ರೆಸ್ ಪಕ್ಷದ ಮುಖ್ಯಸ್ಥರನ್ನು ಕರೆತರುವಲ್ಲಿ ಕುಮಾರ್ ಇದುವರೆಗೆ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:  ಕೇಂದ್ರ ಸರ್ಕಾರ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಅವಮಾನಿಸಿದೆ: ಸರಣಿ ಟ್ವೀಟ್ ಮೂಲಕ ಕಿಡಿಕಾರಿದ ಖರ್ಗೆ

ನಿನ್ನೆ, ನಿತೀಶ್ ಕುಮಾರ್ ಅವರು ಅರವಿಂದ ಕೇಜ್ರಿವಾಲ್ ಅವರನ್ನು ಭೇಟಿ ಮಾಡಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಕೆಲಸ ಮಾಡುವ ಅಧಿಕಾರಶಾಹಿಗಳ ನಿಯಂತ್ರಣದ ಬಗ್ಗೆ ಕೇಂದ್ರದೊಂದಿಗೆ ನಡೆಯುತ್ತಿರುವ ಜಟಾಪಟಿಯಲ್ಲಿ ದೆಹಲಿ ಸರ್ಕಾರಕ್ಕೆ ಸಂಪೂರ್ಣ ಬೆಂಬಲವನ್ನು ನೀಡಿದರು. ಕಳೆದ ವಾರ ಕುಮಾರ್ ಅವರು ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾಗಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಪ್ರೀತಿಯಿಂದ ಸಂಭಾವನೆ ಕೊಟ್ಟರು: ಬಿಗ್ ಬಾಸ್ ಪೇಮೆಂಟ್ ಬಗ್ಗೆ ಗೌತಮಿ ಮಾತು
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಅಮೆರಿಕ ಅಧ್ಯಕ್ಷ ಟ್ರಂಪ್​ಗೂ ಮೊದಲೇ ಪ್ರಮಾಣವಚನ ಸ್ವೀಕರಿಸಿದ ಉಪಾಧ್ಯಕ್ಷ
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಮೋಕ್ಷಿತಾ ಕಿಡ್ನಾಪ್ ಕೇಸ್ ಬಗ್ಗೆ ಗೊತ್ತಾದಾಗ ಗೌತಮಿ ರಿಯಾಕ್ಷನ್ ಹೇಗಿತ್ತು?
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಟ್ರಂಪ್ ಪ್ರಮಾಣವಚನ ಸ್ವೀಕಾರಕ್ಕೆ ಕ್ಷಣಗಣನೆ; ವೇದಿಕೆ ಸುತ್ತ ಜನವೋ ಜನ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ಚಾರ್ಮಾಡಿ ಘಾಟಿಯಲ್ಲಿ ಭಾರಿ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯಕ್ಕೆ ಬೆಂಕಿ
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ನನ್ನ ವಿರುದ್ಧ ವರಿಷ್ಠರಿಗೆ ಯಾರೇ ದೂರು ನೀಡಿದರೂ ಹೆದರಲ್ಲ: ಯತ್ನಾಳ್
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಮಂಗಳೂರು ಬ್ಯಾಂಕ್ ದರೋಡೆಕೋರರು ಸಿಕ್ಕಿಬಿದ್ದಿದ್ಹೇಗೆ?
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಫಿನಾಲೆ ವೀಕ್ ತಲುಪದೆ ಹೋಗಿದ್ದು ನನ್ನ ಪತಿಗೆ ನಿರಾಶೆ ತಂದಿದೆ: ಗೌತಮಿ ಜಾಧವ್
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಮಂಜು ಮನೆಯವರ ಮಾತುಗಳು ಬೇಸರ ತರಿಸಿತು: ಗೌತಮಿ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ
ಟ್ರಂಪ್ ಪ್ರಮಾಣವಚನಕ್ಕೆ ಮುಂಜಾನೆಯಿಂದಲೇ ಕಿಕ್ಕಿರಿದು ಸೇರುತ್ತಿರುವ ಜನ