AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮ್ಮಾ ಅವ್ನು ನನ್ನ ಬಳಿ ಕೆಟ್ಟದಾಗಿ ನಡೆದುಕೊಂಡ ಎಂದು ದೂರು ಕೊಟ್ಟಿದ್ದಕ್ಕೆ, ಬಾಲಕಿಯನ್ನೇ ಕತ್ತು ಸೀಳಿ ಕೊಂದ ಅಪ್ರಾಪ್ತ

ಬಿಹಾರದ ಕಟಿಹಾರ್‌ನಲ್ಲಿ ನಡೆದ ಘಟನೆಯಲ್ಲಿ, 9 ವರ್ಷದ ಬಾಲಕಿಯನ್ನು 13 ವರ್ಷದ ಅಪ್ರಾಪ್ತ ಬಾಲಕ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಬಾಲಕಿ ತನ್ನ ಪೋಷಕರಿಗೆ ಬಾಲಕನ ಮಾದಕ ವ್ಯಸನದ ಬಗ್ಗೆ ದೂರು ನೀಡಿದ ಕಾರಣ, ಕೋಪಗೊಂಡ ಅಪ್ರಾಪ್ತ ಈ ಕೃತ್ಯ ಎಸಗಿದ್ದಾನೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಬಾಲಾಪರಾಧಿ ಕಾನೂನಿನಡಿಯಲ್ಲಿ ತನಿಖೆ ಮುಂದುವರಿಸಿದ್ದಾರೆ. ಈ ಘಟನೆ ಸಮಾಜದಲ್ಲಿ ಮಾದಕ ವ್ಯಸನ ಮತ್ತು ಬಾಲಾಪರಾಧದ ಗಂಭೀರ ಪರಿಣಾಮಗಳನ್ನು ಎತ್ತಿ ತೋರಿಸುತ್ತದೆ.

ಅಮ್ಮಾ ಅವ್ನು ನನ್ನ ಬಳಿ ಕೆಟ್ಟದಾಗಿ ನಡೆದುಕೊಂಡ ಎಂದು ದೂರು ಕೊಟ್ಟಿದ್ದಕ್ಕೆ, ಬಾಲಕಿಯನ್ನೇ ಕತ್ತು ಸೀಳಿ ಕೊಂದ ಅಪ್ರಾಪ್ತ
ಅಪರಾಧ ನಡೆಸ ಸ್ಥಳImage Credit source: India Today
ನಯನಾ ರಾಜೀವ್
|

Updated on: Mar 02, 2026 | 9:35 AM

Share

ಪಾಟ್ನಾ, ಮಾರ್ಚ್​ 02: ಮಾದಕದ್ರವ್ಯ ಸೇವಿಸಿ ತನ್ನ ಬಳಿ ಕೆಟ್ಟದಾಗಿ ನಡೆದುಕೊಂಡಿದ್ದ ಅಪ್ರಾಪ್ತನ ಬಗ್ಗೆ  ಮನೆಯಲ್ಲಿ ದೂರು ಕೊಟ್ಟಿದ್ದಕ್ಕೆ ಕೋಪಗೊಂಡ ಬಾಲಕ 9 ವರ್ಷದ ಬಾಲಕಿಯ ಕತ್ತು ಸೀಳಿ ಕೊಲೆ(Murder) ಮಾಡಿರುವ ಘಟನೆ ಬಿಹಾರದ ಕಟಿಹಾರ್​ನಲ್ಲಿ ನಡೆದಿದೆ. ಕರಣದ ಆರೋಪಿಯೂ ಅಪ್ರಾಪ್ತ ವಯಸ್ಕನಾಗಿದ್ದು, ಆತನನ್ನು ಬಂಧಿಸಲಾಗಿದೆ.

ಕೊಲಾಸಿ ಪೊಲೀಸ್ ಠಾಣೆ ವ್ಯಾಪ್ತಿಯ ಸಂದಲ್‌ಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಒಂದು ದಿನ ಹಿಂದೆ ಬಾಲಕಿ ಮನೆಯಿಂದ ನಾಪತ್ತೆಯಾಗಿದ್ದಳು. ನಂತರ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಆಕೆಗಾಗಿ ಹುಡುಕಾಟ ಆರಂಭಿಸಿದ್ದರು. ಮರುದಿನ ಕುತ್ತಿಗೆ ಸೀಳಿದ ಸ್ಥಿತಿಯಲ್ಲಿ ಆಕೆಯ ಶವ ಹತ್ತಿರದ ಮೆಕ್ಕೆಜೋಳದ ಹೊಲದಿಂದ ಪತ್ತೆಯಾಗಿದೆ.

ಪ್ರಾಥಮಿಕ ತನಿಖೆಯಲ್ಲಿ ಅದೇ ಗ್ರಾಮದ 13 ವರ್ಷದ ಬಾಲಕ ಆರೋಪಿಯಾಗಿದ್ದು, ಬಾಲಕಿ ಹೊಲದ ಕಡೆಗೆ ಹೋಗುತ್ತಿದ್ದಾಗ ಹರಿತವಾದ ಆಯುಧದಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬಾಲಕ ಮಾದಕ ವ್ಯಸನಿಯಾಗಿದ್ದ ಮತ್ತು ಆಗಾಗ ಮಾದಕ ದ್ರವ್ಯ ಸೇವಿಸುತ್ತಿದ್ದ ಎಂದು ಸ್ಥಳೀಯ ನಿವಾಸಿಗಳು ಹೇಳಿದ್ದಾರೆ.

ಮತ್ತಷ್ಟು ಓದಿ: ವ್ಯಕ್ತಿಯ ಮರ್ಮಾಂಗ ಕತ್ತರಿಸಿ ಹತ್ಯೆ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್: ಕೊಲೆಗೆ ಸಾಥ್ ಕೊಟ್ಟು ಡ್ರಾಮಾ ಮಾಡಿದ್ದ ಹೆಂಡ್ತಿ, ಮಗ!

ಗ್ರಾಮಸ್ಥರ ಪ್ರಕಾರ, ಬಲಿಪಶು ಇತ್ತೀಚೆಗೆ ತನ್ನ ಪೋಷಕರಲ್ಲಿ ತನ್ನ ಆತನ ವರ್ತನೆಯ ಬಗ್ಗೆ ದೂರು ನೀಡಿದ್ದಳು, ನಂತರ ಕುಟುಂಬ ಸದಸ್ಯರು ಬಾಲಕನ ಬಳಿ ಹೋಗಿ ಗದರಿದ್ದರು ಎಂದು ವರದಿಯಾಗಿದೆ. ಅದಕ್ಕೆ ಕೋಪಗೊಂಡ ಆತ ಆಕೆಯನ್ನು ಕೊಲೆ ಮಾಡಲು ನಿರ್ಧರಿಸಿದ್ದ.

ಮೃತದೇಹ ಪತ್ತೆಯಾಗಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸ್ ತಂಡಗಳು ಸ್ಥಳಕ್ಕೆ ಧಾವಿಸಿ ತನಿಖೆ ಆರಂಭಿಸಿದ್ದವು. ಕೆಲವೇ ಗಂಟೆಗಳಲ್ಲಿ ಪ್ರಕರಣವನ್ನು ಬಗೆಹರಿಸಲಾಗಿದೆ ಮತ್ತು ಬಾಲಾಪರಾಧಿಗಳಿಗೆ ಅನ್ವಯಿಸುವ ಕಾನೂನಿನಡಿಯಲ್ಲಿ ಅಪರಾಧ ಎಸಗಿದ ಆರೋಪದ ಮೇಲೆ ಅಪ್ರಾಪ್ತ ವಯಸ್ಕ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲಕಿ ತನ್ನ ಪೋಷಕರಿಗೆ ನೀಡಿದ ದೂರಿನ ಮೇರೆಗೆ ಆರೋಪಿ ಕೋಪದಿಂದ ವರ್ತಿಸಿರಬಹುದು ಎಂದು ಸ್ಥಳೀಯ ನಿವಾಸಿ ಎಂಡಿ ಅಸ್ಲಾಂ ಆರೋಪಿಸಿದ್ದಾರೆ. ಘಟನೆಯನ್ನು ದೃಢಪಡಿಸಿದ ಹಿರಿಯ ಪೊಲೀಸ್ ಅಧಿಕಾರಿ ರಂಜನ್ ಕುಮಾರ್ ಸಿಂಗ್, ಕಾಣೆಯಾದ ಬಾಲಕಿಯನ್ನು ಹರಿತವಾದ ಆಯುಧದಿಂದ ಕೊಲ್ಲಲಾಗಿದೆ ಎಂದು ಹೇಳಿದ್ದಾರೆ.

ಕೊಲೆಗೆ ಬಳಸಲಾದ ಆಯುಧವನ್ನು ವಶಪಡಿಸಿಕೊಳ್ಳಲಾಗಿದೆ ಮತ್ತು ಆರೋಪಿ ಅಪ್ರಾಪ್ತನನ್ನು ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದೆ. ಹೆಚ್ಚಿನ ತನಿಖೆ ನಡೆಯುತ್ತಿದೆ. ಬಾಲಾಪರಾಧಿ ನ್ಯಾಯ ನಿಬಂಧನೆಗಳ ಪ್ರಕಾರ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ನಯನಾ ರಾಜೀವ್
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ