
ಪಾಟ್ನಾ, ಏಪ್ರಿಲ್ 06: ಪಾಟ್ನಾದಲ್ಲಿ ಹಗಲು ದರೋಡೆ(Robbery) ನಡೆದಿದೆ. ಶಸ್ತ್ರಸಜ್ಜಿತ ದುಷ್ಕರ್ಮಿಗಳು ಉದ್ಯಮಿಯ ಕುಟುಂಬದವರನ್ನು ಒತ್ತೆಯಾಳಾಗಿರಿಸಿಕೊಂಡು 1.26 ಕೋಟ ರೂ. ಲೂಟಿ ಮಾಡಿ ಪರಾರಿಯಾಗಿದ್ದಾರೆ. ಶನಿವಾರ ಬೆಳಗ್ಗೆ 10.30 ರ ಸುಮಾರಿಗೆ ಅಗಮ್ಕುವಾನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ನಳಂದ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ಐವರು ಅಪರಿಚಿತ ದುಷ್ಕರ್ಮಿಗಳು ಉದ್ಯಮಿ ರಮಾಕಾಂತ್ ಪ್ರಸಾದ್ ಪುತ್ರ ಸಂತೋಷ್ ಪ್ರಕಾಶ್ ಅವರ ಮನೆಗೆ ನುಗ್ಗಿದ್ದರು. ದಾಳಿಕೋರರು ಕುಟುಂಬ ಸದಸ್ಯರನ್ನು ಬಂದೂಕು ತೋರಿಸಿ ಸುಮಾರು 1.26 ಕೋಟಿ ರೂ. ಮೌಲ್ಯದ ಆಭರಣಗಳು ಮತ್ತು 1.26 ಲಕ್ಷ ರೂ. ನಗದನ್ನು ದೋಚಿದ್ದಾರೆ.
ದರೋಡೆಕೋರರು ಪರಾರಿಯಾಗುತ್ತಿದ್ದಂತೆ ಮೋಟಾರ್ ಬಿಡಿಭಾಗಗಳ ವ್ಯಾಪಾರ ನಡೆಸುತ್ತಿರುವ ಸಂತೋಷ್ ಪ್ರಕಾಶ್ ಪೊಲೀಸರಿಗೆ ಮಾಹಿತಿ ನೀಡಿದರು. ಪೂರ್ವ ಪಾಟ್ನಾ ಎಸ್ಪಿ ಡಾ. ಕೆ. ರಾಮದಾಸ್ ಸೇರಿದಂತೆ ಹಿರಿಯ ಅಧಿಕಾರಿಗಳ ಜೊತೆಗೆ ಆಗಮ್ಕುವಾನ್ ಪೊಲೀಸ್ ಠಾಣೆಯ ತಂಡವು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿತು.
ಮತ್ತಷ್ಟು ಓದಿ: ನ್ಯಾಮತಿ ಎಸ್ಬಿಐನಿಂದ ₹13 ಕೋಟಿ ಮೌಲ್ಯದ ಚಿನ್ನ ದರೋಡೆ ಪ್ರಕರಣ ಭೇದಿಸಿದ ದಾವಣಗೆರೆ ಪೊಲೀಸ್
ಸಾಕ್ಷ್ಯಗಳನ್ನು ಸಂಗ್ರಹಿಸಲು ಮತ್ತು ಅಪರಾಧಿಗಳನ್ನು ಗುರುತಿಸಲು ಸಹಾಯ ಮಾಡಲು ಶ್ವಾನ ದಳ ಮತ್ತು ವಿಧಿವಿಜ್ಞಾನ ತಂಡವನ್ನು ಸಹ ನಿಯೋಜಿಸಲಾಗಿದೆ. ಪ್ರಕಾಶ್ ಅವರ ಲಿಖಿತ ದೂರಿನ ಆಧಾರದ ಮೇಲೆ, ಅಗಮ್ಕುವಾನ್ ಪೊಲೀಸ್ ಠಾಣೆ ಪ್ರಕರಣ ಸಂಖ್ಯೆ 290/25 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆರೋಪಿಗಳನ್ನು ಗುರುತಿಸಿ ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖಾಧಿಕಾರಿಗಳು ಪ್ರದೇಶದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ಸುಳಿವುಗಳಿಗಾಗಿ ಸ್ಥಳೀಯರನ್ನು ಪ್ರಶ್ನಿಸುತ್ತಿದ್ದಾರೆ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ