AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಪಾಕಿಸ್ತಾನಿ ಗೂಢಚಾರನ ಬಂಧನ

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಪಾಕಿಸ್ತಾನಿ ಗೂಢಚಾರನನ್ನು ಬಂಧಿಸಲಾಗಿದೆ. ಬಿಹಾರದಲ್ಲಿ ನೆಲೆಸಿರುವ ಪಾಕಿಸ್ತಾನಿ ಗೂಢಚಾರರೊಬ್ಬರಿಂದಲೂ ಸೂಕ್ಷ್ಮ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಸುಳಿವಿನ ಮೇರೆಗೆ ಕೋಲ್ಕತ್ತಾ ಪೊಲೀಸರು ಶುಕ್ರವಾರ ಹೌರಾದ ಅವರ ನಿವಾಸದಿಂದ ವ್ಯಕ್ತಿಯನ್ನು ಬಂಧಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಪಾಕಿಸ್ತಾನಿ ಗೂಢಚಾರನ ಬಂಧನ
ಬಂಧನ
ನಯನಾ ರಾಜೀವ್
|

Updated on: Aug 27, 2023 | 8:41 AM

Share

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತಾದಲ್ಲಿ ಪಾಕಿಸ್ತಾನಿ ಗೂಢಚಾರನನ್ನು ಬಂಧಿಸಲಾಗಿದೆ. ಬಿಹಾರದಲ್ಲಿ ನೆಲೆಸಿರುವ ಪಾಕಿಸ್ತಾನಿ ಗೂಢಚಾರನಿಂದ ಸೂಕ್ಷ್ಮ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಾಹಿತಿಯ ಪ್ರಕಾರ, ಸುಳಿವಿನ ಮೇರೆಗೆ ಕೋಲ್ಕತ್ತಾ ಪೊಲೀಸರು ಶುಕ್ರವಾರ ಹೌರಾದ ಅವರ ನಿವಾಸದಿಂದ ವ್ಯಕ್ತಿಯನ್ನು ಬಂಧಿಸಿದ್ದಾರೆ. ಗಂಟೆಗಳ ಕಾಲ ವಿಚಾರಣೆ ನಡೆಸಿದ ಬಳಿಕ ಶುಕ್ರವಾರ ತಡರಾತ್ರಿ ವ್ಯಕ್ತಿಯನ್ನು ಬಂಧಿಸಲಾಗಿದೆ.

ಅವರ ಮೊಬೈಲ್ ಫೋನ್‌ನಲ್ಲಿ ಚಿತ್ರಗಳು, ವೀಡಿಯೊಗಳು ಮತ್ತು ಆನ್‌ಲೈನ್ ಚಾಟ್‌ಗಳ ರೂಪದಲ್ಲಿ ರಹಸ್ಯ ಮಾಹಿತಿ ಕಂಡುಬಂದಿದೆ. ಕೋಲ್ಕತ್ತಾದ ಕೊರಿಯರ್ ಸೇವಾ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಆರೋಪಿ ಈ ಹಿಂದೆ ದೆಹಲಿಯಲ್ಲಿ ನೆಲೆಸಿದ್ದ. ವ್ಯಕ್ತಿಯನ್ನು ಶನಿವಾರ ನಗರದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪೊಲೀಸರ ಪ್ರಕಾರ, 36 ವರ್ಷದ ಆರೋಪಿ, ಮೂಲತಃ ಬಿಹಾರದ ದರ್ಬಂಗಾ ಜಿಲ್ಲೆಯ ನಿವಾಸಿಯಾಗಿದ್ದು, ಸುಳಿವು ನೀಡಿದ ನಂತರ ಹೌರಾದ ಅವರ ನಿವಾಸದಿಂದ ಬಂಧಿಸಲಾಗಿದೆ.

ಆರೋಪಿಯು ದೆಹಲಿಯಿಂದ ಸ್ಥಳಾಂತರಗೊಂಡ ನಂತರ ಕಳೆದ ಮೂರು ತಿಂಗಳಿಂದ ಹೌರಾ ಪ್ರದೇಶದಲ್ಲಿ ವಾಸಿಸುತ್ತಿದ್ದ. ಸ್ಥಳೀಯ ನ್ಯಾಯಾಲಯ ಅವರನ್ನು ಸೆಪ್ಟೆಂಬರ್ 6ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

ಮತ್ತಷ್ಟು ಓದಿ: ಉತ್ತರ ಪ್ರದೇಶದಲ್ಲಿ ನಡೆದಿತ್ತು ಸಿಧು ಮೂಸೆವಾಲಾ ಹತ್ಯೆಗೆ ಸಂಚು, ಪಾಕ್​ನಿಂದ ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳಲಾಗಿತ್ತು

ಭಾರತೀಯ ದಂಡ ಸಂಹಿತೆ (ಐಪಿಸಿ) ಮತ್ತು ಅಧಿಕೃತ ರಹಸ್ಯ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ, ಪ್ರಕರಣದಲ್ಲಿ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!