ಮತಕ್ಕಾಗಿ ಮೋದಿ ಡ್ಯಾನ್ಸ್ ಬೇಕಿದ್ರೂ ಮಾಡುತ್ತಾರೆ; ಬಿಹಾರದಲ್ಲಿ ರಾಹುಲ್ ಗಾಂಧಿ ಲೇವಡಿ
ಬಿಹಾರದಲ್ಲಿ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಇವೆ. ಹೀಗಾಗಿ, ಚುನಾವಣಾ ಪ್ರಚಾರ ಭರದಿಂದ ಸಾಗುತ್ತಿದೆ. ಇಂದು ಬಿಹಾರದ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬಿಜೆಪಿ ಹಾಗೂ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಬಿಹಾರಿಗಳ ಅತಿದೊಡ್ಡ ಹಬ್ಬವಾದ ಛತ್ ಪೂಜೆ ಇತ್ತೀಚೆಗೆ ಮುಕ್ತಾಯಗೊಂಡಿದೆ. ಈ ಕುರಿತು ಕೂಡ ಭಾಷಣದಲ್ಲಿ ಪ್ರಸ್ತಾಪಿಸಿದ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, ಮೋದಿಗೆ ಛತ್ ಪೂಜೆಯೂ ಬೇಕಾಗಿಲ್ಲ, ಯನಮುನಾ ನದಿಯ ಸ್ವಚ್ಛತೆಯೂ ಬೇಕಾಗಿಲ್ಲ. ಅವರು ವಿಶೇಷವಾಗಿ ನಿರ್ಮಿಸಲಾದ ಕೊಳದಲ್ಲಿ ಸ್ನಾನ ಮಾಡುತ್ತಾರೆ ಎಂದು ಟೀಕಿಸಿದ್ದಾರೆ.

ಪಾಟ್ನಾ, ಅಕ್ಟೋಬರ್ 29: ಬಿಹಾರದಲ್ಲಿ ವಿಧಾನಸಭಾ ಚುನಾವಣೆಯ (Bihar Assembly Elections) ಪ್ರಚಾರವನ್ನು ಅಬ್ಬರದಿಂದ ಪ್ರಾರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಪ್ರಧಾನಿ ನರೇಂದ್ರ ಮೋದಿ (PM Modi) ಅವರ ಮೇಲೆ ತೀವ್ರ ವಾಗ್ದಾಳಿಯನ್ನು ನಡೆಸಿದರು. ಮೋದಿ ಅವರು ಮತಗಳಿಗಾಗಿ ಏನು ಬೇಕಾದರೂ ಮಾಡುತ್ತಾರೆ ಎಂದು ರಾಹುಲ್ ಆರೋಪಿಸಿದರು. “ನೀವೇನಾದರೂ ನರೇಂದ್ರ ಮೋದಿಗೆ ಮತ ಹಾಕಬೇಕೆಂದರೆ ಅದಕ್ಕೆ ಬದಲಾಗಿ ನೃತ್ಯ ಮಾಡಲು ಹೇಳಿದರೆ ಪ್ರಧಾನಿ ಮೋದಿ ವೇದಿಕೆಯ ಮೇಲೆ ನೃತ್ಯ ಕೂಡ ಮಾಡುತ್ತಾರೆ” ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ.
ಬಿಹಾರದ ಮುಜಾಫರ್‌ಪುರದಲ್ಲಿ ಆರ್‌ಜೆಡಿ ನಾಯಕ ಮತ್ತು ಮಹಾ ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿ ತೇಜಸ್ವಿ ಯಾದವ್ ಅವರೊಂದಿಗೆ ಜಂಟಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ ಮೋದಿಯವರ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ. ಪ್ರಧಾನಿ ಮೋದಿ ಮತ್ತು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಟೀಕಿಸಿದ ರಾಹುಲ್ ಗಾಂಧಿ ಇತ್ತೀಚೆಗೆ ಮುಕ್ತಾಯಗೊಂಡ ಬಿಹಾರಿಗಳ ಅತಿದೊಡ್ಡ ಹಬ್ಬವಾದ ಛತ್ ಪೂಜೆಯ ಬಗ್ಗೆಯೂ ಪ್ರಸ್ತಾಪಿಸಿದರು. “ದೆಹಲಿಯ ಕಲುಷಿತ ಯಮುನಾ ನದಿಯಲ್ಲಿ ಭಕ್ತರು ಮುಳುಗಿ ಪ್ರಾರ್ಥಿಸುತ್ತಾರೆ. ಆದರೆ, ಪ್ರಧಾನಿ ಮೋದಿ ಅವರಿಗಾಗಿ ವಿಶೇಷವಾಗಿ ನಿರ್ಮಿಸಲಾದ ಸ್ವಿಮ್ಮಿಂಗ್ ಪೂಲ್ನಲ್ಲಿ ಸ್ನಾನ ಮಾಡಿ ಪೂಜೆ ಆಚರಿಸುತ್ತಾರೆ. ಅವರಿಗೆ ಜನರ ಮತಗಳಷ್ಟೇ ಬೇಕು” ಎಂದಿದ್ದಾರೆ.
#BiharElection2025 | Muzaffarpur, Bihar: Lok Sabha LoP Rahul Gandhi says, “… There’s no Yamuna there; there’s a pond there. Narendra Modi went to bathe in his swimming pool. He has nothing to do with the Yamuna. He has nothing to do with Chhath Puja. He just wants your vote. If… pic.twitter.com/rCR5jHxhyH
— ANI (@ANI) October 29, 2025
ಇದನ್ನೂ ಓದಿ: Bihar Elections: ಉಚಿತ ವಿದ್ಯುತ್‌ನಿಂದ ಸರ್ಕಾರಿ ಉದ್ಯೋಗದವರೆಗೆ; ಬಿಹಾರ ಚುನಾವಣೆಗೆ ಮಹಾಘಟಬಂಧನ್ ಪ್ರಣಾಳಿಕೆ ಬಿಡುಗಡೆ
20 ವರ್ಷಗಳ ಕಾಲ ಬಿಹಾರದ ಆಡಳಿತ ನಡೆಸುತ್ತಿದ್ದರೂ ಹಿಂದುಳಿದ ವರ್ಗಗಳಿಗೆ ಏನನ್ನೂ ಮಾಡಿಲ್ಲ ಎಂದು ನಿತೀಶ್ ಕುಮಾರ್ ಅವರನ್ನು ಕೂಡ ರಾಹುಲ್ ಗಾಂಧಿ ತರಾಟೆಗೆ ತೆಗೆದುಕೊಂಡರು. “ಮತಕಕ್ಆಗಿ ಬಿಜೆಪಿ ನಿತೀಶ್ ಕುಮಾರ್ ಅವರ ಹೆಸರು ಮತ್ತು ಮುಖವನ್ನು ಬಳಸಿಕೊಳ್ಳುತ್ತಿದೆ. ಅವರ ರಿಮೋಟ್ ಕಂಟ್ರೋಲ್ ಬಿಜೆಪಿಯ ಕೈಯಲ್ಲಿದೆ. ಅವರಿಗೂ ಸಾಮಾಜಿಕ ನ್ಯಾಯಕ್ಕೂ ಯಾವುದೇ ಸಂಬಂಧವಿಲ್ಲ” ಎಂದು ರಾಹುಲ್ ಟೀಕಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




