ಚಲಿಸುತ್ತಿದ್ದ ರೈಲಿನಲ್ಲಿ ಗುಂಡಿಕ್ಕಿ ಪ್ರಯಾಣಿಕನ ಹತ್ಯೆ
ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರೊಬ್ಬರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಗುಂಡಿನ ದಾಳಿಯಿಂದ ಸಾವನ್ನಪ್ಪಿದ ವ್ಯಕ್ತಿಯನ್ನು ಧರ್ಮೇಂದ್ರ ಕುಮಾರ್ ಎಂದು ಗುರುತಿಸಲಾಗಿದ್ದು, ಇವರು ಲಖಿಸರಾಯ್ ಜಿಲ್ಲೆಯ ಮಹ್ಸೋನಾ ಗ್ರಾಮದ ನಿವಾಸಿಯಾಗಿದ್ದು, ಅವರಿಗೆ 49 ವರ್ಷ ವಯಸ್ಸಾಗಿತ್ತು. ರೈಲಿನಲ್ಲಿ ಸಾರ್ವಜನಿಕವಾಗಿ ನಡೆದ ಈ ಕೊಲೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.
ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಲಖಿಸರಾಯ್ ಜಿಲ್ಲೆಯಲ್ಲಿ ಚಲಿಸುತ್ತಿದ್ದ ರೈಲಿನಲ್ಲಿ ಪ್ರಯಾಣಿಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಘಟನೆ ಕುರಿತು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಗುಂಡಿನ ದಾಳಿಯಿಂದ ಸಾವನ್ನಪ್ಪಿದ ವ್ಯಕ್ತಿಯನ್ನು ಧರ್ಮೇಂದ್ರ ಕುಮಾರ್ ಎಂದು ಗುರುತಿಸಲಾಗಿದ್ದು, ಇವರು ಲಖಿಸರಾಯ್ ಜಿಲ್ಲೆಯ ಮಹ್ಸೋನಾ ಗ್ರಾಮದ ನಿವಾಸಿಯಾಗಿದ್ದು, ಅವರಿಗೆ 49 ವರ್ಷ ವಯಸ್ಸಾಗಿತ್ತು. ರೈಲಿನಲ್ಲಿ ಸಾರ್ವಜನಿಕವಾಗಿ ನಡೆದ ಈ ಕೊಲೆ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ.
ಘಟನೆ ನಡೆದಿದ್ದು ಹೇಗೆ? ಈ ಭೀಕರ ಘಟನೆಯು ಹೌರಾ-ಗಯಾ ಎಕ್ಸ್‌ಪ್ರೆಸ್‌ನಲ್ಲಿ ನಡೆದಿದೆ. ಘಟನೆ ಕುರಿತು ಜಮಾಲ್‌ಪುರ ರೈಲ್ವೆ ಪೊಲೀಸ್ ವರಿಷ್ಠಾಧಿಕಾರಿ ಹೇಳಿಕೆ ನೀಡಿದ್ದಾರೆ. ಹೌರಾ-ಗಯಾ ಎಕ್ಸ್‌ಪ್ರೆಸ್ ಅನ್ನು ಮಂಗಳವಾರ ಕಿಯುಲ್ ಜಂಕ್ಷನ್‌ನಲ್ಲಿ ನಿಲ್ಲಿಸಲಾಗಿತ್ತು. ಇದೇ ವೇಳೆ ಕೆಲ ದುಷ್ಕರ್ಮಿಗಳು ಓರ್ವ ಪ್ರಯಾಣಿಕನನ್ನು ಗುಂಡಿಕ್ಕಿ ಕೊಂದಿದ್ದಾರೆ. ರೈಲಿನೊಳಗೆ ಕುಳಿತಿದ್ದ ಪ್ರತ್ಯಕ್ಷದರ್ಶಿಗಳ ಪ್ರಕಾರ, ಕೊಲೆ ಮಾಡಿದ ನಂತರ ದುಷ್ಕರ್ಮಿಗಳು ರೈಲಿನಿಂದ ಹಾರಿ ಓಡಿಹೋದರು.
ಹತ್ಯೆ ನಡೆದಿದ್ದೇಕೆ? ಅಧಿಕಾರಿಗಳ ಪ್ರಕಾರ, ಮೃತರ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಇದರೊಂದಿಗೆ, ಈ ವಿಷಯದ ಬಗ್ಗೆ ವಿವರವಾದ ತನಿಖೆಯನ್ನು ಪ್ರಾರಂಭಿಸಲಾಗಿದೆ. ಧರ್ಮೇಂದ್ರ ಕುಮಾರ್ ಸಾಗಿಸುತ್ತಿದ್ದ ಬ್ಯಾಗ್‌ನ ಒಳಗಿನಿಂದ ಆಸ್ತಿಗೆ ಸಂಬಂಧಿಸಿದ ಕೆಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ರೈಲ್ವೇ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.
ಮತ್ತಷ್ಟು ಓದಿ: ಬೀದರ್: ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, ಇಬ್ಬರು ಸಾವು
ಆದರೆ, ಎಲ್ಲಾ ಆಯಾಮಗಳಿಂದ ತನಿಖೆ ನಡೆಸಲಾಗುತ್ತಿದೆ ಆದರೆ ಘಟನೆಯ ಹಿಂದೆ ಯಾರೋ ಇದ್ದಾರೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಆದಾಗ್ಯೂ, ಪ್ರಕರಣವನ್ನು ಎಲ್ಲಾ ಕೋನಗಳಿಂದ ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 8:05 am, Wed, 22 January 25