AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಡಿಯಿಂದ ಸಿಗರೇಟ್ ತರಲು ನಿರಾಕರಿಸಿದ್ದಕ್ಕೆ ಬಾಲಕನ ಹಣೆಗೆ ಗುಂಡು ಹಾರಿಸಿದ ವ್ಯಕ್ತಿ

ಸಿಗರೇಟ್ ತರಲು ನಿರಾಕರಿಸಿದ್ದಕ್ಕೆ ಬಾಲಕನೊಬ್ಬನಿಗೆ ಗುಂಡು ಹಾರಿಸಿರುವ ಘಟನೆ ಬಿಹಾರದಲ್ಲಿ ವರದಿಯಾಗಿದೆ. ಗುಂಡಿನ ಸದ್ದು ಕೇಳಿ ಕುಟುಂಬಸ್ಥರು ಮತ್ತು ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ನೋಡಿದಾಗ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಗ್ರಾಮಸ್ಥರ ಸಹಾಯದಿಂದ ಧರಹರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು.

ಅಂಗಡಿಯಿಂದ ಸಿಗರೇಟ್ ತರಲು ನಿರಾಕರಿಸಿದ್ದಕ್ಕೆ ಬಾಲಕನ ಹಣೆಗೆ ಗುಂಡು ಹಾರಿಸಿದ ವ್ಯಕ್ತಿ
ಆಸ್ಪತ್ರೆImage Credit source: India Today
ನಯನಾ ರಾಜೀವ್
|

Updated on: Jan 08, 2025 | 9:16 AM

Share

ಅಂಗಡಿಯಿಂದ ಸಿಗರೇಟ್ ತರಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ 8 ವರ್ಷದ ಬಾಲಕನ ಹಣೆಗೆ ಗುಂಡು ಹಾರಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಾಲಕ ವಿಪರೀತ ಚಳಿ ಎಂದು ಮನೆಯ ಹೊರಗಡೆ ಬೆಂಕಿ ಹಾಕಿಕೊಂಡು ಅದರ ಮುಂದೆ ಕುಳಿತಿದ್ದ, ಆಗ ಅದೇ ಊರಿನ ನಿತೀಶ್​ ಕುಮಾರ್ ಬಾಲಕ ಬಳಿ ಬಂದು ತುಂಬಾ ಅಂಗಡಿಯಿಂದ ಸಿಗರೇಟ್ ತೆಗೆದುಕೊಂಡು ಬಾ ಎಂದು ಹೇಳಿದ್ದಾನೆ.

ತುಂಬಾ ಚಳಿ ಇದೆ ನನಗೆ ಹೋಗಲು ಸಾಧ್ಯವಿಲ್ಲ ಎಂದು ಬಾಲಕ ಹೇಳಿದ್ದಾನೆ, ಅದಕ್ಕೆ ಕೋಪಗೊಂಡ ನಿತೀಶ್ ಕುಮಾರ್ ಪಿಸ್ತೂಲ್ ಹೊರ ತೆಗೆದು ಹುಡುಗನ ಹಣೆಗೆ ಗುಂಡು ಹಾರಿಸಿದ್ದಾನೆ. ಗುಂಡಿನ ಸದ್ದು ಕೇಳಿ ಕುಟುಂಬಸ್ಥರು ಮತ್ತು ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ನೋಡಿದಾಗ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ.

ಗ್ರಾಮಸ್ಥರ ಸಹಾಯದಿಂದ ಧರಹರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಅಲ್ಲಿನ ವೈದ್ಯರು ಅವರನ್ನು ಉನ್ನತ ಚಿಕಿತ್ಸೆಗಾಗಿ ಮುಂಗೇರ್ ಸದರ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆತನ ಸ್ಥಿತಿ ಗಂಭೀರವಾಗಿದ್ದು, ನಂತರ ಉನ್ನತ ವೈದ್ಯಕೀಯ ಸೌಲಭ್ಯಕ್ಕಾಗಿ ಬೇರೆಡೆಗೆ ಕರೆದೊಯ್ಯಲಾಗಿದೆ.

ಮತ್ತಷ್ಟು ಓದಿ: ಕೆಲಸ ಸರಿ ಮಾಡಿಲ್ಲ ಎಂದಿದ್ದಕ್ಕೆ ಚಾಕುವಿನಿಂದ ಇರಿದು ಸಹೋದ್ಯೋಗಿಯ ಕೊಲೆ

ಮುಂಗೇರ್ ಸದರ್ ಆಸ್ಪತ್ರೆಯ ವೈದ್ಯ ಡಾ.ಅನುರಾಗ್ ಮಾತನಾಡಿ, ಬುಲೆಟ್ ಹುಡುಗನ ಹಣೆಯಲ್ಲಿ ಮೂಗಿನ ಬಳಿಯಿತ್ತು. ಬಾಲಕನ ಸ್ಥಿತಿ ಗಂಭೀರವಾಗಿದೆ ಮತ್ತು ತಕ್ಷಣದ ವಿಶೇಷ ಆರೈಕೆಯ ಅಗತ್ಯವಿದೆ ಎಂದು ಅವರು ದೃಢಪಡಿಸಿದರು. ಗೋವಿಂದಪುರ ಗ್ರಾಮದ ನಿವಾಸಿ ನಿತೀಶ್ ಕುಮಾರ್ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಆರೋಪಿಯು ಕ್ರಿಮಿನಲ್ ದಾಖಲೆಯನ್ನು ಹೊಂದಿದ್ದು, ಈಗಾಗಲೇ ಮತ್ತೊಂದು ಪ್ರಕರಣದಲ್ಲಿ ಬೇಕಾಗಿದ್ದಾನೆ, ಆತನ ಬಂಧನಕ್ಕೆ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಜನತಾ ದಳದ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಜಯಪ್ರಕಾಶ್ ಯಾದವ್ ಘಟನೆಯ ಬಗ್ಗೆ ರಾಜ್ಯ ಸರ್ಕಾರವನ್ನು ಟೀಕಿಸಿದರು, ಇದು ಬಿಹಾರದ ಅರಾಜಕತೆಗೆ ಉದಾಹರಣೆ ಎಂದು ಬಣ್ಣಿಸಿದರು. ಹೆಚ್ಚುತ್ತಿರುವ ಅಪರಾಧ ಪ್ರಮಾಣವು ಆಡಳಿತಾತ್ಮಕ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ