AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್​ ಊಟದಲ್ಲಿ ಸತ್ತ ಹಾವು ಪತ್ತೆ, ವಿದ್ಯಾರ್ಥಿಗಳು ಅಸ್ವಸ್ಥ

ಬಿಹಾರದ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್​ನಲ್ಲಿ ಸತ್ತ ಹಾವು ಬಿದ್ದಿರುವ ಊಟವನ್ನು ಸೇವಿಸಿದ ವಿದ್ಯಾರ್ಥಿಗಳು ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್​ ಊಟದಲ್ಲಿ ಸತ್ತ ಹಾವು ಪತ್ತೆ, ವಿದ್ಯಾರ್ಥಿಗಳು ಅಸ್ವಸ್ಥ
ನಯನಾ ರಾಜೀವ್
|

Updated on: Jun 17, 2024 | 10:35 AM

Share

ಬಿಹಾರದ ಬಂಕಾದ ಲಾಡಿಕೋಲಾದಲ್ಲಿರುವ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್​ ಊಟದಲ್ಲಿ ಸತ್ತ ಹಾವು(Dead Snake) ಪತ್ತೆಯಾಗಿರುವ ಘಟನೆ ವರದಿಯಾಗಿದೆ. ರಾತ್ರಿ ಸಾಕಷ್ಟು ಮಂದಿ ವಿದ್ಯಾರ್ಥಿಗಳು ಅಲ್ಲಿ ಊಟ ಮಾಡಿದ್ದಾರೆ, ಊಟ ಮಾಡಿದ ಬಳಿಕ 10 ವಿದ್ಯಾರ್ಥಿಗಳ ಆರೋಗ್ಯ ಹಠಾತ್ ಹದಗೆಟ್ಟಿದೆ. ಕೂಡಲೇ ಅವರನ್ನೆಲ್ಲ ಬಂಕಾ ಸದರ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆಯಲ್ಲಿ ಡಾ.ರವಿಕಾಂತ್ ಅವರನ್ನು ಪರೀಕ್ಷಿಸಿ ಔಷಧ ನೀಡಿದರು.

ಅಸ್ವಸ್ಥ ವಿದ್ಯಾರ್ಥಿಗಳಲ್ಲಿ ಗಣೇಶ್ ಪ್ರಸಾದ್, ಮಹೇಶ್ ಕುಮಾರ್, ಸುನ್ನಿ ಕುಮಾರ್, ಸರೋಜ್ ಕುಮಾರ್, ಅಭಿನವ್ ಕುಮಾರ್, ರೂಪೇಶ್ ಕುಮಾರ್, ಜೇಮಿ, ಅಮಿತ್ ರಾಜ್, ಅಮನ್ ಕುಮಾರ್ ಮತ್ತು ಅಶ್ವಿನಿ ಕುಮಾರ್ ಸೇರಿದ್ದಾರೆ. ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನ್ ಆಗಿದೆ ಎಂದು ವೈದ್ಯ ರವಿಕಾಂತ್ ತಿಳಿಸಿದ್ದಾರೆ. ಎಲ್ಲ ವಿದ್ಯಾರ್ಥಿಗಳಿಗೆ ಉಪಚರಿಸಿ ಮತ್ತೆ ಹಾಸ್ಟೆಲ್‌ಗೆ ಕಳುಹಿಸಿದರು.

ಆಹಾರದಲ್ಲಿ ಸತ್ತ ಹಾವು, ತಿಂದ ನಂತರ ಹೊಟ್ಟೆನೋವು ಕಂಡುಬಂದಿದೆ ಅವರಿಗೆ ನೀಡಿದ ಆಹಾರದಲ್ಲಿ ಸತ್ತ ಹಾವು ಇತ್ತು ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ.

ಮತ್ತಷ್ಟು ಓದಿ: ಐಸ್​ಕ್ರೀಂನಲ್ಲಿ ಮಾನವನ ಬೆರಳು ಪತ್ತೆ ಪ್ರಕರಣ, ಕಂಪನಿಯ ಪರವಾನಗಿ ರದ್ದು

ಆಹಾರ ಸೇವಿಸಿದ ಕೂಡಲೇ ವಾಂತಿಯಾಗಲು ಆರಂಭಿಸಿ ಹೊಟ್ಟೆ ನೋವು ಕಾಣಿಸಿಕೊಂಡಿತು. ಈ ಬಗ್ಗೆ ಕಾಲೇಜು ಆಡಳಿತ ಮಂಡಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಆಂಬ್ಯುಲೆನ್ಸ್‌ಗೆ ಕರೆ ಮಾಡಲು ಪ್ರಯತ್ನಿಸಿದಾಗ, ಕಾಲೇಜು ಆಂಬ್ಯುಲೆನ್ಸ್ ಅನ್ನು ನಿಲ್ಲಿಸಿತು. ವಿದ್ಯಾರ್ಥಿಗಳನ್ನು ಬಲವಂತವಾಗಿ ಖಾಸಗಿ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಯಿತು.

ಕಾಲೇಜು ಗೇಟ್ ಬಳಿ ವಿದ್ಯಾರ್ಥಿಗಳ ಪ್ರತಿಭಟನೆ ವಿದ್ಯಾರ್ಥಿಗಳು ಕಾಲೇಜಿನ ಗೇಟ್‌ ಎದುರು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳ ಪ್ರತಿಭಟನೆಯ ನಂತರ, ಜಿಲ್ಲಾ ಮ್ಯಾಜಿಸ್ಟ್ರೇಟ್ (ಡಿಎಂ) ಆದೇಶದ ಮೇರೆಗೆ ಬಂಕಾ ಡೆಪ್ಯುಟಿ ಡೆವಲಪ್‌ಮೆಂಟ್ ಕಮಿಷನರ್ (ಎಸ್‌ಡಿಎಂ), ಅವಿನಾಶ್ ಕುಮಾರ್ ಮತ್ತು ಉಪ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಡಿಪಿಒ) ವಿನೋದ್ ಕುಮಾರ್ ಅವರು ಈ ಬಗ್ಗೆ ತನಿಖೆ ನಡೆಸಿದರು. ಅಧಿಕಾರಿಗಳು ಕಾಲೇಜಿನ ವಿದ್ಯಾರ್ಥಿಗಳು ಮತ್ತು ಆಡಳಿತ ಮಂಡಳಿಯೊಂದಿಗೆ ಮಾತನಾಡಿ ಸಂಪೂರ್ಣ ಮಾಹಿತಿ ಸಂಗ್ರಹಿಸಿದರು.

ಅವರು ತಮ್ಮ ವರದಿಯನ್ನು ಡಿಎಂಗೆ ಸಲ್ಲಿಸಿದ್ದಾರೆ. ಕಾಲೇಜು ಉದ್ಯೋಗಿ ರಾಧೇಶ್ಯಾಮ್ ವಿರುದ್ಧ ವಿದ್ಯಾರ್ಥಿಗಳು ಗಂಭೀರ ಆರೋಪ ಮಾಡಿದ್ದಾರೆ. ಆಹಾರದ ಬಗ್ಗೆ ಪ್ರತಿಭಟನೆ ನಡೆಸಿ ಅಸ್ವಸ್ಥ ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಂತೆ ಕೇಳಿದಾಗ ರಾಧೇಶ್ಯಾಮ್ ತಮ್ಮೊಂದಿಗೆ ಅನುಚಿತವಾಗಿ ವರ್ತಿಸಿ ಬೆದರಿಕೆ ಹಾಕಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿದ್ದಾರೆ. ತಪ್ಪಿತಸ್ಥರ ವಿರುದ್ಧ ಜಿಲ್ಲಾಡಳಿತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ