CM Nitish Kumar Resigns: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್​ ಕುಮಾರ್ ರಾಜೀನಾಮೆ

ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

CM Nitish Kumar Resigns: ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್​ ಕುಮಾರ್ ರಾಜೀನಾಮೆ
ನಿತೀಶ್​ ಕುಮಾರ್
Follow us
ನಯನಾ ರಾಜೀವ್
|

Updated on:Jan 28, 2024 | 11:32 AM

ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್(Nitish Kumar)  ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ರಾಜ್ಯಪಾಲರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕಳೆದ ಮೂರು ದಿನಗಳಿಂದ ಬಿಹಾರದಲ್ಲಿ ನಡೆಯುತ್ತಿರುವ ರಾಜಕೀಯ ಗೊಂದಲದ ನಡುವೆ ಸಿಎಂ ನಿತೀಶ್ ಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.ಮಹಾಮೈತ್ರಿಕೂಟ ತೊರೆದು ಇದೀಗ ಎನ್ ಡಿಎ ಸೇರ್ಪಡೆಯಾಗುವ ಮಾಹಿತಿ ಲಭ್ಯವಾಗಿದೆ.

ಭಾನುವಾರ ಅವರು ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇಂದು ಸಂಜೆಯೇ ನಿತೀಶ್ ಕುಮಾರ್ 9ನೇ ಬಾರಿಗೆ ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಜೆಡಿಯು ಶಾಸಕಾಂಗ ಪಕ್ಷದ ಸಭೆಯ ನಂತರ ಅವರು ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದರು. ಇದರೊಂದಿಗೆ ಬಿಹಾರದಲ್ಲಿ ಆರ್‌ಜೆಡಿ, ಜೆಡಿಯು, ಕಾಂಗ್ರೆಸ್ ಮತ್ತು ಎಡಪಕ್ಷಗಳ ಮೈತ್ರಿ ಮುರಿದು ಬಿದ್ದಿದೆ. ಈಗ ನಿತೀಶ್ ಕುಮಾರ್ ಅವರು ಬಿಜೆಪಿ ಬೆಂಬಲದೊಂದಿಗೆ ಸರ್ಕಾರ ರಚನೆಗೆ ಹಕ್ಕು ಮಂಡಿಸಲಿದ್ದಾರೆ.

ಮತ್ತಷ್ಟು ಓದಿ: ಆರ್‌ಜೆಡಿ ಸಚಿವರನ್ನು ವಜಾ ಮಾಡಿ, ಬಿಜೆಪಿ ನಾಯಕರಿಗೆ ನಿತೀಶ್ ಕುಮಾರ್ ಸಂಪುಟದಲ್ಲಿ ಸ್ಥಾನ?

ಹೊಸ ಸರ್ಕಾರದಲ್ಲಿ ನಿತೀಶ್ ಕುಮಾರ್ ಸಿಎಂ ಆಗಿ ಉಳಿಯಲಿದ್ದಾರೆ. ಇವರ ಜೊತೆಗೆ ಇಬ್ಬರು ಬಿಜೆಪಿ ನಾಯಕರು ಉಪ ಮುಖ್ಯಮಂತ್ರಿಯಾಗಲಿದ್ದಾರೆ. ಉಪ ಮುಖ್ಯಮಂತ್ರಿ ಯಾರಾಗುತ್ತಾರೆ ಎಂಬ ಸಸ್ಪೆನ್ಸ್ ಉಳಿದಿದೆ. ಆದರೆ, ಸುಶೀಲ್ ಮೋದಿ ಮತ್ತು ರೇಣು ದೇವಿ ಉಪ ಮುಖ್ಯಮಂತ್ರಿಯಾಗಬಹುದು ಎಂದು ಮೂಲಗಳು ಹೇಳಿವೆ.

ಇಂದು ಸಂಜೆ 4 ಗಂಟೆಗೆ ನೂತನ ಸರ್ಕಾರದಲ್ಲಿ ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ನಿತೀಶ್ ಕುಮಾರ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವುದು ಇದು 9ನೇ ಬಾರಿ. 6 ರಿಂದ 8 ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಬಹುದು ಎಂದು ಮೂಲಗಳು ತಿಳಿಸಿವೆ.

ಲೋಕಸಭೆ ಚುನಾವಣೆಗೂ ಮುನ್ನ ನಿತೀಶ್ ಕುಮಾರ್ ಅವರ ಈ ಹೆಜ್ಜೆ ಇಂಡಿಯಾ ವಿರೋಧ ಪಕ್ಷಗಳ ಮೈತ್ರಿಗೆ ದೊಡ್ಡ ಹೊಡೆತ ಎಂದು ಪರಿಗಣಿಸಲಾಗಿದೆ. ನಿತೀಶ್ ಕುಮಾರ್ ಬಿಜೆಪಿ ಸೇರುವುದರೊಂದಿಗೆ ಲಾಲು ಯಾದವ್ ಅವರ ಪಕ್ಷದ ರಾಷ್ಟ್ರೀಯ ಜನತಾ ದಳದ (ಆರ್‌ಜೆಡಿ) ಹಲವು ಶಾಸಕರು ಸರ್ಕಾರ ರಚನೆಗೆ ಪ್ರಯತ್ನ ನಡೆಸಬೇಕು ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಸರ್ಕಾರ ರಚಿಸಲು 122 ಶಾಸಕರ ಅಗತ್ಯವಿದೆ. ಆರ್‌ಜೆಡಿ 115 ಶಾಸಕರನ್ನು ಹೊಂದಿದೆ.

ಬಿಹಾರದ ದೊಡ್ಡ ಪಕ್ಷ ಆರ್‌ಜೆಡಿ. ಬಿಜೆಪಿ 78, ಜೆಡಿಯು 45 ಮತ್ತು ಎಚ್‌ಎಎಂ ನಾಲ್ಕು ಶಾಸಕರನ್ನು ಹೊಂದಿದೆ. ಈ ಮೂರು ಪಕ್ಷಗಳ ಒಟ್ಟು ಶಾಸಕರ ಸಂಖ್ಯೆ 127. ಸರ್ಕಾರ ರಚನೆಗೆ 122 ಸ್ಥಾನಗಳ ಅಗತ್ಯವಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:18 am, Sun, 28 January 24

‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
‘ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ’ ನೋಡಲು ಜನ ಬರಲಿಲ್ಲ: ಕಾರಣ ತಿಳಿಸಿದ ವಿತರಕ
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಸತ್ತವನು ದಿಢೀರನೆ ಎದ್ದು ಕೂತ ಕತೆ; ಶಾಕಿಂಗ್ ವಿಡಿಯೋ ವೈರಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
ಭಾರತದ ಸ್ಟೀಲ್ ಉದ್ಯಮದಲ್ಲಿ ಹೆಚ್ಚು ಇಂಗಾಲದ ಡೈ ಆಕ್ಸೈಡ್ ಉತ್ಪತ್ತಿ: ಗೋಯಲ್
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
5 ಲಕ್ಷ ರೂಪಾಯಿ ಪಡೆದು ಮೋಸ ಮಾಡಿದ ಸ್ಟಾರ್​ ನಟಿ; ನಿರ್ಮಾಪಕಿ ಆರೋಪ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಶಿಕ್ಷಣ ಸಾರ್ಥಕವಾಗಲು ಮೂರು ಅಂಶಗಳ ಮನನವಾಗಬೇಕು: ಸಿದ್ದರಾಮಯ್ಯ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿ.ಮೀ ಎಳೆದೊಯ್ದ ಕಾರು; ಚಿಮ್ಮಿದ ಬೆಂಕಿ ಕಿಡಿ
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ನ್ಯೂಸ್​​9 ಗ್ಲೋಬಲ್​ ಸಮಿಟ್​ನಲ್ಲಿ ಕರ್ನಾಟಕ-ಜರ್ಮನಿ ನಂಟು: ಸಿಎಂ ಮಾತು
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ಧಾರವಾಡದಲ್ಲಿ ರೈತರೊಂದಿಗೆ ವಿತಂಡವಾದಕ್ಕಿಳಿದ ಸಚಿವ ಸಂತೋಷ್ ಲಾಡ್
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ನೋಟೀಸ್ ಹಿಂಪಡೆಯಲು ಸಿದ್ದರಾಮಯ್ಯ ಮೌಖಿಕ ಆದೇಶ ನೀಡಿದ್ದಾರೆ: ರೆಡ್ಡಿ
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು
ಶೋಭಾ ಶೆಟ್ಟಿಗೆ ಈಗ ಉಗ್ರಂ ಮಂಜು ನೇರ ಟಾರ್ಗೆಟ್​; ಮುಖಕ್ಕೆ ಬಿತ್ತು ಕೆಸರು