AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar Politics: ದೆಹಲಿಯಲ್ಲಿ ಇಂದು ಜೆಪಿ ನಡ್ಡಾ ನೇತೃತ್ವದಲ್ಲಿ ಬಿಹಾರ ಬಿಜೆಪಿ ಕೋರ್ ಕಮಿಟಿ ಸಭೆ

ಈ ಸಭೆಯಲ್ಲಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಇದೇ ವೇಳೆ‌ ಬಿಹಾರದ ಹೊಸ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ.

Bihar Politics: ದೆಹಲಿಯಲ್ಲಿ ಇಂದು ಜೆಪಿ ನಡ್ಡಾ ನೇತೃತ್ವದಲ್ಲಿ ಬಿಹಾರ ಬಿಜೆಪಿ ಕೋರ್ ಕಮಿಟಿ ಸಭೆ
ಜೆಪಿ ನಡ್ಡಾ
TV9 Web
| Updated By: ಸುಷ್ಮಾ ಚಕ್ರೆ|

Updated on: Aug 16, 2022 | 12:10 PM

Share

ನವದೆಹಲಿ: ಬಿಹಾರದಲ್ಲಿ ಜೆಡಿಯು-ಬಿಜೆಪಿ ಸರ್ಕಾರ ಪತನವಾಗಿ ಆರ್​ಜೆಡಿ (RJD)- ಜೆಡಿಯು (JDU) ಮೈತ್ರಿ ಸರ್ಕಾರ ರಚನೆಯಾಗಿದೆ. ಈ ನೂತನ ಸರ್ಕಾರದ ಸಚಿವ ಸಂಪುಟ ಇಂದು ವಿಸ್ತರಣೆಯಾಗಿದೆ. ಈ ಹಿನ್ನೆಲೆಯಲ್ಲಿ ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ (JP Nadda) ನೇತೃತ್ವದಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದೆ. ಬಿಹಾರದ ಬಿಜೆಪಿ ನಾಯಕರೊಂದಿಗೆ ಬಿಹಾರದ ರಾಜಕೀಯ ಬೆಳವಣಿಗೆಗಳ ಬಗ್ಗೆ ಜೆ.ಪಿ. ನಡ್ಡಾ ಇಂದು ಚರ್ಚೆ ನಡೆಸಲಿದ್ದಾರೆ.

ಈ ಸಭೆಯಲ್ಲಿ ಮುಂದಿನ ಕಾರ್ಯತಂತ್ರಗಳ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಇದೇ ವೇಳೆ‌ ಬಿಹಾರದ ಹೊಸ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ಬಗ್ಗೆಯೂ ಚರ್ಚೆ ನಡೆಯಲಿದೆ ಎನ್ನಲಾಗಿದೆ. ಮಹಾಘಟಬಂಧನ್‌ನಲ್ಲಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ಕಾಂಗ್ರೆಸ್ ಮತ್ತು ಎಡಪಕ್ಷಗಳು ಸೇರಿದಂತೆ ಇತರ ಪಕ್ಷಗಳೊಂದಿಗೆ ಜೆಡಿಯು ನಾಯಕ ನಿತೀಶ್ ಕುಮಾರ್ ಕೈಜೋಡಿಸಿ ಸರ್ಕಾರ ರಚಿಸಿದ್ದಾರೆ.

ಇದನ್ನೂ ಓದಿ: Bihar Cabinet: ಬಿಹಾರದಲ್ಲಿ ಇಂದು ಸಂಪುಟ ವಿಸ್ತರಣೆ; ಆರ್​​ಜೆಡಿಗೆ ಸಿಂಹಪಾಲು, ಪ್ರಮುಖ ಖಾತೆಗಳು ನಿತೀಶ್ ಕುಮಾರ್ ತೆಕ್ಕೆಗೆ

ಜೆ.ಪಿ. ನಡ್ಡಾ ಅವರು ಬಿಹಾರದಲ್ಲಿನ ರಾಜಕೀಯ ಬೆಳವಣಿಗೆ ಮತ್ತು ಬಿಜೆಪಿ ಅನುಸರಿಸಬೇಕಾದ ಕಾರ್ಯತಂತ್ರದ ಬಗ್ಗೆ ಚರ್ಚಿಸುವ ಸಾಧ್ಯತೆಯಿದೆ. ಈಗಿನ ಮಹಾಮೈತ್ರಿಕೂಟವು ವಿಧಾನಸಭೆಯಲ್ಲಿ 163 ಸದಸ್ಯರ ಬೆಂಬಲವನ್ನು ಹೊಂದಿದೆ. ಅಸೆಂಬ್ಲಿಯಲ್ಲಿ 4 ಶಾಸಕರನ್ನು ಹೊಂದಿರುವ ಹಿಂದೂಸ್ತಾನಿ ಅವಾಮ್ ಮೋರ್ಚಾ (HAM) ಬೆಂಬಲವನ್ನು ಸಹ ಪಡೆದಿದೆ. ಈ ಮೂಲಕ ಮಹಾಮೈತ್ರಿಕೂಟದ ಶಾಸಕರ ಬಲ 164ಕ್ಕೆ ಏರಿಕೆಯಾಗಿದೆ.

ಲಾಲೂ ಪ್ರಸಾದ್ ಯಾದವ್ ಅವರ ಆರ್‌ಜೆಡಿ, ಕಾಂಗ್ರೆಸ್ ಮತ್ತು ಜಿತನ್ ರಾಮ್ ಮಾಂಝಿ ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಸೇರಿದಂತೆ ಮಹಾಘಟಬಂಧನ್ (ಮಹಾಮೈತ್ರಿಕೂಟ) ಭಾಗವಾಗಿರುವ ವಿವಿಧ ಪಕ್ಷಗಳಿಂದ ಒಟ್ಟು 31 ಸಚಿವರು ಇಂದು ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಪಾಟ್ನಾದ ರಾಜಭವನದಲ್ಲಿ ಇಂದು ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ