ಇಂಡಿಗೋ ವಿಮಾನ(IndiGO) ವನ್ನು ಬಿಹಾರದ ಪಾಟ್ನಾದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇಂಡಿಗೋ ವಿಮಾನ 6E 2433 ಅನ್ನು ಪಾಟ್ನಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಲಾಗಿದೆ ಎಂದು ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.
ಪಾಟ್ನಾದಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನ, ಟೇಕ್-ಆಫ್ ಆದ 3 ನಿಮಿಷಗಳ ನಂತರ, ಅದರ ಎಂಜಿನ್ ಒಂದರಲ್ಲಿ ಕೆಲವು ದೋಷ ಕಂಡುಬಂದಿದೆ. ನಂತರ ತಕ್ಷಣವೇ ವಿಮಾನವನ್ನು ವಾಪಸ್ ಕರೆಸಲಾಯಿತು. ಬೆಳಗ್ಗೆ 9.11ಕ್ಕೆ ಪಾಟ್ನಾ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಸುರಕ್ಷಿತವಾಗಿ ಇಳಿಸಲಾಯಿತು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.
ಮತ್ತಷ್ಟು ಓದಿ: Air India: ದೆಹಲಿಯಿಂದ ಅಮೆರಿಕಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಸ್ವೀಡನ್ನಲ್ಲಿ ತುರ್ತು ಭೂಸ್ಪರ್ಶ
ಪಾಟ್ನಾದಲ್ಲಿ ತುರ್ತು ಭೂಸ್ಪರ್ಶ ಮಾಡಿದ ನಂತರ, ವಿಮಾನದಲ್ಲಿ ಬೇರೆ ಯಾವುದೇ ಸಮಸ್ಯೆ ಕಂಡುಬಂದಿಲ್ಲ ಎಂದು ಪೈಲಟ್ ತಿಳಿಸಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ. ಪಾಟ್ನಾ ವಿಮಾನ ನಿಲ್ದಾಣದಲ್ಲಿ ಎಲ್ಲಾ ವಿಮಾನಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಈ ವಿಷಯವನ್ನು ಪಾಟ್ನಾ ವಿಮಾನ ನಿಲ್ದಾಣದ ನಿರ್ದೇಶಕರು ತಿಳಿಸಿದ್ದಾರೆ.
ಇಂಡಿಗೋ ವಿಮಾನ ಸಂಖ್ಯೆ 6 ಇ 2433 ಶುಕ್ರವಾರ ಬೆಳಗ್ಗೆ ಪಾಟ್ನಾದಿಂದ ದೆಹಲಿಗೆ ಹೋಗುತ್ತಿತ್ತು ಎಂದು ಹೇಳಲಾಗುತ್ತಿದೆ. ಏತನ್ಮಧ್ಯೆ, ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ವಿಮಾನ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಇಂಡಿಗೋ ವಿಮಾನದ ಇಂಜಿನ್ ವೈಫಲ್ಯದಿಂದಾಗಿ ಈ ತುರ್ತು ಲ್ಯಾಂಡಿಂಗ್ ಮಾಡಬೇಕಾಯಿತು. ಪೈಲಟ್‌ಗೆ ಎಂಜಿನ್‌ನಲ್ಲಿ ಸ್ವಲ್ಪ ದೋಷ ಕಂಡುಬಂದಿದೆ. ಇದರಿಂದಾಗಿ ವಿಮಾನವನ್ನು ತಕ್ಷಣವೇ ರನ್‌ವೇ ಮೇಲೆ ಇಳಿಸಲಾಯಿತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:25 am, Fri, 4 August 23