9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ

ರಂಗಿಯಾ ಅರಣ್ಯ ವ್ಯಾಪ್ತಿಯ ಸಿಂಗಾಹಿ ಪಂಚಾಯತ್ ವ್ಯಾಪ್ತಿಯ ದುಮರಿ ಗ್ರಾಮದ 34 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬೆಳಗ್ಗೆ ಹುಲಿ ಕಚ್ಚಿ ಸಾಯಿಸಿತ್ತು. ಕಳೆದ ಸೆಪ್ಟೆಂಬರ್‌ನಿಂದ ಇದೀಗ ನಾಲ್ಕನೇ ವ್ಯಕ್ತಿ ಹುಲಿ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ.

9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ
9 ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ
Follow us
TV9 Web
| Updated By: ಸುಷ್ಮಾ ಚಕ್ರೆ

Updated on: Oct 08, 2022 | 4:34 PM

ಪಾಟ್ನಾ: ಬಿಹಾರ (Bihar) ರಾಜ್ಯದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬಗಾಹಾದಲ್ಲಿ 9 ಜನರನ್ನು ಕೊಂದಿರುವ ಹುಲಿಯನ್ನು ಕೊಲ್ಲಲು ಬಿಹಾರ ಸರ್ಕಾರ ಆದೇಶ ಹೊರಡಿಸಿದೆ. “ಹುಲಿಯು ಮಾನವ ವಾಸಸ್ಥಳದಲ್ಲಿ ನುಗ್ಗಲು ಪ್ರಯತ್ನಿಸುತ್ತಿರುವುದು ದೃಢಪಟ್ಟ ನಂತರ ಎಲ್ಲ ನಿಯಮಗಳನ್ನೂ ಅನುಸರಿಸಿ ಆ ಹುಲಿಯನ್ನು ಕೊಲ್ಲಲು ಆದೇಶಗಳನ್ನು ನೀಡಲಾಗುತ್ತದೆ. ಹುಲಿ (Tiger) ಕೇವಲ ಕಳೆದ 3 ದಿನಗಳಲ್ಲಿ ನಾಲ್ವರನ್ನು ಕೊಂದಿದೆ” ಎಂದು ಡಿಎಫ್​ಓ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಿಟಿಆರ್‌ನ ರಂಗಿಯಾ ಅರಣ್ಯ ವ್ಯಾಪ್ತಿಯ ಸಿಂಗಾಹಿ ಪಂಚಾಯತ್ ವ್ಯಾಪ್ತಿಯ ದುಮರಿ ಗ್ರಾಮದ 34 ವರ್ಷದ ವ್ಯಕ್ತಿಯನ್ನು ಶುಕ್ರವಾರ ಬೆಳಗ್ಗೆ ಹುಲಿ ಕಚ್ಚಿ ಸಾಯಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಈ ಆದೇಶ ನೀಡಲಾಗಿದೆ. ಕಳೆದ ಸೆಪ್ಟೆಂಬರ್‌ನಿಂದ ಇದೀಗ ನಾಲ್ಕನೇ ವ್ಯಕ್ತಿ ಹುಲಿ ದಾಳಿಗೆ ಸಿಕ್ಕಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ಬನ್ನೇರುಘಟ್ಟ ಮೃಗಾಲಯದಲ್ಲಿ ಮೂರು ಹುಲಿಗಳು ಸಾವು; ವಿಚಿತ್ರ ಸೋಂಕು ಹರಡಿರುವ ಶಂಕೆ

ಬುಧವಾರ ಸಿಂಗಾಹಿ ಮುಸ್ತೋಳಿ ಗ್ರಾಮದಲ್ಲಿ 12 ವರ್ಷದ ಬಾಲಕಿ ಹುಲಿ ದಾಳಿಗೆ ಸಿಲುಕಿ ಸಾವನ್ನಪ್ಪಿದ್ದಳು ಎಂದು ಮೀಸಲು ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕ್ಷೇತ್ರ ನಿರ್ದೇಶಕ ಡಾ. ನೇಶಮಣಿ ಕೆ. ಹೇಳಿದ್ದರು. ಮೇ ತಿಂಗಳಿನಿಂದ ಇಲ್ಲಿಯವರೆಗೆ ಒಂದೇ ಹುಲಿಯಿಂದ ಒಟ್ಟು 7 ಜನರು ಸಾವನ್ನಪ್ಪಿದ್ದಾರೆ.

ಜನರ ಸಾವಿಗೆ ಕಾರಣವಾದ ನರಭಕ್ಷಕ ಹುಲಿಯನ್ನು ಕೊಲ್ಲಲು ಆದೇಶವನ್ನು ನೀಡಲಾಗಿದೆ. ಈ ಆದೇಶವನ್ನು ಬಿಹಾರದ ಅರಣ್ಯ ಇಲಾಖೆಯ ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಮ್ ಚೀಫ್ ವನ್ಯಜೀವಿ ವಾರ್ಡನ್ ಪ್ರಭಾತ್ ಕುಮಾರ್ ಗುಪ್ತಾ ಹೊರಡಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
‘ಯುಐ’ ಸಿನಿಮಾ ಗೆಲುವಿನ ಬಳಿಕ ಉಡುಪಿ ಕೃಷ್ಣನ ದರ್ಶನ ಪಡೆದ ಉಪೇಂದ್ರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಚಾಮುಂಡಿ ಬೆಟ್ಟಕ್ಕೆ ಬಂದ ಸುದೀಪ್​; ಕಿಚ್ಚನ ನೋಡಲು ಜನಸಾಗರ
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಸುದೀಪ್ ಇರುವಾಗಲೇ ಬಿಗ್ ಬಾಸ್ ಸ್ಪರ್ಧಿಗಳಿಗೆ ಸುತ್ತಿಗೆ ಪೆಟ್ಟು, ಮಾತಿನ ಏಟು
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷ ಆಚರಣೆಗೆ ಬೆಂಗಳೂರು ಸಿದ್ಧ: ಬಂದೋಬಸ್ತ್ ಹೇಗಿರುತ್ತೆ ಗೊತ್ತಾ?
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಬೆಂಕಿ ಹೊತ್ತಿಕೊಂಡ ಏರ್​ ಕೆನಡಾ ವಿಮಾನ ಲ್ಯಾಂಡಿಂಗ್ ಆಗಿದ್ಹೇಗೆ ನೋಡಿ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಹೈ ಡ್ರಾಮಾ... ಕಾಲಲ್ಲಿ ಕ್ಯಾಚ್ ಹಿಡಿದ ಕೆಎಲ್ ರಾಹುಲ್, ಗೆರೆ ದಾಟಿದ ಬುಮ್ರಾ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
ಸರ್ಕಾರಿ ಶಾಲೆಯ ಮಕ್ಕಳಿಗೆ ವಿಮಾನ ಪ್ರಯಾಣ ಭಾಗ್ಯ, ಪಾಲಕರ ಖುಷಿ ನೋಡಿ
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
Video: ಭೀಕರ ಅಪಘಾತ, ಅಗ್ನಿಶಾಮಕ ವಾಹನಕ್ಕೆ ಡಿಕ್ಕಿ ಹೊಡೆದ ಹೈಸ್ಪೀಡ್ ರೈಲು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ಬೆಳ್ಳಂಬೆಳಗ್ಗೆ ಬಾರ್​ಗಳ ಮೇಲೆ ದಾಳಿ, ಮಾಲೀಕರ ಕಿಕ್ ಇಳಿಸಿದ ಪೊಲೀಸರು
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ
ತ್ರಿವಿಕ್ರಮ್​ ಬಗ್ಗೆ ಭವ್ಯಾ ಹೇಳಿದ ಮಾತು ಕೇಳಿ ನಕ್ಕ ಕಿಚ್ಚ