Bihar Rain: ಬಿಹಾರದಲ್ಲಿ ಬಿರುಗಾಳಿ ಹೊಡೆತಕ್ಕೆ 17 ಜನ ಸಾವು; 4 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ನಿತೀಶ್ ಕುಮಾರ್

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಸಿಡಿಲು ಮತ್ತು ಗುಡುಗು ಸಹಿತ ಮಳೆಯಿಂದ ಸಾವನ್ನಪ್ಪಿದ 17 ಜನರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

Bihar Rain: ಬಿಹಾರದಲ್ಲಿ ಬಿರುಗಾಳಿ ಹೊಡೆತಕ್ಕೆ 17 ಜನ ಸಾವು; 4 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ನಿತೀಶ್ ಕುಮಾರ್
ಮಿಂಚುImage Credit source: DNA
Follow us
TV9 Web
| Updated By: ಸುಷ್ಮಾ ಚಕ್ರೆ

Updated on:Jun 20, 2022 | 9:27 AM

ಬಿಹಾರ: ಬಿಹಾರದಲ್ಲಿ (Bihar Rain) ಭಾರೀ ಮಳೆಯಾಗುತ್ತಿದ್ದು, ಗುಡುಗು, ಮಿಂಚು, ಸಿಡಿಲಿಗೆ ಅಲ್ಲಿನ ಜನ ತತ್ತರಿಸಿದ್ದಾರೆ. ಭಾರೀ ಮಳೆ, ಬಿರುಗಾಳಿಯಿಂದ 17 ಜನರು ಸಾವನ್ನಪ್ಪಿದ್ದಾರೆ. ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ (CM Nitish Kumar) ಸಿಡಿಲು ಮತ್ತು ಗುಡುಗು ಸಹಿತ ಮಳೆಯಿಂದ ಸಾವನ್ನಪ್ಪಿದ 17 ಜನರ ಸಾವಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಮೃತಪಟ್ಟವರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

“ಬಿಹಾರದ ಭಾಗಲ್‌ಪುರದಲ್ಲಿ 6, ವೈಶಾಲಿಯಲ್ಲಿ 3, ಖಗಾರಿಯಾದಲ್ಲಿ 2, ಕತಿಹಾರ್‌ನಲ್ಲಿ 1, ಸಹರ್ಸಾದಲ್ಲಿ 1, ಮಾಧೇಪುರದಲ್ಲಿ 1, ಬಂಕಾದಲ್ಲಿ 2 ಮತ್ತು ಮುಂಗೇರ್‌ನಲ್ಲಿ ಒಬ್ಬರು ಬಿರುಗಾಳಿ ಮತ್ತು ಮಳೆಯ ಹೊಡೆತಕ್ಕೆ ಸಾವನ್ನಪ್ಪಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ನನ್ನ ತೀವ್ರ ಸಂತಾಪಗಳು. ಮೃತರ ಸಂಬಂಧಿಕರಿಗೆ ತಕ್ಷಣವೇ 4 ಲಕ್ಷ ರೂ. ಪರಿಹಾರ ನೀಡಲು ಸೂಚಿಸಲಾಗುವುದು ಎಂದು ಸಿಎಂ ನಿತೀಶ್ ಕುಮಾರ್ ತಿಳಿಸಿದ್ದಾರೆ.

ಬಿಹಾರದಲ್ಲಿ ಪ್ರತಿಕೂಲ ವಾತಾವರಣದಲ್ಲಿ ಜನರು ಸಂಪೂರ್ಣ ಜಾಗರೂಕತೆ ವಹಿಸಬೇಕು. ಗುಡುಗು ಸಹಿತ ಮಳೆಯಾಗದಂತೆ ವಿಪತ್ತು ನಿರ್ವಹಣಾ ಇಲಾಖೆ ನೀಡುವ ಸಲಹೆಗಳನ್ನು ಅನುಸರಿಸಬೇಕು ಎಂದು ಸಿಎಂ ನಿತೀಶ್ ಕುಮಾರ್ ಮನವಿ ಮಾಡಿದರು.

“ಪ್ರತಿಕೂಲ ಹವಾಮಾನದಲ್ಲಿ ಸಂಪೂರ್ಣ ಜಾಗರೂಕತೆ ವಹಿಸಲು ಮತ್ತು ಗುಡುಗು ಸಹಿತ ಮಳೆಯಾಗದಂತೆ ವಿಪತ್ತು ನಿರ್ವಹಣಾ ಇಲಾಖೆಯು ಕಾಲಕಾಲಕ್ಕೆ ನೀಡುವ ಸಲಹೆಗಳನ್ನು ಅನುಸರಿಸಲು ಜನರಲ್ಲಿ ಮನವಿ ಮಾಡುತ್ತಿದ್ದೇವೆ. ಮಳೆಯಲ್ಲಿ ಮನೆಯಲ್ಲಿಯೇ ಇರಿ ಮತ್ತು ಆಪತ್ತಿನ ವಾತಾವರಣದಿಂದ ಸುರಕ್ಷಿತವಾಗಿರಿ” ಎಂದು ಬಿಹಾರದ ಸಿಎಂ ಹೇಳಿದ್ದಾರೆ.

ನೈಋತ್ಯ ಮಾನ್ಸೂನ್ ಗುಜರಾತ್, ಮಧ್ಯಪ್ರದೇಶ, ವಿದರ್ಭದ ಉಳಿದ ಭಾಗಗಳು, ಛತ್ತೀಸ್‌ಗಢದ ಕೆಲವು ಭಾಗಗಳು, ಪಶ್ಚಿಮ ಬಂಗಾಳ, ಜಾರ್ಖಂಡ್ ಮತ್ತು ಬಿಹಾರದ ಕೆಲವು ಭಾಗಗಳಲ್ಲಿ ಇನ್ನೂ ಕೆಲವು ದಿನಗಳ ಕಾಲ ಆರ್ಭಟಿಸುತ್ತದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಇದನ್ನೂ ಓದಿ: ಮಳೆ ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಿಥಿನ್ ಮೃತದೇಹ ಕೆಆರ್ ಪುರಂ ರಾಜಕಾಲುವೆಯಲ್ಲಿ ಪತ್ತೆ

ಮುಂದಿನ ಎರಡು-ಮೂರು ದಿನಗಳಲ್ಲಿ ಉತ್ತರ, ಮಧ್ಯ ಮತ್ತು ಪೂರ್ವ ಭಾರತದಾದ್ಯಂತ ಗುಡುಗು ಸಹಿತ ಚಂಡಮಾರುತದ ಚಟುವಟಿಕೆ ಮುಂದುವರಿಯುವ ಸಾಧ್ಯತೆಯಿದೆ. ಮುಂದಿನ ವಾರದಿಂದ ಉತ್ತರ ಭಾರತಕ್ಕೆ ಮುಂಗಾರು ಪ್ರವೇಶವಾಗಲಿದೆ. ಜೂನ್ 22ರವರೆಗೆ ದೆಹಲಿ, ಚಂಡೀಗಢ, ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜೂನ್ 23ರಿಂದ ಉತ್ತರ ಭಾರತಕ್ಕೆ ಮುಂಗಾರು ಪ್ರವೇಶಿಸಲಿದೆ. ಅಸ್ಸಾಂ, ಮೇಘಾಲಯ ಮುಂತಾದ ಈಶಾನ್ಯ ರಾಜ್ಯಗಳಲ್ಲಿ ಈಗಾಗಲೇ ಭಾರೀ ಮಳೆಯಿಂದ ಪ್ರವಾಹ ಉಂಟಾಗಿದೆ.

ಮುಂದಿನ 2ರಿಂದ 3 ದಿನಗಳಲ್ಲಿ ಉತ್ತರ, ಮಧ್ಯ ಮತ್ತು ಪೂರ್ವ ಭಾರತದಾದ್ಯಂತ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಜೂನ್ 24 ಮತ್ತು 30ರ ನಡುವೆ ದೆಹಲಿ ಮತ್ತು ನೆರೆಯ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ. ಜೂನ್ 22ರಿಂದ ಪಶ್ಚಿಮ ರಾಜ್ಯಗಳಲ್ಲಿ ಬಿಸಿ ಗಾಳಿ ಬೀಸುತ್ತದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:26 am, Mon, 20 June 22

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್