Bihar: ಪತ್ನಿಯನ್ನು ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ ಪತಿ

ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ವ್ಯಕ್ತಿಯೊಬ್ಬ ಮದುವೆ ಮಾಡಿಸಿರುವ ಘಟನೆ ಬಿಹಾರದ ನವಾಡ ಜಿಲ್ಲೆಯಲ್ಲಿ ನಡೆದಿದೆ.

Bihar: ಪತ್ನಿಯನ್ನು ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ ಪತಿ
ಮದುವೆ
Image Credit source: India Today

Updated on: Jul 07, 2023 | 11:50 AM

ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ವ್ಯಕ್ತಿಯೊಬ್ಬ ಮದುವೆ ಮಾಡಿಸಿರುವ ಘಟನೆ ಬಿಹಾರದ ನವಾಡ ಜಿಲ್ಲೆಯಲ್ಲಿ ನಡೆದಿದೆ. ಮಹಿಳೆ ತನ್ನ ಪ್ರೇಮಿಯೊಂದಿಗೆ ಹೋಗಲು ಬಯಸಿದ್ದಳು ಹೀಗಾಗಿ ಪತ್ನಿಯನ್ನು ಆಕೆಯ ಪ್ರಿಯಕರನಿಗೆ ಕೊಟ್ಟು ಮದುವೆ ಮಾಡಿದ್ದಾರೆ. ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಶಿವ ಮಂದಿರದಲ್ಲಿ ಪತಿಯ ಸಮ್ಮುಖದಲ್ಲಿ ಆಕೆ ಪ್ರಿಯಕರನನ್ನು ಮದುವೆಯಾದಳು. ಆಕೆಯ ಹಣೆಗೆ ಸಿಂಧೂರ ಹಚ್ಚುತ್ತಿರುವ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಆತ ಆಕೆಯ ಹಣೆಗೆ ಸಿಂಧೂರ ಹಚ್ಚುತ್ತಿರುವುದು ಆಕೆ ಅಳುತ್ತಿರುವುದನ್ನು ಕಾಣಬಹುದು.

ಘಟನೆ ಏನು?
ಪತಿ ಕೆಲಸದ ನಿಮಿತ್ತ ಹೊರಗೆ ಹೋಗಿದ್ದ ವೇಳೆ ಮಹಿಳೆಯನ್ನು ಭೇಟಿಯಾಗಲು ಆಕೆಯ ತಡರಾತ್ರಿ ಮನೆಗೆ ಬಂದಿದ್ದ, ಆಗ ಕುಟುಂಬದವರ ಕೈಗೆ ಸಿಕ್ಕಿ ಬಿದ್ದಿದ್ದರು. ಕುಟುಂಬದ ಸದಸ್ಯರು ಆ ವ್ಯಕ್ತಿಯನ್ನು ಥಳಿಸಿ ಇಬ್ಬರನ್ನೂ ಊರು ಬಿಟ್ಟು ಹೋಗುವಂತೆ ಒತ್ತಾಯಿಸಿದ್ದಾರೆ.

ಮತ್ತಷ್ಟು ಓದಿ: ಮಹಿಳೆ‌ ಜೊತೆ ಅಕ್ರಮ‌ ಸಂಬಂಧ ಆರೋಪ; ಗುತ್ತಿಗೆದಾರನ ಮೇಲೆ ಮಹಿಳೆ ಸಂಬಂಧಿಕರಿಂದ ಹಲ್ಲೆ

ಮಹಿಳೆಯ ಪತಿ ಹಿಂದಿರುಗಿ ಬಂದಾಗ ವಿಷಯ ತಿಳಿದು ದೇವಸ್ಥಾನಕ್ಕೆ ಕರೆದೊಯ್ದು ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿದ್ದಾರೆ. ಮಹಿಳೆಯ ಪ್ರಿಯಕರನಿಗೆ ಈಗಾಗಲೇ ಮದುವೆಯಾಗಿದ್ದು ಈಗಾಗಲೇ ಮೂರು ಮಕ್ಕಳಿದ್ದಾರೆ. ಅವರ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ