ಜೆಡಿಯು-ಬಿಜೆಪಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ಜ.28ರಂದು ನಿತೀಶ್ ಕುಮಾರ್ ಪ್ರಮಾಣವಚನ ಸಾಧ್ಯತೆ
ಕಳೆದ ಕೆಲವು ದಿನಗಳಿಂದ ಬಿಹಾರದಲ್ಲಿ ರಾಜಕೀಯ ವಿದ್ಯಮಾನಗಳು ವೇಗ ಪಡೆಯುತ್ತಿರುವಾಗಲೇ, ದೊಡ್ಡ ಸುದ್ದಿಯೊಂದು ಮುನ್ನೆಲೆಗೆ ಬಂದಿದೆ. ಜನವರಿ 28 ರಂದು ಬಿಹಾರದ ಜನತಾ ದಳ (ಯುನೈಟೆಡ್) ಮತ್ತು ಬಿಜೆಪಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ 24 ಗಂಟೆಗಳು ಬಿಹಾರ ರಾಜಕೀಯಕ್ಕೆ ಅತ್ಯಂತ ಮಹತ್ವದ್ದಾಗಿದೆ. ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಬಹುದು. ನಿತೀಶ್ ಕುಮಾರ್ ಮತ್ತೊಮ್ಮೆ ಭಾರತೀಯ ಜನತಾ ಪಕ್ಷದೊಂದಿಗೆ ಸರ್ಕಾರ ರಚಿಸಬಹುದು
ಕಳೆದ ಕೆಲವು ದಿನಗಳಿಂದ ಬಿಹಾರದಲ್ಲಿ ರಾಜಕೀಯ ವಿದ್ಯಮಾನಗಳು ವೇಗ ಪಡೆಯುತ್ತಿರುವಾಗಲೇ, ದೊಡ್ಡ ಸುದ್ದಿಯೊಂದು ಮುನ್ನೆಲೆಗೆ ಬಂದಿದೆ. ಜನವರಿ 28 ರಂದು ಬಿಹಾರ ಜನತಾ ದಳ (ಯುನೈಟೆಡ್) ಮತ್ತು ಬಿಜೆಪಿ ಮೈತ್ರಿ ಸರ್ಕಾರದ ಮುಖ್ಯಮಂತ್ರಿಯಾಗಿ ನಿತೀಶ್ ಕುಮಾರ್(Nitish Kumar) ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಮುಂದಿನ 24 ಗಂಟೆಗಳು ಬಿಹಾರ ರಾಜಕೀಯಕ್ಕೆ ಅತ್ಯಂತ ಮಹತ್ವದ್ದಾಗಿದೆ. ರಾಜ್ಯದ ಮುಖ್ಯಮಂತ್ರಿ ನಿತೀಶ್ ಕುಮಾರ್ ರಾಜೀನಾಮೆ ನೀಡಬಹುದು. ನಿತೀಶ್ ಕುಮಾರ್ ಮತ್ತೊಮ್ಮೆ ಭಾರತೀಯ ಜನತಾ ಪಕ್ಷದೊಂದಿಗೆ ಸರ್ಕಾರ ರಚಿಸಬಹುದು.
ಜನವರಿ 28 ರಂದು ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಉಪಮುಖ್ಯಮಂತ್ರಿಯಾಗಿ ಬಿಜೆಪಿಯ ಸುಶೀಲ್ ಮೋದಿ ಪ್ರಮಾಣ ವಚನ ಸ್ವೀಕರಿಸಬಹುದು ಎಂದು ಹೇಳಲಾಗುತ್ತಿದೆ. ಬಿಜೆಪಿಗೆ 2 ಉಪಮುಖ್ಯಮಂತ್ರಿ ಸ್ಥಾನಗಳನ್ನು ನೀಡುವ ಸಾಧ್ಯತೆ ಹೆಚ್ಚು ಎಂದು ಮೂಲಗಳು ತಿಳಿಸಿವೆ.
ಮತ್ತೊಂದೆಡೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಪಾಟ್ನಾದ ಮುಖ್ಯಮಂತ್ರಿ ನಿವಾಸದ ಹೊರಗೆ ಜಿಲೇಬಿ ಹಂಚುತ್ತಿರುವುದು ಕಂಡುಬಂದಿತ್ತು. ಮೂಲಗಳ ಪ್ರಕಾರ ಜೆಡಿಯು-ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನಿತೀಶ್ ಕುಮಾರ್ ಮಾತ್ರ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ.
ಮತ್ತಷ್ಟು ಓದಿ: ಇಂಡಿಯಾ ಮೈತ್ರಿಕೂಟದಿಂದ ಹೊರಬಂದು ಬಿಜೆಪಿ ಜತೆ ಕೈ ಜೋಡಿಸಲಿದ್ದಾರೆಯೇ ನಿತೀಶ್ ಕುಮಾರ್?
ಉಪಮುಖ್ಯಮಂತ್ರಿಯಾಗಿ ಸುಶೀಲ್ ಮೋದಿ ಹೆಸರು ಬಹುತೇಕ ಖಚಿತವಾಗಿದೆ. ಮೂಲಗಳ ಪ್ರಕಾರ ಬಿಹಾರದಲ್ಲಿ ಲೋಕಸಭೆ ಜೊತೆಗೆ ವಿಧಾನಸಭೆ ಚುನಾವಣೆ ಇರುವುದಿಲ್ಲ. ಇಂದು ಮಧ್ಯಾಹ್ನ ನಿತೀಶ್ ಕುಮಾರ್ ಅವರು ರಾಜ್ಯಪಾಲ ರಂಜೇಂದ್ರ ಅರ್ಲೇಕರ್ ಅವರನ್ನು ಭೇಟಿ ಮಾಡಲಿದ್ದಾರೆ. ಎಲ್ಲಾ ಜೆಡಿಯು ಶಾಸಕರಿಗೆ ಪಾಟ್ನಾಗೆ ಬರುವಂತೆ ಸೂಚಿಸಲಾಗಿದೆ.
ಬಿಜೆಪಿಯೊಂದಿಗೆ ಹೋಗುವ ಬಗ್ಗೆ ಜೆಡಿಯು ನಿಲುವಿನ ಬಗ್ಗೆ ಪಕ್ಷವು ತನ್ನ ನಿಲುವನ್ನು ಸಾರ್ವಜನಿಕವಾಗಿ ಪ್ರಕಟಿಸಿಲ್ಲ. ಪಾಟ್ನಾದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ನಡುವೆ ಬಿಜೆಪಿಯ ಹಿರಿಯ ನಾಯಕರು ಬಿಹಾರದ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನೆಯಲ್ಲಿ ಸಭೆ ನಡೆದಿದೆ. ಶಾ ನಿವಾಸದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪ. ನಡ್ಡಾ ಕೂಡ ಸೇರಿದ್ದರು. ಸುಮಾರು ಎರಡು ಗಂಟೆಗಳ ಕಾಲ ಸಭೆ ನಡೆದಿತ್ತು. ದರೆ ಈ ಸಭೆಯ ನಂತರ ಯಾವೊಬ್ಬ ನಾಯಕರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಲಿಲ್ಲ.
ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 2:12 pm, Fri, 26 January 24