AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಅಕ್ರಮ ಮರಳು ಗಣಿಗಾರಿಕೆ ತಡೆಯಲು ಯತ್ನಿಸಿದ ಮಹಿಳಾ ಅಧಿಕಾರಿಗೆ ಥಳಿತ

ಬಿಹಾರದಲ್ಲಿ ಅಕ್ರಮ ಮರಳು ಗಣಿಗಾರಿಕೆ(Sand Mining)  ತಡೆಗೆ ನಡೆಸಿದ ತಪಾಸಣೆ ವೇಳೆ ಮಹಿಳಾ ಅಧಿಕಾರಿ  ಸೇರಿದಂತೆ ಮೂವರು ಅಧಿಕಾರಿಗಳ ಮೇಲೆ ಗುಂಪೊಂದು ದಾಳಿ ನಡೆಸಿದೆ. ಗುಂಪು ಮೂವರ ಮೇಲೆ ಕಲ್ಲು ಎಸೆದು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದು, ಈ ವಿಡಿಯೋ ವೈರಲ್ ಆಗಿದೆ.

Bihar: ಅಕ್ರಮ ಮರಳು ಗಣಿಗಾರಿಕೆ ತಡೆಯಲು ಯತ್ನಿಸಿದ ಮಹಿಳಾ ಅಧಿಕಾರಿಗೆ ಥಳಿತ
ಮಹಿಳಾ ಅಧಿಕಾರಿಗೆ ಥಳಿತ
ನಯನಾ ರಾಜೀವ್
|

Updated on:Apr 18, 2023 | 9:30 AM

Share

ಬಿಹಾರದಲ್ಲಿ ಅಕ್ರಮ ಮರಳು ಗಣಿಗಾರಿಕೆ(Sand Mining)  ತಡೆಗೆ ನಡೆಸಿದ ತಪಾಸಣೆ ವೇಳೆ ಮಹಿಳಾ ಅಧಿಕಾರಿ  ಸೇರಿದಂತೆ ಮೂವರು ಅಧಿಕಾರಿಗಳ ಮೇಲೆ ಗುಂಪೊಂದು ದಾಳಿ ನಡೆಸಿದೆ. ಗುಂಪು ಮೂವರ ಮೇಲೆ ಕಲ್ಲು ಎಸೆದು ದೊಣ್ಣೆಗಳಿಂದ ಹಲ್ಲೆ ನಡೆಸಿದ್ದು, ಈ ವಿಡಿಯೋ ವೈರಲ್ ಆಗಿದೆ. ಬಿಹಾರದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ, ಪಾಟ್ನಾ ಬಳಿಯ ಬಿಹ್ತಾ ಎಂಬಲ್ಲಿ ಅಕ್ರಮ ಮರಳು ಸಾಗಾಟದಲ್ಲಿ ತೊಡಗಿದ್ದ ಜನರು ಮಹಿಳಾ ಅಧಿಕಾರಿ ಮೇಲೆ ಹಲ್ಲೆ ನಡೆಸಿದ್ದಾರೆ.

ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿರುವ ಜನರು ಮಹಿಳಾ ಅಧಿಕಾರಿಯನ್ನು ಎಳೆದುಕೊಂಡು ಆಕೆಯ ಮೇಲೆ ಹಲ್ಲೆ ನಡೆಸಿದ್ದು ಇದೀಗ 44 ಮಂದಿಯನ್ನು ಬಂಧಿಸಲಾಗಿದೆ. ಮೂವರ ಮೇಲೆ ಎಫ್​ಐಆರ್​ ದಾಖಲಿಸಲಾಗಿದೆ.

ಬಿಹ್ತಾ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆಯನ್ನು ಪರಿಶೀಲಿಸುವ ಕಾರ್ಯಾಚರಣೆಯ ಭಾಗವಾಗಿ ತಂಡವೊಂದು ತಪಾಸಣೆ ಮತ್ತು ಶೋಧನೆಗೆ ತೆರಳಿದ್ದಾಗ ಈ ಘಟನೆ ನಡೆದಿದೆ.

ಮತ್ತಷ್ಟು ಓದಿ: ಗದಗ: ಅಕ್ರಮ ಮರಳು ಗಣಿಗಾರಿಕೆ ಮೇಲೆ ದಾಳಿ ಮಾಡಿದ ಅಧಿಕಾರಿ ವರ್ಗಾವಣೆ

ಅವರು ಕೊಯಿಲ್ವಾರ್ ಸೇತುವೆ ಬಳಿ ತಲುಪಿದಾಗ, ಅಧಿಕಾರಿಗಳ ಮೇಲೆ ಮರಳು ಮಾಫಿಯಾದಲ್ಲಿ ತೊಡೆಗಿರುವವರು ದಾಳಿ ನಡೆಸಿದ್ದಾರೆ. 44 ಜನರ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, 50 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿರಿಯ ಪೊಲೀಸ್ ಅಧೀಕ್ಷಕ ರಾಜೀವ್ ಮಿಶ್ರಾ ಅವರು ಸುದ್ದಿ ಸಂಸ್ಥೆ ಪಿಟಿಐಗೆ ಮಾಹಿತಿ ನೀಡಿದ್ದು, ತನಿಖೆ ನಡೆಸಲಾಗುತ್ತಿದೆ ಇನ್ನೂ ಹೆಚ್ಚು ಮಂದಿಯನ್ನು ಬಂಧಿಸುವ ಸಾಧ್ಯತೆ ಇದೆ. ಈ ಘಟನೆಯ ಹಿಂದಿನ ಮಾಸ್ಟರ್ ಮೈಂಡ್ ಅನ್ನು ಪೊಲೀಸರು ಶೀಘ್ರದಲ್ಲೇ ಬಂಧಿಸಲಿದ್ದಾರೆ ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:28 am, Tue, 18 April 23

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್