AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕುಟುಂಬವನ್ನು ಒತ್ತೆಯಾಳಾಗಿರಿಸಿ ಉದ್ಯಮಿ ಮನೆಯ ಲೂಟಿ, 1.26 ಕೋಟಿ ರೂ. ಕದ್ದೊಯ್ದ ದುಷ್ಕರ್ಮಿಗಳು

ಪಾಟ್ನಾದ ನಳಂದ ಕಾಲೋನಿಯಲ್ಲಿರುವ ಮೋಟಾರ್ ಪಾರ್ಟ್ಸ್ ಉದ್ಯಮಿ ಸಂತೋಷ್ ಪ್ರಕಾಶ್ ಅವರ ಮನೆಯಿಂದ ಶನಿವಾರ ಬೆಳಗ್ಗೆ ಐವರು ಶಸ್ತ್ರಸಜ್ಜಿತ ವ್ಯಕ್ತಿಗಳು 1.26 ಕೋಟಿ ರೂ. ನಗದು ಮತ್ತು ಆಭರಣಗಳನ್ನು ದೋಚಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದು, ಸ್ಥಳದಲ್ಲಿ ಶ್ವಾನ ದಳ ಮತ್ತು ವಿಧಿವಿಜ್ಞಾನ ತಂಡವನ್ನು ನಿಯೋಜಿಸಲಾಗಿದೆ. ಶನಿವಾರ ಬೆಳಗ್ಗೆ 10.30 ರ ಸುಮಾರಿಗೆ ಅಗಮ್ಕುವಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಕುಟುಂಬವನ್ನು ಒತ್ತೆಯಾಳಾಗಿರಿಸಿ ಉದ್ಯಮಿ ಮನೆಯ ಲೂಟಿ, 1.26 ಕೋಟಿ ರೂ. ಕದ್ದೊಯ್ದ ದುಷ್ಕರ್ಮಿಗಳು
ದರೋಡೆImage Credit source: Benjamin Law firm
ನಯನಾ ರಾಜೀವ್
|

Updated on: Apr 06, 2025 | 9:20 AM

Share

ಪಾಟ್ನಾ, ಏಪ್ರಿಲ್ 06: ಪಾಟ್ನಾದಲ್ಲಿ ಹಗಲು ದರೋಡೆ(Robbery) ನಡೆದಿದೆ. ಶಸ್ತ್ರಸಜ್ಜಿತ ದುಷ್ಕರ್ಮಿಗಳು ಉದ್ಯಮಿಯ ಕುಟುಂಬದವರನ್ನು ಒತ್ತೆಯಾಳಾಗಿರಿಸಿಕೊಂಡು 1.26 ಕೋಟ ರೂ. ಲೂಟಿ ಮಾಡಿ ಪರಾರಿಯಾಗಿದ್ದಾರೆ. ಶನಿವಾರ ಬೆಳಗ್ಗೆ 10.30 ರ ಸುಮಾರಿಗೆ ಅಗಮ್ಕುವಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ನಳಂದ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.

ಐವರು ಅಪರಿಚಿತ ದುಷ್ಕರ್ಮಿಗಳು ಉದ್ಯಮಿ ರಮಾಕಾಂತ್ ಪ್ರಸಾದ್ ಪುತ್ರ ಸಂತೋಷ್ ಪ್ರಕಾಶ್ ಅವರ ಮನೆಗೆ ನುಗ್ಗಿದ್ದರು. ದಾಳಿಕೋರರು ಕುಟುಂಬ ಸದಸ್ಯರನ್ನು ಬಂದೂಕು ತೋರಿಸಿ ಸುಮಾರು 1.26 ಕೋಟಿ ರೂ. ಮೌಲ್ಯದ ಆಭರಣಗಳು ಮತ್ತು 1.26 ಲಕ್ಷ ರೂ. ನಗದನ್ನು ದೋಚಿದ್ದಾರೆ.

ದರೋಡೆಕೋರರು ಪರಾರಿಯಾಗುತ್ತಿದ್ದಂತೆ ಮೋಟಾರ್ ಬಿಡಿಭಾಗಗಳ ವ್ಯಾಪಾರ ನಡೆಸುತ್ತಿರುವ ಸಂತೋಷ್ ಪ್ರಕಾಶ್ ಪೊಲೀಸರಿಗೆ ಮಾಹಿತಿ ನೀಡಿದರು. ಪೂರ್ವ ಪಾಟ್ನಾ ಎಸ್ಪಿ ಡಾ. ಕೆ. ರಾಮದಾಸ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆಗೆ ಆಗಮ್ಕುವಾನ್ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿತು.

ಮತ್ತಷ್ಟು ಓದಿ: ನ್ಯಾಮತಿ ಎಸ್​​ಬಿಐನಿಂದ ₹13 ಕೋಟಿ ಮೌಲ್ಯದ ಚಿನ್ನ ದರೋಡೆ ಪ್ರಕರಣ ಭೇದಿಸಿದ ದಾವಣಗೆರೆ ಪೊಲೀಸ್

ಸಾಕ್ಷ್ಯಗಳನ್ನು ಸಂಗ್ರಹಿಸಲು ಮತ್ತು ಅಪರಾಧಿಗಳನ್ನು ಗುರುತಿಸಲು ಸಹಾಯ ಮಾಡಲು ಶ್ವಾನ ದಳ ಮತ್ತು ವಿಧಿವಿಜ್ಞಾನ ತಂಡವನ್ನು ಸಹ ನಿಯೋಜಿಸಲಾಗಿದೆ. ಪ್ರಕಾಶ್ ಅವರ ಲಿಖಿತ ದೂರಿನ ಆಧಾರದ ಮೇಲೆ, ಅಗಮ್ಕುವಾನ್ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ 290/25 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಆರೋಪಿಗಳನ್ನು ಗುರುತಿಸಿ ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖಾಧಿಕಾರಿಗಳು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಸುಳಿವುಗಳಿಗಾಗಿ ಸ್ಥಳೀಯರನ್ನು ಪ್ರಶ್ನಿಸುತ್ತಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ