Bihar Rain: ಬಿಹಾರದ ಮಳೆಯಿಂದ 33 ಜನ ಸಾವು; ಅಸ್ಸಾಂನಲ್ಲಿ ವರುಣನ ಆರ್ಭಟಕ್ಕೆ ಸಿಲುಕಿದ 7 ಲಕ್ಷ ಮಂದಿ

| Updated By: ಸುಷ್ಮಾ ಚಕ್ರೆ

Updated on: May 21, 2022 | 8:56 PM

Assam Flood: ಬಿಹಾರದ 16 ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಗೆ 33 ಮಂದಿ ಸಾವನ್ನಪ್ಪಿದ್ದಾರೆ. ಅಸ್ಸಾಂ ರಾಜ್ಯದ 29 ಜಿಲ್ಲೆಗಳಲ್ಲಿ ಸುಮಾರು 7.12 ಲಕ್ಷ ಜನರು ತೊಂದರೆಗೊಳಗಾಗಿದ್ದಾರೆ.

Bihar Rain: ಬಿಹಾರದ ಮಳೆಯಿಂದ 33 ಜನ ಸಾವು; ಅಸ್ಸಾಂನಲ್ಲಿ  ವರುಣನ ಆರ್ಭಟಕ್ಕೆ ಸಿಲುಕಿದ 7 ಲಕ್ಷ ಮಂದಿ
ಬಿಹಾರದಲ್ಲಿ ಮಳೆ
Follow us on

ಬಿಹಾರ: ನಿರಂತರ ಮಳೆ ಮತ್ತು ಪ್ರವಾಹದ ಪರಿಣಾಮವಾಗಿ ಭಾರತದ ಮೂರು ರಾಜ್ಯಗಳಲ್ಲಿ ಭಾರೀ ಹಾನಿಯಾಗಿದೆ. ಬಿಹಾರ, ಅಸ್ಸಾಂ ಮತ್ತು ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದೆ. ಬಿಹಾರದಲ್ಲಿ (Bihar Rains) ಸಿಡಿಲು ಮತ್ತು ಗುಡುಗು ಸಹಿತ ಮಳೆಯಿಂದಾಗಿ 33 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಮೃತರ ಕುಟುಂಬಗಳಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಪರಿಹಾರ ಘೋಷಿಸಿದ್ದಾರೆ. ಪ್ರವಾಹದಿಂದ ಅಸ್ಸಾಂ ಹೆಚ್ಚು ಹಾನಿಗೊಳಗಾಗಿದೆ. ಅಸ್ಸಾಂ (Assam Rain) ರಾಜ್ಯ ವಿಪತ್ತು ನಿರ್ವಹಣೆಯ ಪ್ರಕಾರ, ಪ್ರವಾಹ ಮತ್ತು ಭೂಕುಸಿತದಲ್ಲಿ ಸತ್ತವರ ಸಂಖ್ಯೆ 14ಕ್ಕೆ ಏರಿದೆ. ಅಸ್ಸಾಂ ರಾಜ್ಯದ 29 ಜಿಲ್ಲೆಗಳಲ್ಲಿ ಸುಮಾರು 7.12 ಲಕ್ಷ ಜನರು ತೊಂದರೆಗೊಳಗಾಗಿದ್ದಾರೆ.

ಬಿಹಾರ:
ಬಿಹಾರದ 16 ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಮಳೆಗೆ 33 ಮಂದಿ ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಕುಟುಂಬಗಳಿಗೆ 4 ಲಕ್ಷ ರೂ. ಪರಿಹಾರ ನೀಡಲು ಸೂಚನೆಗಳನ್ನು ನೀಡಲಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ತಿಳಿಸಿದ್ದಾರೆ. ಮನೆಯಲ್ಲಿಯೇ ಇರಿ ಮತ್ತು ಸುರಕ್ಷಿತವಾಗಿರಿ ಎಂದು ಅವರು ಸೂಚಿಸಿದ್ದಾರೆ. ಸಾವನ್ನಪ್ಪಿದ 33 ಜನರ ಕುರಿತು ಪ್ರಧಾನಿ ನರೇಂದ್ರ ಮೋದಿ ಕೂಡ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ:  Kerala Rain: ಭಾರೀ ಮಳೆಯಿಂದ ಕೇರಳದ 10 ಜಿಲ್ಲೆಗಳಲ್ಲಿ ಹಳದಿ ಅಲರ್ಟ್​ ಘೋಷಣೆ; 2 ಡ್ಯಾಂಗಳ ಗೇಟ್ ಓಪನ್

ಬಿಹಾರದ ಹಲವು ಜಿಲ್ಲೆಗಳಲ್ಲಿ ಗುಡುಗು ಮತ್ತು ಸಿಡಿಲಿನ ಘಟನೆಗಳಲ್ಲಿ ಅನೇಕ ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಗಳಿಗೆ ಈ ಅಪಾರ ನಷ್ಟವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ. ರಾಜ್ಯ ಸರ್ಕಾರದ ಮೇಲ್ವಿಚಾರಣೆಯಲ್ಲಿರುವ ಸ್ಥಳೀಯ ಆಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.

ಅಸ್ಸಾಂ:
ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ನಾಗಾಂವ್ ಜಿಲ್ಲೆಯಲ್ಲಿ 3.36 ಲಕ್ಷಕ್ಕೂ ಹೆಚ್ಚು ಜನರು ಹಾನಿಗೊಳಗಾಗಿದ್ದಾರೆ. ಕ್ಯಾಚಾರ್ ಜಿಲ್ಲೆಯಲ್ಲಿ 1.66 ಲಕ್ಷ, ಹೊಜೈನಲ್ಲಿ 1.11 ಲಕ್ಷ ಮತ್ತು ದರ್ರಾಂಗ್ ಜಿಲ್ಲೆಯಲ್ಲಿ 52,709 ಜನರು ಹಾನಿಗೊಳಗಾಗಿದ್ದಾರೆ. ಕ್ಯಾಚಾರ್, ಲಖಿಂಪುರ ಮತ್ತು ನಾಗಾಂವ್ ಜಿಲ್ಲೆಗಳಲ್ಲಿ ಪ್ರವಾಹದಲ್ಲಿ ಮುಳುಗಿ ಇಬ್ಬರು ಮಕ್ಕಳು ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ