
ಪಾಟ್ನಾ, ಅಕ್ಟೋಬರ್ 20: ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಇಂದು ಬಿಹಾರ ವಿಧಾನಸಭಾ ಚುನಾವಣೆಗೆ (Bihar Elections) ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮಹಾಘಟಬಂಧನ್‌ನಲ್ಲಿ ಸೀಟು ಹಂಚಿಕೆ ಬಿಕ್ಕಟ್ಟಿನ ನಡುವೆಯೂ 143 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ. ಎರಡನೇ ಹಂತದ ನಾಮಪತ್ರ ಸಲ್ಲಿಕೆಯ ಕೊನೆಯ ದಿನದಂದು ಅಧಿಕೃತ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.
2025ರ ಬಿಹಾರ ವಿಧಾನಸಭಾ ಚುನಾವಣೆಗೆ ಆರ್‌ಜೆಡಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. 143 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ವೈಶಾಲಿ ಜಿಲ್ಲೆಯ ರಾಘೋಪುರ ವಿಧಾನಸಭಾ ಸ್ಥಾನದಿಂದ ಸ್ಪರ್ಧಿಸಲಿದ್ದಾರೆ. ಇಂಡಿಯ ಮೈತ್ರಿಕೂಟದೊಳಗೆ ಉದ್ವಿಗ್ನತೆ ಹೆಚ್ಚುತ್ತಿದ್ದು, ಇದೀಗ ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವೆ ಅಂತಿಮ ಸೀಟು ಹಂಚಿಕೆ ಸೂತ್ರದ ಕುರಿತು ಇನ್ನೂ ಒಮ್ಮತ ಮೂಡಿಲ್ಲ.
ಇದನ್ನೂ ಓದಿ: ಬಿಹಾರ ಚುನಾವಣೆಗೆ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ; ನಿನ್ನೆಯಷ್ಟೇ ಪಕ್ಷಕ್ಕೆ ಸೇರಿದ್ದ ಗಾಯಕಿ ಮೈಥಿಲಿ ಠಾಕೂರ್ಗೂ ಟಿಕೆಟ್
ನವೆಂಬರ್ 6 ಮತ್ತು ನವೆಂಬರ್ 11ರಂದು ಎರಡು ಹಂತಗಳಲ್ಲಿ ಬಿಹಾರದಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.
RJD releases its list of candidates for the Bihar Assembly Election 2025, fielding candidates in 143 seats. RJD leader Tejashwi Yadav will contest from the Raghopur assembly seat in Vaishali district. pic.twitter.com/wSsMEj8gdm
— ANI (@ANI) October 20, 2025
121 ಸ್ಥಾನಗಳನ್ನು ಒಳಗೊಂಡ ಮೊದಲ ಹಂತದ ಚುನಾವಣೆಯ ನಾಮಪತ್ರಗಳನ್ನು ಹಿಂಪಡೆಯುವ ಗಡುವು ಇಂದು ಮಧ್ಯಾಹ್ನ 3 ಗಂಟೆಗೆ ಕೊನೆಗೊಂಡಿದೆ. ಭಾನುವಾರ ರಾತ್ರಿಯ ಹೊತ್ತಿಗೆ, ಮೊದಲ ಹಂತದ ಮತದಾನಕ್ಕೆ 1,375 ನಾಮಪತ್ರಗಳನ್ನು ಸ್ವೀಕರಿಸಲಾಗಿದೆ. ಆರ್‌ಜೆಡಿಯೊಂದಿಗೆ ದೊಡ್ಡ ಸೀಟು ಹಂಚಿಕೆ ಯೋಜನೆಯನ್ನು ಇನ್ನೂ ಅಂತಿಮಗೊಳಿಸದ ಕಾಂಗ್ರೆಸ್ ಎರಡೂ ಹಂತಗಳಲ್ಲಿ ಕೇವಲ 54 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 6:38 pm, Mon, 20 October 25