ಪಾಟ್ನಾ: ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಸಾಧಿಸಿ ಕೆಲವು ದಿನಗಳ ಹಿಂದೆ ಪ್ರಮಾಣ ವಚನ ಸ್ವೀಕರಿಸಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್ಗೆ ಶಾಕ್ ಎದುರಾಗಿದೆ. ಬಿಹಾರದ ಮೈತ್ರಿ ಸರ್ಕಾರದ ಮೊದಲ ವಿಕೆಟ್ ಪತನವಾಗಿದೆ.
ಹೌದು, ಭ್ರಷ್ಟಾಚಾರ ಆರೋಪ ಹಿನ್ನೆಲೆಯಲ್ಲಿ ಶಿಕ್ಷಣ ಖಾತೆ ಸಚಿವ ಮೆವಾಲಾಲ್ ಚೌಧರಿ ರಾಜೀನಾಮೆ ನೀಡಿದ್ದಾರೆ.
ಮೆವಾಲಾಲ್ ಚೌಧರಿ ಈ ಹಿಂದೆ ಬಿಹಾರ ಕೃಷಿ ವಿವಿ ಕುಲಪತಿಯಾಗಿದ್ದಾಗ ಪ್ರಾಧ್ಯಾಪಕರು, ಸಹಪ್ರಾಧ್ಯಾಪಕರ ನೇಮಕಾತಿಯಲ್ಲಿ ಅಕ್ರಮ ಎಸಗಿದ್ದರು ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತು, 2017ರಲ್ಲಿ ಮೆವಾಲಾಲ್ ವಿರುದ್ಧ FIR ದಾಖಲಾಗಿತ್ತು. ಸದ್ಯ, ಜೆಡಿಯು ಕೋಟಾದಲ್ಲಿ ಸಚಿವರಾಗಿದ್ದ ಮೆವಾಲಾಲ್ ಚೌಧರಿ ಪ್ರತಿಪಕ್ಷಗಳ ಒತ್ತಡಕ್ಕೆ ಮಣಿದು ರಾಜೀನಾಮೆ ಕೊಟ್ಟಿದ್ದಾರೆ. ಹಾಗಾಗಿ, ಸಿಎಂ ನಿತೀಶ್ ಕುಮಾರ್ ಭೇಟಿ ಬಳಿಕ ರಾಜೀನಾಮೆ ಸಲ್ಲಿಸಿದ್ದಾರೆ.
Bihar Education Minister Mewa Lal Choudhary resigns. pic.twitter.com/Uo8K5bbIHB
— ANI (@ANI) November 19, 2020
Published On - 4:32 pm, Thu, 19 November 20