Bihar: ಸಿವಾನ್ನಲ್ಲಿ ನಕಲಿ ಮದ್ಯ ಸೇವಿಸಿ ಇಬ್ಬರು ಸಾವು, ಹತ್ತಾರು ಮಂದಿ ಅಸ್ವಸ್ಥ
ಮದ್ಯ ನಿಷೇಧವಿರುವ ಬಿಹಾರದಲ್ಲೇ ನಕಲಿ ಮದ್ಯ ಸೇವಿಸಿ ಇಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಬಿಹಾರದ ಸಿವಾನ್‌ನ ಲಕಾರಿ ನಬಿಗಂಜ್‌ನಲ್ಲಿ ನಕಲಿ ಮದ್ಯ ಸೇವಿಸಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಹತ್ತಾರು ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ.
ಮದ್ಯ ನಿಷೇಧವಿರುವ ಬಿಹಾರದಲ್ಲೇ ನಕಲಿ ಮದ್ಯ ಸೇವಿಸಿ ಇಬ್ಬರು ಮೃತಪಟ್ಟಿರುವ ಘಟನೆ ವರದಿಯಾಗಿದೆ. ಬಿಹಾರದ ಸಿವಾನ್‌ನ ಲಕಾರಿ ನಬಿಗಂಜ್‌ನಲ್ಲಿ ನಕಲಿ ಮದ್ಯ ಸೇವಿಸಿ ಇಬ್ಬರು ಪ್ರಾಣ ಕಳೆದುಕೊಂಡಿದ್ದು, ಹತ್ತಾರು ಮಂದಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಸಿವಾನ್‌ನಲ್ಲಿರುವ ಉಪವಿಭಾಗದ ಸಾರ್ವಜನಿಕ ಕುಂದುಕೊರತೆ ಅಧಿಕಾರಿ ಅಭಿಷೇಕ್ ಚಂದನ್ ಈ ಕುರಿತು ಮಾಹಿತಿ ನೀಡಿದ್ದಾರೆ, ಮೃತರಲ್ಲಿ ಒಬ್ಬರು ನಕಲಿ ಮದ್ಯ ಸೇವಿಸಿ ಸಾವನ್ನಪ್ಪಿದ್ದಾರೆ ಮತ್ತು ಇನ್ನೊಬ್ಬರು ಸಿವಾನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಓರ್ವ ವ್ಯಕ್ತಿ ಚೇತರಿಸಿಕೊಂಡಿದ್ದು, ಇತರ ಐವರು ಪ್ರಸ್ತುತ ಸಿವಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಾವಿನ ಕಾರಣವನ್ನು ಇನ್ನೂ ಕಂಡುಹಿಡಿಯಲಾಗಿಲ್ಲ, ಮರಣೋತ್ತರ ಪರೀಕ್ಷೆಯ ವರದಿಗಳ ನಂತರ ಅದನ್ನು ಸ್ಪಷ್ಟಪಡಿಸಲಾಗುವುದು ಎಂದು ಅಭಿಷೇಕ್ ಚಂದನ್ ಹೇಳಿದ್ದಾರೆ.
ಮಾಹಿತಿಯ ಪ್ರಕಾರ, ಮೃತರು ಸಿವಾನ್‌ನ ನಬಿಗಂಜ್‌ನ ಬಾಲಾ ಗ್ರಾಮದ ಜನಕ್ ಬೀನ್ ಅಲಿಯಾಸ್ ಜನಕ್ ಪ್ರಸಾದ್ ಮತ್ತು ನರೇಶ್ ಬೀನ್ಗೆ ರಾತ್ರಿ ಹೊಟ್ಟೆ ನೋವು ಕಾಣಿಸಿಕೊಂಡಿತ್ತು, ನಂತರ ಅವರ ಸಂಬಂಧಿ ಅವರನ್ನು ಸಿವಾನ್‌ಗೆ ಕರೆದೊಯ್ದರು. ಸದರ್ ಆಸ್ಪತ್ರೆಯ ವೈದ್ಯರು ಅವರು ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.
ಮತ್ತಷ್ಟು ಓದಿ: ಬಿಹಾರದಲ್ಲಿ ನಕಲಿ ಮದ್ಯ ಸೇವಿಸಿ 21 ಮಂದಿ ಸಾವು: ಸಚಿವ ಸುನಿಲ್ ಕುಮಾರ್
ವಿಷಪೂರಿತ ಮದ್ಯ ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಬೆಳಕಿಗೆ ಬಂದಾಗಿನಿಂದಲೂ ಜಿಲ್ಲಾಡಳಿತ ಗ್ರಾಮದಲ್ಲಿ ಶಿಬಿರ ನಡೆಸಲು ಆರಂಭಿಸಿದೆ. ಈ ನಕಲಿ ಮದ್ಯವನ್ನು ಸೇವಿಸಿದ ಕಾರಣ ಕನಿಷ್ಠ ಇಬ್ಬರು ವ್ಯಕ್ತಿಗಳನ್ನು ಸಿವಾನ್ ಸದರ್ ಆಸ್ಪತ್ರೆಗೆ ಕಳುಹಿಸಿದ ನಂತರ ಸಾವನ್ನಪ್ಪಿದ್ದಾರೆ ಎಂದು ಘೋಷಿಸಲಾಗಿದೆ.
ಸುಮಾರು ಹತ್ತಾರು ಮಂದಿ ಅಸ್ವಸ್ಥರಾಗಿದ್ದಾರೆ ಮತ್ತು ಪೊಲೀಸರು ಗ್ರಾಮದಲ್ಲಿ ಶಿಬಿರಗಳನ್ನು ಸ್ಥಾಪಿಸಿದ್ದಾರೆ ಎಂದು ಗ್ರಾಮದ ಜಿಲ್ಲಾ ಕೌನ್ಸಿಲರ್ ಹೇಳಿದರು. ಮಾಹಿತಿ ಪ್ರಕಾರ, ಈ ನಕಲಿ ಮದ್ಯ ಸೇವನೆಯಿಂದ ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಗಮನಾರ್ಹವೆಂದರೆ, ಬಿಹಾರ ಪೊಲೀಸರು ಡಿಸೆಂಬರ್ 21, 2022 ರಂದು ದಾನಪುರದ ಗಟಾರದಲ್ಲಿ ಬಚ್ಚಿಟ್ಟಿದ್ದ ನಕಲಿ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಂಡ ಕೆಲವು ದಿನಗಳ ನಂತರ ಈ ಘಟನೆ ನಡೆದಿದೆ.
ನಿತೀಶ್ ಕುಮಾರ್ ನೇತೃತ್ವದ ಸರ್ಕಾರವು ಏಪ್ರಿಲ್ 2016 ರಲ್ಲಿ ಬಿಹಾರದಲ್ಲಿ ಮದ್ಯ ಮಾರಾಟ ಮತ್ತು ಸೇವನೆಯನ್ನು ನಿಷೇಧಿಸಿತ್ತು.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 7:55 am, Mon, 23 January 23