ಆರ್​ಎಸ್​ಎಸ್​ ಜೊತೆ ಪಿಎಫ್​ಐ ಹೋಲಿಕೆ ಮಾಡಿ ವಿವಾದಕ್ಕೆ ಸಿಲುಕಿದ ಪೊಲೀಸ್ ಅಧಿಕಾರಿ

Lucknow News: "ಆರ್‌ಎಸ್‌ಎಸ್‌ನ ಶಾಖೆಗಳು ಮತ್ತು ಆರ್​ಎಸ್​ಎಸ್​ನಿಂದ ಲಾಠಿ ಬಳಸಲು ತರಬೇತಿ ಇರುವಂತೆಯೇ ದೈಹಿಕ ಶಿಕ್ಷಣದ ನೆಪದಲ್ಲಿ ಪಿಎಫ್‌ಐ ಯುವಕರನ್ನು ತಮ್ಮ ಕೇಂದ್ರಕ್ಕೆ ಜನರನ್ನು ಕರೆದು ಅವರ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದೆ" ಎಂದು ಪಾಟ್ನಾದ ಹಿರಿಯ ಪೊಲೀಸ್ ಅಧಿಕಾರಿ ಮಾನವಜೀತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.

ಆರ್​ಎಸ್​ಎಸ್​ ಜೊತೆ ಪಿಎಫ್​ಐ ಹೋಲಿಕೆ ಮಾಡಿ ವಿವಾದಕ್ಕೆ ಸಿಲುಕಿದ ಪೊಲೀಸ್ ಅಧಿಕಾರಿ
ಮಾನವಜೀತ್ ಸಿಂಗ್ ಧಿಲ್ಲೋನ್
TV9kannada Web Team

| Edited By: Apurva Kumar Balegere

Jul 15, 2022 | 8:50 AM

ಪಾಟ್ನಾ: ಬಿಹಾರದ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಾವು ಪತ್ತೆ ಹಚ್ಚಿದ ಭಯೋತ್ಪಾದನಾ ಘಟಕದ ಕುರಿತು ಹೇಳಿಕೆ ನೀಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಪಿಎಫ್​ಐ ಗುಂಪಿನ ಕಾರ್ಯವೈಖರಿಯನ್ನು ವಿವರಿಸುವಾಗ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾವನ್ನು (PFI) ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಜೊತೆ ಹೋಲಿಕೆ ಮಾಡುವ ಮೂಲಕ ಆ ಪೊಲೀಸ್ ಅಧಿಕಾರಿ ಇದೀಗ ವಿವಾದಕ್ಕೆ ಕಾರಣರಾಗಿದ್ದಾರೆ. ನಿನ್ನೆ ಪಾಟ್ನಾದಲ್ಲಿ (Patna) ಉಗ್ರರ ತಂಡದ ಮೇಲೆ ದಾಳಿ ಮಾಡಿದ್ದ ಪೊಲೀಸರು ಇಬ್ಬರು ಉಗ್ರರನ್ನು ಬಂಧಿಸಿದ್ದರು. ಅಲ್ಲದೆ, ಅಲ್ಲಿ ಪಿಎಫ್​ಐನ 8 ಪುಟಗಳ ಪತ್ರಗಳನ್ನು ವಶಕ್ಕೆ ಪಡೆದಿದ್ದರು.

“ಆರ್‌ಎಸ್‌ಎಸ್‌ನ ಶಾಖೆಗಳು ಮತ್ತು ಲಾಠಿ ಪ್ರಯೋಗಿಸಲು ತರಬೇತಿ ಇರುವಂತೆಯೇ ದೈಹಿಕ ಶಿಕ್ಷಣದ ನೆಪದಲ್ಲಿ ಪಿಎಫ್‌ಐ ಯುವಕರನ್ನು ತಮ್ಮ ಕೇಂದ್ರಕ್ಕೆ ಜನರನ್ನು ಕರೆದು ಅವರ ಸಿದ್ಧಾಂತವನ್ನು ಪ್ರಚಾರ ಮಾಡುತ್ತಿದೆ. ಜನರ ಬ್ರೈನ್‌ವಾಶ್ ಮಾಡಲು ಪ್ರಯತ್ನಿಸುತ್ತಿದೆ” ಎಂದು ಪಾಟ್ನಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಮಾನವಜೀತ್ ಸಿಂಗ್ ಧಿಲ್ಲೋನ್ ಹೇಳಿದ್ದಾರೆ.

ಈ ಹೇಳಿಕೆಯ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಈ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಾಯಕರಿಂದ ಆಕ್ರೋಶ ವ್ಯಕ್ತವಾಗಿದೆ. ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಮುಂದಿನ 48 ಗಂಟೆಗಳ ಒಳಗೆ ಮಾನವಜೀತ್ ಸಿಂಗ್ ಧಿಲ್ಲೋನ್ ಅವರಿಂದ ವಿವರಣೆಯನ್ನು ಪಡೆಯುವಂತೆ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: PM Modi Unveils National Emblem: ನೂತನ ಸಂಸತ್​ ಭವನದ ಮೇಲೆ ನರೇಂದ್ರ ಮೋದಿಯಿಂದ ಬೃಹತ್ ರಾಷ್ಟ್ರ ಲಾಂಛನ ಅನಾವರಣ

“ಪಾಟ್ನಾ ಎಸ್‌ಎಸ್‌ಪಿ ನೀಡಿರುವ ಹೇಳಿಕೆಯನ್ನು ತಕ್ಷಣವೇ ಹಿಂಪಡೆಯಬೇಕು ಮತ್ತು ಅದಕ್ಕಾಗಿ ಕ್ಷಮೆ ಯಾಚಿಸಬೇಕು” ಎಂದು ರಾಜ್ಯಸಭಾ ಸದಸ್ಯ ಮತ್ತು ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ಟ್ವೀಟ್ ಮಾಡಿದ್ದಾರೆ.

ಇದು ಎಸ್‌ಎಸ್‌ಪಿ ತನ್ನ ಮಾನಸಿಕ ಸಮತೋಲನವನ್ನು ಕಳೆದುಕೊಂಡಿರುವುದನ್ನು ತೋರಿಸುತ್ತದೆ. ಆರ್‌ಎಸ್‌ಎಸ್‌ನಂತಹ ರಾಷ್ಟ್ರೀಯತಾವಾದಿ ಸಂಘಟನೆಯನ್ನು ಪಿಎಫ್‌ಐ ಜೊತೆ ಹೇಗೆ ಹೋಲಿಸುತ್ತೀರಿ?’ ಎಂದು ಬಿಜೆಪಿ ಪಕ್ಷದ ಶಾಸಕ ಹರಿಭೂಷಣ್ ಠಾಕೂರ್ ಬಚೌಲ್ ಹೇಳಿದ್ದಾರೆ.

ಬಿಹಾರದ ಪಾಟ್ನಾದಲ್ಲಿ ಶಂಕಿತ ಭಯೋತ್ಪಾದಕರ ತಂಡವನ್ನು ಭೇದಿಸಲಾಗಿದ್ದು, ಇಬ್ಬರು ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಪೊಲೀಸರ ದಾಳಿಯ ವೇಳೆ 8 ಪುಟಗಳ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಇದರಲ್ಲಿ 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಬೇಕೆಂಬುದರ ಬಗ್ಗೆ ಬರೆಯಲಾಗಿದೆ. ಇದುವರೆಗೆ ಮೊಹಮ್ಮದ್ ಜಲಾವುದ್ದೀನ್  ಮತ್ತು ಅತ್ತರ್ ಪರ್ವೇಜ್ ಎಂಬ ಇಬ್ಬರು ಉಗ್ರರನ್ನು ಬಂಧಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ, ಬಂಧಿತರಾಗಿರುವ ಜಲಾವುದ್ದೀನ್ ಜಾರ್ಖಂಡ್​ನ ನಿವೃತ್ತ ಪೊಲೀಸ್ ಅಧಿಕಾರಿಯಾಗಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಈ ಉಗ್ರರ ತಂಡ ಗುರಿಯಾಗಿಸಿಕೊಂಡಿತ್ತು, ಮೋದಿಯವರ ಹತ್ಯೆಗೆ ಸಂಚು ರೂಪಿಸಿತ್ತು ಎನ್ನಲಾಗಿದೆ.

ಇದನ್ನೂ ಓದಿ: ಪಾಟ್ನಾದಲ್ಲಿ ಪ್ರಧಾನಿ ಮೋದಿ ಹತ್ಯೆಗೆ ಪ್ಲಾನ್ ಮಾಡಿದ್ದ ಉಗ್ರರ ಬಂಧನ; 8 ಪುಟಗಳ ಪತ್ರದಲ್ಲಿತ್ತು ಶಾಕಿಂಗ್ ವಿಚಾರ

ಇದನ್ನೂ ಓದಿ

ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಶಂಕಿತರನ್ನು ಬಂಧಿಸಲಾಗಿದೆ. ಬಿಹಾರ ರಾಜಧಾನಿ ಪಾಟ್ನಾದಲ್ಲಿ ಇಬ್ಬರು ಶಂಕಿತರನ್ನು ಬಂಧಿಸಲಾಗಿದೆ. ಜುಲೈ 12ರಂದು ಬಿಹಾರಕ್ಕೆ ಮೋದಿ ಭೇಟಿ ವೇಳೆ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಜುಲೈ 6, 7ರಂದು ಸಂಚು ರೂಪಿಸಲು ಸಭೆ ಕರೆದಿದ್ದರು. ಬಂಧಿತ ಶಂಕಿತರಿಂದ ಪಿಎಫ್​​ಐಗೆ ಸೇರಿದ 25 ಕರಪತ್ರ ವಶಕ್ಕೆ ಪಡೆಯಲಾಗಿದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada