ಬಿಹಾರ ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 25 ಕ್ಕೆ ಏರಿಕೆ

ಪರಿಸ್ಥಿತಿಯ ತೀವ್ರತೆಯನ್ನರಿತ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಡಿಜಿಪಿ ಅಲೋಕ್ ರಾಜ್ ಮತ್ತು ಅಬಕಾರಿ ಮತ್ತು ನಿಷೇಧ ಇಲಾಖೆಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು. ಮುಖ್ಯಮಂತ್ರಿಗಳು ಎಲ್ಲಾ ಉನ್ನತ ಅಧಿಕಾರಿಗಳಿಗೆ ಖುದ್ದು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುವಂತೆ ತಿಳಿಸಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸೂಚನೆ ನೀಡಿದರು

ಬಿಹಾರ ಕಳ್ಳಭಟ್ಟಿ ದುರಂತ: ಸಾವಿನ ಸಂಖ್ಯೆ 25 ಕ್ಕೆ ಏರಿಕೆ
ಬಿಹಾರ ಕಳ್ಳಭಟ್ಟಿ ದುರಂತ
Follow us
ರಶ್ಮಿ ಕಲ್ಲಕಟ್ಟ
|

Updated on: Oct 17, 2024 | 8:53 PM

ಪಾಟ್ನಾ ಅಕ್ಟೋಬರ್ 17: ಬಿಹಾರದ ಸರನ್ ಮತ್ತು ಸಿವಾನ್ ಜಿಲ್ಲೆಗಳಲ್ಲಿ ಕಳ್ಳಭಟ್ಟಿ (Bihar hooch tragedy) ಸೇವಿಸಿ ಕನಿಷ್ಠ 25 ಜನರು ಸಾವಿಗೀಡಾಗಿದ್ದು ಈ ದುರಂತದಲ್ಲಿ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇಂಡಸ್ಟ್ರಿಯಲ್ ಸ್ಪಿರಿಟ್‌ನೊಂದಿಗೆ ಮಿಥೈಲ್ ಆಲ್ಕೋಹಾಲ್ ಅನ್ನು ಬೆರೆಸಿರುವ  ಮದ್ಯವೇ ದುರಂತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಪರಿಸ್ಥಿತಿಯ ತೀವ್ರತೆಯನ್ನರಿತ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಡಿಜಿಪಿ ಅಲೋಕ್ ರಾಜ್ ಮತ್ತು ಅಬಕಾರಿ ಮತ್ತು ನಿಷೇಧ ಇಲಾಖೆಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದರು. ಮುಖ್ಯಮಂತ್ರಿಗಳು ಎಲ್ಲಾ ಉನ್ನತ ಅಧಿಕಾರಿಗಳಿಗೆ ಖುದ್ದು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸುವಂತೆ ತಿಳಿಸಿದ್ದು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಡಿಜಿಪಿಗೆ ಸೂಚನೆ ನೀಡಿದರು.

“ಘಟನೆಯ ನಂತರ ಎರಡು ವಿಶೇಷ ತನಿಖಾ ತಂಡಗಳನ್ನು ಸಹ ರಚಿಸಲಾಗಿದೆ. ಸ್ಥಳೀಯ ಮಟ್ಟದಲ್ಲಿ ಸ್ಥಾಪಿಸಲಾದ ಒಂದು ಇತ್ತೀಚಿನ ಅಪರಾಧದ ಬಗ್ಗೆ ಪರಿಶೀಲಿಸುತ್ತದೆ. ಪಾಟ್ನಾದಲ್ಲಿ ನಿಷೇಧಾಜ್ಞೆ ಇಲಾಖೆಯಿಂದ ಮತ್ತೊಂದು ಎಸ್‌ಐಟಿ ಸ್ಥಾಪಿಸಲಾಗಿದೆ. ಇದು ಇತ್ತೀಚಿನ ದಿನಗಳಲ್ಲಿ ನಡೆದಿರುವ ಎಲ್ಲಾ ಘಟನೆಗಳ ಸಮಗ್ರ ಅಧ್ಯಯನವನ್ನು ನಡೆಸುತ್ತದೆ, ಅದರ ಆಧಾರದ ಮೇಲೆ ಕ್ರಮದ ಯೋಜನೆಯನ್ನು ರೂಪಿಸಲಾಗುವುದು, ”ಎಂದು ಡಿಜಿಪಿ ಪಿಟಿಐಗೆ ತಿಳಿಸಿದರು.

ಈ ವೇಳೆ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಿಜಿಪಿ ಅಲೋಕ್ ರಾಜ್, ಅಕ್ರಮ ಮದ್ಯ ಸೇವಿಸಿ ಒಟ್ಟು 25 ಮಂದಿ ಸಾವಿಗೀಡಾಗಿದ್ದಾರೆ. ಕಳ್ಳಭಟ್ಟಿ ದುರಂತದಲ್ಲಿ 12 ಮಂದಿಯನ್ನು ಬಂಧಿಸಲಾಗಿದೆ. 49 ಮಂದಿ ಇನ್ನೂ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಹೇಳಿದ್ದಾರೆ. ಸಿವಾನ್‌ನ ಭಗವಾನ್‌ಪುರ, ಮಧಾರ್, ಖೈರಾ ಮತ್ತು ಕೌಡಿಯಾದಲ್ಲಿ 20 ಜನರು ಸಾವಿಗೀಡಾಗಿದ್ದು, ಸರನ್‌ನಲ್ಲಿ ಐದು ಜನರು ಮೃತರಾಗಿದ್ದಾರೆ.

ಸರನ್ ಡಿಎಂ ಮುಕುಲ್ ಕುಮಾರ್ ಗುಪ್ತಾ ಮಾತನಾಡಿ, ಮೃತರ ಸಂಬಂಧಿಕರು ರಾಜ್ಯ ಸರ್ಕಾರ ವಿಧಿಸಿರುವ ಮದ್ಯ ನಿಷೇಧವನ್ನು ಬೆಂಬಲಿಸಲು ಪ್ರತಿಜ್ಞೆ ತೆಗೆದುಕೊಳ್ಳಬೇಕು. ಮರಣೋತ್ತರ ಪರೀಕ್ಷೆಯ ವರದಿಗಳು ಷರತ್ತುಗಳನ್ನು ಪೂರೈಸಿದರೆ, ಅವರಿಗೆ ಪರಿಹಾರ ಮೊತ್ತವಾಗಿ ₹ 4 ಲಕ್ಷ ನೀಡಲಾಗುತ್ತದೆ.

ನಿತೀಶ್ ಕುಮಾರ್ ಸರ್ಕಾರದ ವಿರುದ್ಧ ವಿಪಕ್ಷ ವಾಗ್ದಾಳಿ

ಬಿಹಾರದ ಪ್ರತಿಪಕ್ಷ ನಾಯಕರು ನಿತೀಶ್ ಕುಮಾರ್ ಮತ್ತು ರಾಜ್ಯದಲ್ಲಿನ ಬಿಜೆಪಿ ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್, “30 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ದೃಷ್ಟಿ ಕಳೆದುಕೊಂಡಿದ್ದಾರೆ, ಆದರೆ ಸಿಎಂ ಇದುವರೆಗೆ ಸಂತಾಪ ಸೂಚಿಸಿಲ್ಲ. ಇದು ಕೊಲೆ. ಘಟನೆಗಳು ಪುನರಾವರ್ತನೆಯಾಗುತ್ತಿದ್ದು, ಎಲ್ಲೆಡೆ ಮದ್ಯ ದೊರೆಯುತ್ತಿದೆ. ಸಮಾಜದಲ್ಲಿ ಅಂತಹ ಆಘಾತವನ್ನು ಹೊರಹಾಕಲು ಮಾಫಿಯಾಗೆ ರಕ್ಷಣೆ ಇದೆ ಎಂದಿದ್ದಾರೆ.

ಇದನ್ನೂ ಓದಿ: ನನ್ನ ಕುಟುಂಬ ಒಡೆದು ಹೋಗಿದೆ: ನ್ಯಾಯಕ್ಕಾಗಿ ಬಾಬಾ ಸಿದ್ದಿಕ್ ಪುತ್ರ ಜೀಶಾನ್ ಸಿದ್ದಿಕ್ ಆಗ್ರಹ

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಎನ್‌ಡಿಎ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ರಾಜ್ಯದಲ್ಲಿ ಮದ್ಯ ನಿಷೇಧ ಜಾರಿಯಲ್ಲಿದೆ. ಆದರೆ ನಕಲಿ ಮದ್ಯದ ಅಕ್ರಮ ವ್ಯಾಪಾರವು ವಿಪರೀತವಾಗಿದೆ ಎಂದು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಪ್ರದೇಶ ಬಿಜೆಪಿ ಅಧ್ಯಕ್ಷರ ಆಯ್ಕೆಗೆ ಪ್ರಕ್ರಿಯೆ ಶುರುವಾಗಲಿದೆ: ಚೌಹಾನ್
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಕೇಂದ್ರದಲ್ಲಿ ಮಂತ್ರಿಯಾಗುವ ಮೊದಲು ಚೌಹಾನ್ ಮಧ್ಯ ಪ್ರದೇಶ ಸಿಎಂ ಅಗಿದ್ದರು
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ಜನಪ್ರತಿನಿಧಿಗಳಿಗೆ ಚುನಾವಣೆಯಲ್ಲಿಲ್ಲದ ಭದ್ರತೆ ಗೆದ್ದಮೇಲೆ ಯಾಕೆ ಬೇಕು?
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
ತಾರೆಯರ ಕಲರವ; ಹೇಗಿದೆ ನೋಡಿ ತಾರಾ-ಸುಧಾರಾಣಿ ಡ್ಯಾನ್ಸ್
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
‘ನಾನು ಕರ್ನಾಟಕದ ಹುಡುಗಿ’; ಪ್ರೀತಿಯಿಂದ ಕನ್ನಡದಲ್ಲೇ ಮಾತನಾಡಿದ ಶಿಲ್ಪಾ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಅಜ್ಜನ ಜಾತ್ರೆ ಸಂಪನ್ನ: ಭಕ್ತರಲ್ಲಿ ಮೂರು ವಚನ ಕೇಳಿದ ಕೊಪ್ಪಳದ ಗವಿಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
ಚಿಟ್ಟಾಣಿ ಆಸೆ ಈಡೇರಿಸಲು ಯಕ್ಷಗಾನದಲ್ಲಿ ಅಭಿನಯಿಸಿದ ನಟಿ ಉಮಾಶ್ರೀ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Devotional: ಮಾಘ ಸ್ನಾನದ ಹಿಂದಿನ ರಹಸ್ಯ ಹಾಗೂ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!
ಪ್ರಿಯಕರನೊಂದಿಗೆ ಹೆಂಡತಿ ಹೋಗುತ್ತಿದ್ದ ಕಾರಿನ ಮೇಲೆ ಹತ್ತಿ ಕುಳಿತ ಗಂಡ!