Bihar Earthquake: ಬಿಹಾರದಲ್ಲಿ ಭೂಕಂಪ: 4.3 ತೀವ್ರತೆ ದಾಖಲು
ಬಿಹಾರದಲ್ಲಿ ಭೂಕಂಪ ಸಂಭವಿಸಿದ್ದು, 4.3 ತೀವ್ರತೆ ದಾಖಲಾಗಿದೆ. ಪುರ್ನಿಯಾ ಬಳಿ 10 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

Updated on:Apr 12, 2023 | 7:17 AM
ಬಿಹಾರದಲ್ಲಿ ಭೂಕಂಪ ಸಂಭವಿಸಿದ್ದು, 4.3 ತೀವ್ರತೆ ದಾಖಲಾಗಿದೆ. ಪುರ್ನಿಯಾ ಬಳಿ 10 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಬೆಳಿಗ್ಗೆ 5.35 ರ ಸುಮಾರಿಗೆ ಕಂಪನದ ಅನುಭವವಾಯಿತು. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.3 ಎಂದು ಅಳೆಯಲಾಗಿದೆ. ಬಿಹಾರದ ಅರಾರಿಯಾದಲ್ಲಿ ಬುಧವಾರ ಬೆಳಗ್ಗೆ 5.35ರ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್ಸಿಎಸ್) ತಿಳಿಸಿದೆ. ಭೂಕಂಪದ ಕೇಂದ್ರಬಿಂದುವು ನೆಲದ ಮೇಲ್ಮೈಯಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:08 am, Wed, 12 April 23

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್ ಇಂಡಿಯಾ ಕನ್ನಡ ವೆಬ್ಸೈಟ್ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್ನಲ್ಲಿ ಸೀನಿಯರ್ ಸಬ್ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.
Read More