AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೀಟು ಹಂಚಿಕೆ ಬಿಕ್ಕಟ್ಟಿನ ನಡುವೆ 143 ಅಭ್ಯರ್ಥಿಗಳನ್ನು ಘೋಷಿಸಿದ ಆರ್‌ಜೆಡಿ; ರಾಘೋಪುರದಿಂದ ತೇಜಸ್ವಿ ಯಾದವ್ ಸ್ಪರ್ಧೆ

ಮಹಾಘಟಬಂಧನ್ ಸೀಟು ಹಂಚಿಕೆಯಲ್ಲಿ ಬಿಕ್ಕಟ್ಟಿನ ನಡುವೆ ಬಿಹಾರದ ವಿಧಾನಸಭಾ ಚುನಾವಣೆಗೆ ಆರ್‌ಜೆಡಿ 143 ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಘೋಷಿಸಿದೆ. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ವೈಶಾಲಿ ಜಿಲ್ಲೆಯ ರಾಘೋಪುರ ವಿಧಾನಸಭಾ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ. ನವೆಂಬರ್ 6 ಮತ್ತು 11ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 14ರಂದು ಮತ ಎಣಿಕೆ ನಡೆದು, ಫಲಿತಾಂಶ ಘೋಷಣೆಯಾಗಲಿದೆ.

ಸೀಟು ಹಂಚಿಕೆ ಬಿಕ್ಕಟ್ಟಿನ ನಡುವೆ 143 ಅಭ್ಯರ್ಥಿಗಳನ್ನು ಘೋಷಿಸಿದ ಆರ್‌ಜೆಡಿ; ರಾಘೋಪುರದಿಂದ ತೇಜಸ್ವಿ ಯಾದವ್ ಸ್ಪರ್ಧೆ
Tejasvi Yadav
ಸುಷ್ಮಾ ಚಕ್ರೆ
|

Updated on:Oct 20, 2025 | 6:38 PM

Share

ಪಾಟ್ನಾ, ಅಕ್ಟೋಬರ್ 20: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಇಂದು ಬಿಹಾರ ವಿಧಾನಸಭಾ ಚುನಾವಣೆಗೆ (Bihar Elections) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಹಾಘಟಬಂಧನ್‌ನಲ್ಲಿ ಸೀಟು ಹಂಚಿಕೆ ಬಿಕ್ಕಟ್ಟಿನ ನಡುವೆಯೂ 143 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಎರಡನೇ ಹಂತದ ನಾಮಪತ್ರ ಸಲ್ಲಿಕೆಯ ಕೊನೆಯ ದಿನದಂದು ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

2025ರ ಬಿಹಾರ ವಿಧಾನಸಭಾ ಚುನಾವಣೆಗೆ ಆರ್‌ಜೆಡಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 143 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ವೈಶಾಲಿ ಜಿಲ್ಲೆಯ ರಾಘೋಪುರ ವಿಧಾನಸಭಾ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ. ಇಂಡಿಯ ಮೈತ್ರಿಕೂಟದೊಳಗೆ ಉದ್ವಿಗ್ನತೆ ಹೆಚ್ಚುತ್ತಿದ್ದು, ಇದೀಗ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವೆ ಅಂತಿಮ ಸೀಟು ಹಂಚಿಕೆ ಸೂತ್ರದ ಕುರಿತು ಇನ್ನೂ ಒಮ್ಮತ ಮೂಡಿಲ್ಲ.

ಇದನ್ನೂ ಓದಿ: ಬಿಹಾರ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ; ನಿನ್ನೆಯಷ್ಟೇ ಪಕ್ಷಕ್ಕೆ ಸೇರಿದ್ದ ಗಾಯಕಿ ಮೈಥಿಲಿ ಠಾಕೂರ್​ಗೂ ಟಿಕೆಟ್

ನವೆಂಬರ್ 6 ಮತ್ತು ನವೆಂಬರ್ 11ರಂದು ಎರಡು ಹಂತಗಳಲ್ಲಿ ಬಿಹಾರದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.

121 ಸ್ಥಾನಗಳನ್ನು ಒಳಗೊಂಡ ಮೊದಲ ಹಂತದ ಚುನಾವಣೆಯ ನಾಮಪತ್ರಗಳನ್ನು ಹಿಂಪಡೆಯುವ ಗಡುವು ಇಂದು ಮಧ್ಯಾಹ್ನ 3 ಗಂಟೆಗೆ ಕೊನೆಗೊಂಡಿದೆ. ಭಾನುವಾರ ರಾತ್ರಿಯ ಹೊತ್ತಿಗೆ, ಮೊದಲ ಹಂತದ ಮತದಾನಕ್ಕೆ 1,375 ನಾಮಪತ್ರಗಳನ್ನು ಸ್ವೀಕರಿಸಲಾಗಿದೆ. ಆರ್‌ಜೆಡಿಯೊಂದಿಗೆ ದೊಡ್ಡ ಸೀಟು ಹಂಚಿಕೆ ಯೋಜನೆಯನ್ನು ಇನ್ನೂ ಅಂತಿಮಗೊಳಿಸದ ಕಾಂಗ್ರೆಸ್ ಎರಡೂ ಹಂತಗಳಲ್ಲಿ ಕೇವಲ 54 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:38 pm, Mon, 20 October 25

ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ