ಅಂಗಡಿಯಿಂದ ಸಿಗರೇಟ್ ತರಲು ನಿರಾಕರಿಸಿದ್ದಕ್ಕೆ ಬಾಲಕನ ಹಣೆಗೆ ಗುಂಡು ಹಾರಿಸಿದ ವ್ಯಕ್ತಿ

|

Updated on: Jan 08, 2025 | 9:16 AM

ಸಿಗರೇಟ್ ತರಲು ನಿರಾಕರಿಸಿದ್ದಕ್ಕೆ ಬಾಲಕನೊಬ್ಬನಿಗೆ ಗುಂಡು ಹಾರಿಸಿರುವ ಘಟನೆ ಬಿಹಾರದಲ್ಲಿ ವರದಿಯಾಗಿದೆ. ಗುಂಡಿನ ಸದ್ದು ಕೇಳಿ ಕುಟುಂಬಸ್ಥರು ಮತ್ತು ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ನೋಡಿದಾಗ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ. ಗ್ರಾಮಸ್ಥರ ಸಹಾಯದಿಂದ ಧರಹರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು.

ಅಂಗಡಿಯಿಂದ ಸಿಗರೇಟ್ ತರಲು ನಿರಾಕರಿಸಿದ್ದಕ್ಕೆ ಬಾಲಕನ ಹಣೆಗೆ ಗುಂಡು ಹಾರಿಸಿದ ವ್ಯಕ್ತಿ
ಆಸ್ಪತ್ರೆ
Image Credit source: India Today
Follow us on

ಅಂಗಡಿಯಿಂದ ಸಿಗರೇಟ್ ತರಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೊಬ್ಬ 8 ವರ್ಷದ ಬಾಲಕನ ಹಣೆಗೆ ಗುಂಡು ಹಾರಿಸಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಬಿಹಾರದ ಮುಂಗೇರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಬಾಲಕ ವಿಪರೀತ ಚಳಿ ಎಂದು ಮನೆಯ ಹೊರಗಡೆ ಬೆಂಕಿ ಹಾಕಿಕೊಂಡು ಅದರ ಮುಂದೆ ಕುಳಿತಿದ್ದ, ಆಗ ಅದೇ ಊರಿನ ನಿತೀಶ್​ ಕುಮಾರ್ ಬಾಲಕ ಬಳಿ ಬಂದು ತುಂಬಾ ಅಂಗಡಿಯಿಂದ ಸಿಗರೇಟ್ ತೆಗೆದುಕೊಂಡು ಬಾ ಎಂದು ಹೇಳಿದ್ದಾನೆ.

ತುಂಬಾ ಚಳಿ ಇದೆ ನನಗೆ ಹೋಗಲು ಸಾಧ್ಯವಿಲ್ಲ ಎಂದು ಬಾಲಕ ಹೇಳಿದ್ದಾನೆ, ಅದಕ್ಕೆ ಕೋಪಗೊಂಡ ನಿತೀಶ್ ಕುಮಾರ್ ಪಿಸ್ತೂಲ್ ಹೊರ ತೆಗೆದು ಹುಡುಗನ ಹಣೆಗೆ ಗುಂಡು ಹಾರಿಸಿದ್ದಾನೆ. ಗುಂಡಿನ ಸದ್ದು ಕೇಳಿ ಕುಟುಂಬಸ್ಥರು ಮತ್ತು ನೆರೆಹೊರೆಯವರು ಸ್ಥಳಕ್ಕೆ ಧಾವಿಸಿ ನೋಡಿದಾಗ ಬಾಲಕ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡು ಬಂದಿದೆ.

ಗ್ರಾಮಸ್ಥರ ಸಹಾಯದಿಂದ ಧರಹರ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದರು. ಅಲ್ಲಿನ ವೈದ್ಯರು ಅವರನ್ನು ಉನ್ನತ ಚಿಕಿತ್ಸೆಗಾಗಿ ಮುಂಗೇರ್ ಸದರ್ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆತನ ಸ್ಥಿತಿ ಗಂಭೀರವಾಗಿದ್ದು, ನಂತರ ಉನ್ನತ ವೈದ್ಯಕೀಯ ಸೌಲಭ್ಯಕ್ಕಾಗಿ ಬೇರೆಡೆಗೆ ಕರೆದೊಯ್ಯಲಾಗಿದೆ.

ಮತ್ತಷ್ಟು ಓದಿ: ಕೆಲಸ ಸರಿ ಮಾಡಿಲ್ಲ ಎಂದಿದ್ದಕ್ಕೆ ಚಾಕುವಿನಿಂದ ಇರಿದು ಸಹೋದ್ಯೋಗಿಯ ಕೊಲೆ

ಮುಂಗೇರ್ ಸದರ್ ಆಸ್ಪತ್ರೆಯ ವೈದ್ಯ ಡಾ.ಅನುರಾಗ್ ಮಾತನಾಡಿ, ಬುಲೆಟ್ ಹುಡುಗನ ಹಣೆಯಲ್ಲಿ ಮೂಗಿನ ಬಳಿಯಿತ್ತು. ಬಾಲಕನ ಸ್ಥಿತಿ ಗಂಭೀರವಾಗಿದೆ ಮತ್ತು ತಕ್ಷಣದ ವಿಶೇಷ ಆರೈಕೆಯ ಅಗತ್ಯವಿದೆ ಎಂದು ಅವರು ದೃಢಪಡಿಸಿದರು.
ಗೋವಿಂದಪುರ ಗ್ರಾಮದ ನಿವಾಸಿ ನಿತೀಶ್ ಕುಮಾರ್ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ಆರೋಪಿಯು ಕ್ರಿಮಿನಲ್ ದಾಖಲೆಯನ್ನು ಹೊಂದಿದ್ದು, ಈಗಾಗಲೇ ಮತ್ತೊಂದು ಪ್ರಕರಣದಲ್ಲಿ ಬೇಕಾಗಿದ್ದಾನೆ, ಆತನ ಬಂಧನಕ್ಕೆ ಪ್ರಯತ್ನ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಜನತಾ ದಳದ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಜಯಪ್ರಕಾಶ್ ಯಾದವ್ ಘಟನೆಯ ಬಗ್ಗೆ ರಾಜ್ಯ ಸರ್ಕಾರವನ್ನು ಟೀಕಿಸಿದರು, ಇದು ಬಿಹಾರದ ಅರಾಜಕತೆಗೆ ಉದಾಹರಣೆ ಎಂದು ಬಣ್ಣಿಸಿದರು. ಹೆಚ್ಚುತ್ತಿರುವ ಅಪರಾಧ ಪ್ರಮಾಣವು ಆಡಳಿತಾತ್ಮಕ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ