ಬಿಹಾರದಲ್ಲಿ ಭೂಕಂಪ ಸಂಭವಿಸಿದ್ದು, 4.3 ತೀವ್ರತೆ ದಾಖಲಾಗಿದೆ. ಪುರ್ನಿಯಾ ಬಳಿ 10 ಕಿಮೀ ಆಳದಲ್ಲಿ ಭೂಕಂಪ ಸಂಭವಿಸಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಬುಧವಾರ ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಬೆಳಿಗ್ಗೆ 5.35 ರ ಸುಮಾರಿಗೆ ಕಂಪನದ ಅನುಭವವಾಯಿತು. ಭೂಕಂಪದ ತೀವ್ರತೆಯನ್ನು ರಿಕ್ಟರ್ ಮಾಪಕದಲ್ಲಿ 4.3 ಎಂದು ಅಳೆಯಲಾಗಿದೆ.
ಬಿಹಾರದ ಅರಾರಿಯಾದಲ್ಲಿ ಬುಧವಾರ ಬೆಳಗ್ಗೆ 5.35ರ ಸುಮಾರಿಗೆ 4.3 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಭೂಕಂಪದ ಕೇಂದ್ರಬಿಂದುವು ನೆಲದ ಮೇಲ್ಮೈಯಿಂದ ಸುಮಾರು 10 ಕಿಲೋಮೀಟರ್ ಆಳದಲ್ಲಿದೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:08 am, Wed, 12 April 23