ಆಸ್ಪತ್ರೆಯಲ್ಲಿ ಸಾಮೂಹಿಕ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ವೈದ್ಯನ ಖಾಸಗಿ ಅಂಗವನ್ನೇ ಕತ್ತರಿಸಿದ ನರ್ಸ್​

ಬಿಹಾರದ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಯತ್ನ ಜನರನ್ನು ಬೆಚ್ಚಿಬೀಳಿಸಿದೆ. ನರ್ಸ್​ ರಾತ್ರಿ ಮನೆಗೆ ಹೋಗುವ ಸಮಯದಲ್ಲಿ ಆಕೆಯನ್ನು ಎಳೆದೊಯ್ದು ಅತ್ಯಾಚಾರ ನಡೆಸಲು ಆರೋಪಿಗಳು ಪ್ಲ್ಯಾನ್​ ಮಾಡಿದ್ದರು. ಅದರಲ್ಲಿ ಒಬ್ಬ ವೈದ್ಯ ಆ ಆಸ್ಪತ್ರೆಯಲ್ಲೇ ಕೆಲಸ ಮಾಡುತ್ತಿದ್ದ. ಮದ್ಯಪಾನ ಮಾಡಿ ಆಕೆಯ ಮೇಲೆ ಅತ್ಯಾಚಾರವೆಸಗಲು ಯತ್ನಿಸಿದಾಗ ಆಕೆ ಆತನ ಖಾಸಗಿ ಭಾಗವನ್ನು ಬ್ಲೇಡ್​ನಿಂದ ಕೊಯ್ದು ತಪ್ಪಿಸಿಕೊಂಡಿದ್ದಾಳೆ. ಆಕೆಯ ಧೈರ್ಯಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಆಸ್ಪತ್ರೆಯಲ್ಲಿ ಸಾಮೂಹಿಕ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ವೈದ್ಯನ ಖಾಸಗಿ ಅಂಗವನ್ನೇ ಕತ್ತರಿಸಿದ ನರ್ಸ್​
ಆಸ್ಪತ್ರೆImage Credit source: NDTV
Follow us
|

Updated on: Sep 13, 2024 | 8:25 AM

ಇತ್ತೀಚಿನ ದಿನಗಳಲ್ಲಿ ವೈದ್ಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಬಿಹಾರದ ಖಾಸಗಿ ಆಸ್ಪತ್ರೆಯಲ್ಲಿ ಸಾಮೂಹಿಕ ಅತ್ಯಾಚಾರದಿಂದ ತಪ್ಪಿಸಿಕೊಳ್ಳಲು ನರ್ಸ್​ ಒಬ್ಬರು ವೈದ್ಯನ ಖಾಸಗಿ ಅಂಗವನ್ನು ಬ್ಲೇಡ್​ನಿಂದ ಕೊಯ್ದಿರುವ ಘಟನೆ ವರದಿಯಾಗಿದೆ.

ಬಿಹಾರದ ಸಮಷ್ಟಿಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಇತ್ತೀಚೆಗಷ್ಟೇ ಕೋಲ್ಕತ್ತಾದ ಆರ್​ಜಿ ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸರಬೇತಿ ನಿರತ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿತ್ತು, ಇದರಿಂದ ಇಡೀ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ.

ಬಿಹಾರದ ಖಾಸಗಿ ಆಸ್ಪತ್ರೆಯೊಂದರಲ್ಲಿ ನರ್ಸ್ ಮೇಲೆ ಸಾಮೂಹಿಕ ಅತ್ಯಾಚಾರ ಯತ್ನ ನಡೆದಿದೆ. ಅತ್ಯಾಚಾರ ಯತ್ನ ಮಾಡಿದವರಲ್ಲಿ ಒಬ್ಬರು ವೈದ್ಯರಾಗಿದ್ದು, ಸಂಸ್ಥೆಯ ನಿರ್ವಾಹಕರೂ ಆಗಿದ್ದಾರೆ, ನರ್ಸ್​ ಅವರ ಖಾಸಗಿ ಭಾಗವನ್ನು ಬ್ಲೇಡ್​ನಿಂದ ಕೊಯ್ದು ಅಲ್ಲಿಂದ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾಳೆ.

ಮುಸ್ರಿಘರಾರಿ ಪೊಲೀಸ್​ ಠಾಣಾ ವ್ಯಾಪ್ತಿಯ ಗಂಗಾಪುರದ ಆರ್​ಬಿಎಸ್ ಹೆಲ್ತ್​ ಕೇರ್​ ಸೆಂಟರ್​ನಲ್ಲಿ ಬುಧವಾರ ರಾತ್ರಿ ನರ್ಸ್​ ಕೆಲಸ ಮುಗಿಸಿ ಮನೆಗೆ ಹೊರಡುತ್ತಿದ್ದಾಗ, ಆಡಳಿತಾಧಿಕಾರಿ ಡಾ. ಸಂಜಯ್ ಕುಮಾರ್ ಮತ್ತು ಇಬ್ಬರು ಮದ್ಯಪಾನ ಮಾಡಿ ಅತ್ಯಾಚಾರ ಮಾಡಲು ಯತ್ನಿಸಿದ್ದರು.

ಮತ್ತಷ್ಟು ಓದಿ: ಇಬ್ಬರು ಸೇನಾಧಿಕಾರಿಗಳನ್ನು ಥಳಿಸಿ ಅವರ ಸ್ನೇಹಿತೆ ಮೇಲೆ ಸಾಮೂಹಿಕ ಅತ್ಯಾಚಾರ

ಸಂಜಯ್ ಹಾಗೂ ಇತರರ ಹಿಡಿತದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ನರ್ಸ್​ ವೈದ್ಯನ ಗುಪ್ತಾಂಗಕ್ಕೆ ಬ್ಲೇಡ್​ನಿಂದ ಸೀಳಿದ್ದಾರೆ. ಆಸ್ಪತ್ರೆಯ ಹೊರಗಿರುವ ಮೈದಾನದಲ್ಲಿ ಅಡಗಿ ನಂತರ ತಪ್ಪಿಸಿಕೊಂಡು ಪೊಲೀಸರಿಗೆ ಕರೆ ಮಾಡಿದ್ದರು.

ಪೊಲೀಸರ ತಂಡ ಆಸ್ಪತ್ರೆಗೆ ಆಗಮಿಸಿದ್ದು, ನರ್ಸ್​ ಸುರಕ್ಷಿತವಾಗಿದ್ದಾರೆಂದು ತಿಳಿಸಿದ್ದಾರೆ. ವೈದ್ಯ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳನ್ನು ಸುನಿಲ್ ಕುಮಾರ್ ಗುಪ್ತಾ ಹಾಗೂ ಅವಧೇಶ್ ಕುಮಾರ್ ಎಂದು ಗುರುತಿಸಲಾಗಿದೆ.

ನರ್ಸ್​ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸುವ ಮೊದಲು ಮೂವರು ಆಸ್ಪತ್ರೆಯನ್ನು ಒಳಗಿನಿಂದ ಲಾಕ್​ ಮಾಡಿದ್ದರು ಮತ್ತು ಸಿಸಿಟಿವಿ ಕ್ಯಾಮರಾಗಳನ್ನು ಆಫ್ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವೈದ್ಯರ ಖಾಸಗಿ ಅಂಗವನ್ನು ಕತ್ತರಿಸಿದ ಬ್ಲೇಡ್ ಸಹ ಪತ್ತೆಯಾಗಿದೆ, ಸಕಾಲದಲ್ಲಿ ಅಲ್ಲಿಂದ ತಪ್ಪಿಸಿಕೊಂಡು ಹೋಗದೇ ಇದ್ದಿದ್ದರೆ ಆಕೆಗೆ ಭಾರಿ ಅನಾಹುತ ಸಂಭವಿಸಬಹುದಿತ್ತು.

ನರ್ಸ್​ ತೋರಿದ ಧೈರ್ಯ ಶ್ಲಾಘನೀಯವಾದದ್ದು ಎಂದರು. ಅರ್ಧ ಬಾಟಲಿ ಮದ್ಯ, ನರ್ಸ್ ಬಳಸುತ್ತಿದ್ದ ಬ್ಲೇಡ್, ರಕ್ತಸಿಕ್ತ ಬಟ್ಟೆ ಮತ್ತು ಮೂರು ಸೆಲ್‌ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ನರ್ಸ್ ಮೇಲೆ ಹಲ್ಲೆ ಮಾಡಲು ಪ್ರಯತ್ನಿಸುವ ಮೊದಲು ಮೂವರು ವ್ಯಕ್ತಿಗಳು ಮದ್ಯಪಾನ ಮಾಡುತ್ತಿದ್ದರು, ಬಿಹಾರದಲ್ಲಿ ಮದ್ಯ ನಿಷೇಧವಿರುವುದರಿಂದ ಆ ವಿಚಾರದಲ್ಲಿಯೂ ಪ್ರಕರಣ ದಾಖಲಿಸಲಾಗುವುದು ಎಂದು ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ